Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ ದಾಖಲೆ ಮುರಿದ ಕೊಹ್ಲಿ; ಟೆಸ್ಟ್...

ಧೋನಿ ದಾಖಲೆ ಮುರಿದ ಕೊಹ್ಲಿ; ಟೆಸ್ಟ್ ನಾಯಕನಾಗಿ 4,000 ರನ್

ವಾರ್ತಾಭಾರತಿವಾರ್ತಾಭಾರತಿ3 Sept 2018 11:55 PM IST
share
ಧೋನಿ ದಾಖಲೆ ಮುರಿದ ಕೊಹ್ಲಿ; ಟೆಸ್ಟ್ ನಾಯಕನಾಗಿ 4,000 ರನ್

ಲಂಡನ್,ಸೆ.3: ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ 4,000 ರನ್ ಗಳಿಸಿದ ಭಾರತದ ಮೊದಲ ನಾಯಕನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸೌತಾಂಪ್ಟನ್‌ನಲ್ಲಿ ರವಿವಾರ ಕೊನೆಗೊಂಡ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಕೊಹ್ಲಿ ಈ ಮೈಲುಗಲ್ಲು ತಲುಪಿದ್ದಾರೆ.

 ಟೆಸ್ಟ್ ನಾಯಕನಾಗಿ 4,000 ರನ್ ಪೂರೈಸಲು ಕೊಹ್ಲಿಗೆ 5 ಪಂದ್ಯಗಳ ಟೆಸ್ಟ್ ಸರಣಿಗೆ ಮೊದಲು 544 ರನ್ ಅಗತ್ಯವಿತ್ತು. 29ರ ಹರೆಯದ ಕೊಹ್ಲಿ 2 ಶತಕ ಹಾಗೂ 3 ಅರ್ಧಶತಕಗಳ ಸಹಿತ ಸರಣಿಯಲ್ಲಿ ಒಟ್ಟು 544 ರನ್ ಗಳಿಸುವ ಮೂಲಕ 4 ಸಾವಿರ ರನ್ ಪೂರೈಸಿದರು. ಈ ಮೂಲಕ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಮುರಿದಿದ್ದಾರೆ.

ಭಾರತವನ್ನು 60 ಟೆಸ್ಟ್ ಪಂದ್ಯಗಳಲ್ಲಿ ನಾಯಕನಾಗಿ ಮುನ್ನಡೆಸಿರುವ ಧೋನಿ 3,454 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕ ಹಾಗೂ 24 ಅರ್ಧಶತಕಗಳಿವೆ.

ಟೆಸ್ಟ್‌ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ನಾಯಕರ ಪಟ್ಟಿಯಲ್ಲಿ ಭಾರತದ ಬ್ಯಾಟಿಂಗ್ ದಂತಕತೆ ಸುನೀಲ್ ಗವಾಸ್ಕರ್(3,449)3ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟು 1,500 ರನ್ ಗಳಿಸಿದ ಭಾರತದ ಆರನೇ ದಾಂಡಿಗನಾಗಿದ್ದಾರೆ. ಬ್ಯಾಟಿಂಗ್ ಸೂಪರ್‌ಸ್ಟಾರ್ ಸಚಿನ್ ತೆಂಡುಲ್ಕರ್ ಇಂಗ್ಲೆಂಡ್ ವಿರುದ್ಧ 2535 ರನ್ ಗಳಿಸಿದ್ದಾರೆ. ತೆಂಡುಲ್ಕರ್ 51.73ರ ಸರಾಸರಿಯಲ್ಲಿ 7 ಶತಕ ಹಾಗೂ 13 ಅರ್ಧಶತಕ ದಾಖಲಿಸಿದ್ದಾರೆ. ತೆಂಡುಲ್ಕರ್‌ರಲ್ಲದೆ, ಸುನೀಲ್ ಗವಾಸ್ಕರ್(2,483), ರಾಹುಲ್ ದ್ರಾವಿಡ್(1,950), ಜಿ.ವಿಶ್ವನಾಥ್(1880) ಹಾಗೂ ದಿಲೀಪ್ ವೆಂಗ್‌ಸರ್ಕಾರ್(1589)ಇಂಗ್ಲೆಂಡ್ ವಿರುದ್ಧ 1,500ಕ್ಕೂ ಅಧಿಕ ರನ್ ಗಳಿಸಿದ್ದಾರೆ.

ಕೊಹ್ಲಿ ವಿದೇಶಿ ನೆಲದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ನಾಯಕನಾಗಿದ್ದಾರೆ. ಈ ದಾಖಲೆಯು ಭಾರತದ ಮಾಜಿ ನಾಯಕ ಸೌರವ್ ಗಂಗುಲಿ(1,693)ಹೆಸರಲ್ಲಿತ್ತು. ಕೊಹ್ಲಿ ಈ ಮೈಲುಗಲ್ಲು ತಲುಪಲು 19 ಟೆಸ್ಟ್‌ಗಳನ್ನು ಆಡಿದ್ದರೆ, ಗಂಗುಲಿ 28 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.

ಧೋನಿ(30 ಟೆಸ್ಟ್,1,591),ಅಝರುದ್ದೀನ್(27 ಟೆಸ್ಟ್, 1,517) ಹಾಗೂ ರಾಹುಲ್ ದ್ರಾವಿಡ್(17 ಟೆಸ್ಟ್, 1,219)3ನೇ,4ನೇ ಹಾಗೂ 5ನೇ ಸ್ಥಾನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X