Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ...

ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಕ್ರಮ: ಶಾಸಕಿ ಕನೀಝ್ ಫಾತಿಮಾ

ವಾರ್ತಾಭಾರತಿವಾರ್ತಾಭಾರತಿ3 Sept 2018 6:43 PM IST
share
ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಕ್ರಮ: ಶಾಸಕಿ ಕನೀಝ್ ಫಾತಿಮಾ

ಬೆಂಗಳೂರು, ಸೆ.3: ರಾಜ್ಯ ಸರಕಾರವು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನಾಗಿ ನನ್ನನ್ನು ನೇಮಕ ಮಾಡಿದ್ದು, ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಕ್ರಮ ವಹಿಸುವುದಾಗಿ ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಅವರಿಗೆ ತಲುಪಿಸುವುದು, ಅವರ ಆರೋಗ್ಯ, ಶಿಕ್ಷಣದ ಪ್ರಗತಿಗೆ ಶ್ರಮಿಸುವುದಾಗಿ ಹೇಳಿದರು.

ನನ್ನ ಪತಿ ಮಾಜಿ ಸಚಿವ ಖಮರುಲ್ ಇಸ್ಲಾಮ್ ಅವರ ರಾಜಕೀಯ ಹೋರಾಟವನ್ನು ಸುಮಾರು 35 ವರ್ಷಗಳ ಕಾಲ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರ ನಿಧನದಿಂದ ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. ಈ ಬಾರಿ ನಡೆದ ವಿಧಾನಸಭಾ ಚುನಾವಣೆಯೂ ನನ್ನ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು ಎಂದು ಅವರು ತಿಳಿಸಿದರು.

ನನ್ನ ಮತಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 4 ಕೋಟಿ ರೂ.ಗಳ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಆದ್ಯತೆ ನೀಡಲಾಗಿದೆ ಎಂದು ಕನೀಝ್ ಫಾತಿಮಾ ಹೇಳಿದರು. 1988ರಲ್ಲಿ ಖಮರುಲ್ ಇಸ್ಲಾಮ್ ಶಾಸಕರಾಗಿದ್ದಾಗ ಬೆಣ್ಣೆತೋರದಿಂದ ಪೈಪ್‌ಲೈನ್ ಮೂಲಕ ಗುಲ್ಬರ್ಗ ನಗರಕ್ಕೆ ಕುಡಿಯುವ ನೀರು ಪೂರೈಸಿದ್ದರು. ಈ ಪೈಪ್‌ಗಳಲ್ಲಿ ನೀರಿನ ಸೋರಿಕೆಯಾಗುತ್ತಿದ್ದು, ಅದನ್ನು ತಡೆಯಲು 17-18 ಕೋಟಿ ರೂ.ಗಳ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಕನೀಝ್ ಫಾತಿಮಾ ಹೇಳಿದರು.

ಒಳಚರಂಡಿ ವ್ಯವಸ್ಥೆಗಾಗಿ ಮೀಸಲಿಟ್ಟಿದ್ದ 12.36 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಈ ಯೋಜನೆಗೆ ಬಳಸಲಾಗುವುದು. ಉಳಿದ ಹಣವನ್ನು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರ ಇತ್ತೀಚೆಗಷ್ಟೇ 100 ದಿನ ಪೂರೈಸಿದೆ. ಇದರಲ್ಲಿ ಎರಡು ತಿಂಗಳು ವಿಧಾನಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲೂ ವಿಳಂಬವಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು ಎಂದು ಕನೀಝ್ ಫಾತಿಮಾ ಹೇಳಿದರು.

ಗುಲ್ಬರ್ಗದಲ್ಲಿ ಹಜ್‌ ಭವನ ನಿರ್ಮಾಣ ಮಾಡಲು 5 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ಹಜ್‌ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಕೋರಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಝಮೀರ್‌ ಅಹ್ಮದ್‌ ಖಾನ್‌ಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ಹಜ್‌ ಭವನ ವರ್ಷದ ಎಲ್ಲ ದಿನಗಳಲ್ಲಿ ಸಕ್ರಿಯವಾಗಿ ಚಟುವಟಿಕೆಗಳಿಂದ ಕೂಡಿರಬೇಕು ಎಂಬುದು ನಮ್ಮ ಬಯಕೆ. ಆದುದರಿಂದ, ಹಜ್ ಯಾತ್ರೆಯ ಸಂದರ್ಭ ಹೊರತುಪಡಿಸಿ ಬೇರೆ ಸಮಯದಲ್ಲಿ ಕೌಶಲ್ಯಾಭಿವೃದ್ಧಿ, ಐಎಎಸ್, ಕೆಎಎಸ್ ತರಬೇತಿ ಕೇಂದ್ರವನ್ನು ಈ ಭವನದಲ್ಲಿ ಆರಂಭಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕನೀಝ್ ಫಾತಿಮಾ ಹೇಳಿದರು.

ಗುಲ್ಬರ್ಗ ನಗರವು ಶೈಕ್ಷಣಿಕ ನಗರವಾಗಿ ಅಭಿವೃದ್ಧಿ ಹೊಂದಿರುವುದರಿಂದ ನಮ್ಮ ಭಾಗಕ್ಕೆ ಬಿಇಡಿ, ಡಿಇಡಿ, ಪಿಯುಸಿ ಕಾಲೇಜು, ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಸತಿ ಶಾಲೆ ಜೊತೆಗೆ ಬಿಸಿಎಂ ವಸತಿ ನಿಲಯಗಳನ್ನು ಮಂಜೂರು ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X