Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುಜರಾತಿನಲ್ಲಿ ಹಾರ್ದಿಕ್ ಪಟೇಲ್ ಉಪವಾಸ...

ಗುಜರಾತಿನಲ್ಲಿ ಹಾರ್ದಿಕ್ ಪಟೇಲ್ ಉಪವಾಸ ಸತ್ಯಾಗ್ರಹ: ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ3 Sept 2018 7:49 PM IST
share
ಗುಜರಾತಿನಲ್ಲಿ ಹಾರ್ದಿಕ್ ಪಟೇಲ್ ಉಪವಾಸ ಸತ್ಯಾಗ್ರಹ: ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು, ಸೆ.3: ಗುಜರಾತಿನಲ್ಲಿ ನಡೆಯುತ್ತಿರುವ ಪಾಟೀದಾರ್ ಸಮುದಾಯದ ಪ್ರತಿಭಟನೆಗಳು ಹಾಗೂ ಯುವ ಮುಖಂಡ ಹಾರ್ದಿಕ್ ಪಟೇಲ್ ಉಪವಾಸ ಸತ್ಯಾಗ್ರಹ ಕುರಿತು ಪ್ರಧಾನಿ ನರೇಂದ್ರ ಮೋದಿಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗುಜರಾತಿನಲ್ಲಿ ನಡೆಯುತ್ತಿರುವ ಪಾಟೀದಾರ್ ಸಮುದಾಯದ ಪ್ರತಿಭಟನೆಗಳನ್ನು ಮಾಧ್ಯಮಗಳ ಮೂಲಕ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇದೇ ಸಮುದಾಯದ ಯುವ ಮುಖಂಡ ಹಾರ್ದಿಕ್ ಪಟೇಲ್ ಸುಮಾರು 3 ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೀಗ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಅವರಿಗೆ ಕೇವಲ 25 ವರ್ಷಗಳು. ಈ ಚಿಕ್ಕ ವಯಸ್ಸಿನಲ್ಲೆ ಅವರು ಒಂದು ಸಮಾಜದ ಹಿತಕೋಸ್ಕರ ಹಗಲು ರಾತ್ರಿ ಹೋರಾಟವನ್ನು ಮಾಡುತ್ತಿದ್ದಾರೆ. ಅದರಿಂದ ಅವರ ಆರೋಗ್ಯದ ಬಗ್ಗೆ ಗಮನಹರಿಸಿ ಮತ್ತು ಆತನ ಸಮಾಜಮುಖಿ ಕಾರ್ಯವನ್ನು ಮನಗಂಡು ಕೇಂದ್ರ ಸರಕಾರ ಹಾಗೂ ಅಲ್ಲಿನ ರಾಜ್ಯ ಸರಕಾರ ಅದರ ಕಡೆ ಗಮನ ಹರಿಸಬೇಕು ಎಂದು ದೇವೇಗೌಡ ಮನವಿ ಮಾಡಿದ್ದಾರೆ.

1996ರಲ್ಲಿ ನಾನು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜಸ್ತಾನ ರಾಜ್ಯದ ಜಾಟ್ ಸಮುದಾಯದವರು ಆರ್ಥಿಕವಾಗಿ ಬಹಳ ಹಿಂದುಳಿದ ಸಮುದಾಯವಾಗಿದ್ದು, ಅವರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಅದರಂತೆ, ನಾನು ಒಂದು ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ ಸೂಕ್ತ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೆ ಎಂದು ಅವರು ಹೇಳಿದ್ದಾರೆ. ಅದರಂತೆ, ಆಯೋಗವು ಅಧ್ಯಯನ ನಡೆಸಿ ಜಾಟ್ ಸಮುದಾಯದವರು ಎಲ್ಲ ಕ್ಷೇತ್ರಗಳಲ್ಲೂ ಬಹಳ ಹಿಂದುಳಿದಿರುವುದರಿಂದ ಆ ಸಮುದಾಯವನ್ನು ಒಬಿಸಿಗೆ ಸೇರಿಸಬಹುದೆಂದು ವರದಿ ಸಲ್ಲಿಸಿತು. ಆದರ ಆಧಾರದ ಮೇಲೆ ನಾನು ಜಾಟ್ ಸಮುದಾಯವನ್ನು ಒಬಿಸಿಗೆ ಸೇರಿಸಿದೆ ಎಂದು ದೇವೇಗೌಡ ತಿಳಿಸಿದ್ದಾರೆ.

ನಮ್ಮ ಸರಕಾರದ ಆದೇಶವನ್ನು ನ್ಯಾಯಾಲಯ ತಡೆಹಿಡಿಯಿತು. ನಂತರ ನ್ಯಾಯಾಲಯದಲ್ಲಿ ನಾವು ಸೂಕ್ತವಾದ ವರದಿ ನೀಡಿ ಜಾಟ್ ಸಮುದಾಯವನ್ನು ಒಬಿಸಿಗೆ ಸೇರಿಸುವಲ್ಲಿ ಯಶಸ್ವಿಯಾದೆವು. ಇದೇ ಮಾದರಿಯಲ್ಲಿ ನೀವು ಪಾಟೀದಾರ್ ಸಮುದಾಯದವರ ಬೇಡಿಕೆಯನ್ನು ಪರಿಗಣಿಸಿ ಒಂದು ಒಬಿಸಿ ಆಯೋಗ ನೇಮಿಸಿ ಅದು ನೀಡುವ ವರದಿಯನ್ನು ಜಾರಿ ಮಾಡಬೇಕೆಂದು ದೇವೇಗೌಡ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X