Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜನಸಾಗರದ ಮಧ್ಯೆ ನಡೆದ ಶ್ರೀಕೃಷ್ಣ...

ಉಡುಪಿ: ಜನಸಾಗರದ ಮಧ್ಯೆ ನಡೆದ ಶ್ರೀಕೃಷ್ಣ ಲೀಲೋತ್ಸವ

ವಾರ್ತಾಭಾರತಿವಾರ್ತಾಭಾರತಿ3 Sept 2018 9:53 PM IST
share
ಉಡುಪಿ: ಜನಸಾಗರದ ಮಧ್ಯೆ ನಡೆದ ಶ್ರೀಕೃಷ್ಣ ಲೀಲೋತ್ಸವ

ಉಡುಪಿ, ಸೆ.3: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಕಳೆದೊಂದು ವಾರದಿಂದ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು ಇಂದು ಆಕರ್ಷಕ ಶ್ರೀಕೃಷ್ಣ ಲೀಲೋತ್ಸವ- ವಿಟ್ಲಪಿಂಡಿಯೊಂದಿಗೆ ಸಂಪನ್ನಗೊಂಡಿತು.

ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶೃದ್ಧೆ, ಭಕ್ತಿಗಳಿಂದ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಹಾಗೂ ಅದಕ್ಕೆ ಸಂಬಂಧಿಸಿದ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ವೀಕ್ಷಿಸಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಇಂದು ನಡೆದ ಶ್ರೀಕೃಷ್ಣ ಲೀಲೋತ್ಸವಕ್ಕೆ ಪೂರ್ವಭಾವಿಯಾಗಿ ಕಳೆದೊಂದು ವಾರದಿಂದ ಶ್ರೀಕೃಷ್ಣ ಮಠ ಹಾಗೂ ರಾಜಾಂಗಣದಲ್ಲಿ ಹಲವು ಕಾರ್ಯಕ್ರಮ ಗಳು ಮತ್ತು ಸ್ಪರ್ಧೆಗಳು ನಡೆದಿದ್ದವು. ಇಂದು ನಂದಗೋಕುಲದಲ್ಲಿ ಬಾಲಕೃಷ್ಣನ ತುಂಟತನವನ್ನು ನೆನಪಿಸುವ ವಿಶಿಷ್ಟವಾದ ವಿಟ್ಲಪಿಂಡಿ (ಮೊಸರು ಕುಡಿಕೆ) ಆಟದಲ್ಲಿ ಜನಸಮೂಹ ಭಾಗಿಯಾಗಿ ಖುಷಿಪಟ್ಟಿತು.

ರವಿವಾರ ಮಧ್ಯರಾತ್ರಿ 11:48ಕ್ಕೆ ಪರ್ಯಾಯ ಪಲಿಮಾರುಶ್ರೀಗಳು ಗರ್ಭಗುಡಿಯಲ್ಲಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಹಾಗೂ ಹೊರಗೆ ತೀರ್ಥ ಮಂಟಪದ ಬಳಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು. ಅವರೊಂದಿಗೆ ಉಪಸ್ಥಿತರಿದ್ದ ಉಳಿದ ಸ್ವಾಮೀಜಿಗಳು ಸರದಿಯಂತೆ ಅರ್ಘ್ಯ ಪ್ರದಾನ ಮಾಡಿದ ಬಳಿಕ ನೆರೆದ ಭಕ್ತಾದಿಗಳಿಗೆ ಅರ್ಘ್ಯ ಬಿಡಲು ಅವಕಾಶ ನೀಡಲಾಯಿತು.

ಶೋಭಾ ಯಾತ್ರೆ : ಇಂದು ಅಪರಾಹ್ಣ 3 ಗಂಟೆ ಸುಮಾರಿಗೆ ವಿಟ್ಲಪಿಂಡಿ ಉತ್ಸವ ಆರಂಭಗೊಂಡಿತು. ಶ್ರೀಕೃಷ್ಣ ಲೀಲೋತ್ಸವದ ವೈಭವದ ಶೋಭಾ ಯಾತ್ರೆಯಲ್ಲಿ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅಲ್ಲದೇ ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ಶ್ರೀವಿದ್ಯಾ ಸಾರ ತೀರ್ಥ ಸ್ವಾಮೀಜಿ ಪಾಲ್ಗೊಂಡರು.

ಈ ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯಿ (ಮಣ್ಣಿನಲ್ಲಿ ತಯಾರಿಸಿದ ನೀಲಿ ಬಣ್ಣದ ಶ್ರೀಕೃಷ್ಣನ ಮೂರ್ತಿ) ಮೂರ್ತಿಯನ್ನು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ಇದರೊಂದಿಗೆ ನವರತ್ನ ರಥದಲ್ಲಿ ಅನಂತೇಶ್ವರ, ಚಂದ್ರವೌಳೀಶ್ವರ ಉತ್ಸವ ಮೂರ್ತಿಯನಿ್ನರಿಸಿ ಮೆರವಣಿಗೆಯಲ್ಲಿ ತರಲಾಯಿತು.

ಈ ಸಂದರ್ಭದಲ್ಲಿ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಸಲುವಾಗಿ ಮಣ್ಣಿನ ಮಡಕೆಯಲ್ಲಿ ಮೊಸರು, ಹಾಲು, ಓಕುಳಿಗಳನ್ನು ತುಂಬಿ ರಥಬೀದಿಯ ಸುತ್ತಲೂ ವಿಶೇಷವಾಗಿ ನಿರ್ಮಿಸಿದ 13 ಗುರ್ಜಿಗಳಿಗೆ ಅವುಗಳನ್ನು ಕಟ್ಟಿ ಯಾದವ ವೇಷಧಾರಿಗಳಾದ ಉಡುಪಿಯ ಗೊಲ್ಲರು ಉದ್ದನೆಯ ಕೋಲು ಗಳಿಂದ ಮಡಕೆಗಳನ್ನು ಒಡೆಯುವ ಆಟವನ್ನು ಆಡಲಾಯಿತು. ಇದನ್ನು ಮೊಸರು ಕುಡಿಕೆ ಎಂದು ಕರೆಯಲಾಗುತ್ತದೆ. ಇದು ಕೃಷ್ಣನಿಗೆ ಅತ್ಯಂತ ಪ್ರಿುದ ಆಟವೆಂದು ಜನರ ನಂಬಿಕೆಯಾಗಿದೆ.

ಈ ಆಟವನ್ನು ರಥಬೀದಿಯ ಸುತ್ತಲೂ ಆಡಿದ ನಂತರ ಮೆರವಣಿಗೆಯ ಕೊನೆಯಲ್ಲಿ ಚಿನ್ನದ ರಥದಲ್ಲಿರಿಸಿದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸುವುದರೊಂದಿಗೆ ಈ ಬಾರಿಯ ಕೃಷ್ಣ ಜನ್ಮಾ್ಟಮಿ ವಿಧಿಗಳು ಸಂಪನ್ನಗೊಂಡವು.

ಬಳಿಕ ರಥಬೀದಿಯ ಅನೇಕ ಕಡೆಗಳಲ್ಲಿ, ಮಠ ಆಸುಪಾಸಿನಲ್ಲಿ ಹಾಕಲಾದ ವೇದಿಕೆಯಲ್ಲಿ ಹುಲಿ ವೇಷಗಳು ಹಾಗೂ ಇತರ ವೇಷಗಳು ವಿಶೇಷ ಪ್ರದರ್ಶನ ನೀಡಿದವು. ಇಡೀ ವಿಟ್ಲಪಿಂಡಿ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಈ ಬಾರಿ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಸೇರಿದ ಸಾವಿರಾರು ಮಂದಿ ಇಂದು ಅವರನ್ನು ಹಲವು ಸಂದರ್ಭಗಳಲ್ಲಿ ಸ್ಮರಿಸಿಕೊಂಡರು.

ಅದಕ್ಕೆ ಪೂರಕವೆಂಬಂತೆ ಈ ಬಾರಿ ವೇಷಧಾರಿಗಳ ಸಂಖ್ಯೆ ಭಾರೀ ಕಡಿಮೆ ಇತ್ತು. ಹುಲಿವೇಷ ಹಾಗೂ ಉತ್ತರ ಕರ್ನಾಟಕ ಮೂಲದ ಮಕ್ಕಳು ವೇಷ ಧರಿಸಿದ್ದನ್ನು ಬಿಟ್ಟರೆ ಉಳಿದ ವೇಷಗಳು ತೀರಾ ವಿರಳವಾಗಿದ್ದವು.

ಸೋಮವಾರ ಬೆಳಗಿನಿಂದಲೇ ರಾಜಾಂಗಣ ಸೇರಿದಂತೆ ಮಠದ ವಿವಿದೆಡೆ ಗಳಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ರಾಜಾಂಗಣದಲ್ಲಿ ನಡೆದ ಸಂತರ್ಪಣೆಯಲ್ಲಿ ಸಾವಿರಾರು ಮಂದಿ ಸರದಿ ಸಾಲಿನಲ್ಲಿ ನಿಂತು ಪ್ರಸಾದ ಸ್ವೀಕರಿಸಿದರು. ಅಲ್ಲದೇ ಕೃಷ್ಣನಿಗೆ ಕಳೆದ ರಾತ್ರಿ ಅರ್ಪಿಸಿದ ಉಂಡೆ ಮತ್ತು ಚಕ್ಕುಲಿಗಳನ್ನು ಅಲ್ಲಲ್ಲಿ ಭಕ್ತರಿಗೆ ಹಂಚಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X