ಸೆ.4: ‘ಕೃಷಿ ಪತ್ರಿಕೋದ್ಯಮ’ ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಸೆ.3: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ ಸರಕಾರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕೃಷಿಕರ ಕೈಗೆ ಲೇಖನಿ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಾಗೂ ‘ಕೃಷಿ ಪತ್ರಿಕೋದ್ಯಮ’ ಪುಸ್ತಕ ಬಿಡುಗಡೆ ಸಮಾರಂಭ ಇಂದು ನಡೆಯಲಿದೆ.
ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜು ಗ್ರಂಥಾಲಯ ಪಕ್ಕದಲ್ಲಿರುವ ಸಿಬ್ಬಂದಿ ತರಬೇತಿ ಘಟಕದಲ್ಲಿ ಹಮ್ಮಿಕೊಂಡಿದೆ. ಕೃಷಿ ಇಲಾಖೆಯ ನಿರ್ದೇಶಕ ಡಾ. ಬಿ.ವೈ.ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಈಶ್ವರ್ ದೈತೋಟ, ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಂ.ಎಸ್.ನಟರಾಜು ಸೇರಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





