Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯೋತ್ಸವದ ವೇಳೆ ರಾಸಾಯನಿಕ ಎರಚಿದ...

ವಿಜಯೋತ್ಸವದ ವೇಳೆ ರಾಸಾಯನಿಕ ಎರಚಿದ ಪ್ರಕರಣ ಉದ್ದೇಶಪೂರ್ವಕವಲ್ಲ: ತುಮಕೂರು ಎಸ್.ಪಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ4 Sept 2018 7:58 PM IST
share
ವಿಜಯೋತ್ಸವದ ವೇಳೆ ರಾಸಾಯನಿಕ ಎರಚಿದ ಪ್ರಕರಣ ಉದ್ದೇಶಪೂರ್ವಕವಲ್ಲ: ತುಮಕೂರು ಎಸ್.ಪಿ ಸ್ಪಷ್ಟನೆ

ತುಮಕೂರು, ಸೆ.4: ತುಮಕೂರು ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದ ನಂತರ 16ನೇ ವಾರ್ಡ್‍ನಿಂದ ಜಯಗಳಿಸಿದ ಇನಾಯತುಲ್ಲಾ ಖಾನ್ ಮತ್ತು ಅವರ ಬೆಂಬಲಿಗರು ಇಲ್ಲಿನ ಬಾರ್‍ಲೈನ್ ರಸ್ತೆಯಲ್ಲಿ ಸಂಭ್ರಮಾಚಾರಣೆ ಮಾಡುತ್ತಿದ್ದಾಗ ರಾಸಾಯನಿಕ ವಸ್ತುವಿನಿಂದ ಗುಂಪಿನಲ್ಲಿದ್ದವರಿಗೆ ಗಾಯವಾಗಿರುವ ಘಟನೆ ಉದ್ದೇಶಪೂರ್ವಕವಲ್ಲ. ಅರಿವಿಲ್ಲದೆ ಆಗಿರುವ ಆಕಸ್ಮಿಕ ಘಟನೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ದಿವ್ಯಾಗೋಪಿನಾಥ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 16ನೇ ವಾರ್ಡ್ ವ್ಯಾಪ್ತಿಗೆ ಸೇರಿದ ಕೋತಿತೋಪಿನಿಂದ ಗೆದ್ದ ಅಭ್ಯರ್ಥಿಯೊಂದಿಗೆ ಕಾರ್ಯಕರ್ತರು ವಿಜಯೋತ್ಸವದೊಂದಿಗೆ ಬಾರ್‍ಲೈನ್‍ನ 3ನೇ ಕ್ರಾಸ್‍ಗೆ ಬಂದಾಗ ವ್ಯಕ್ತಿಯೊಬ್ಬ ಪ್ಲಾಸ್ಟಿಕ್ ಬಾಟಲಿಯಿಂದ ದ್ರಾವಣವನ್ನು ಗುಂಪಿನ ಮೇಲೆ ಎರಚಿದಾಗ ಕೆಲವರಿಗೆ ಗಾಯಗಳಾಗಿದ್ದು, ಇದನ್ನು ಆ್ಯಸಿಡ್ ದಾಳಿ ಎಂದು ತಪ್ಪಾಗಿ ಬಿಂಬಿಸಲಾಗಿತ್ತು. ಗೆದ್ದ ಅಭ್ಯರ್ಥಿಯ ಅಪ್ರಾಪ್ತ ಬೆಂಬಲಿಗನೊಬ್ಬ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಮನೆಯ ಕಿಟಕಿಯಲ್ಲಿ ಕಂಡ ಹಸಿರು ಬಣ್ಣದ ಪ್ಲಾಸ್ಟಿಕ್ ಬಾಟಲಿಯನ್ನು ತೆಗೆದುಕೊಂಡು, ಅದರಲ್ಲಿದ್ದ ಸ್ವಲ್ಪ ದ್ರಾವಣದ ಜೊತೆಗೆ ನೀರು ಮತ್ತು ನೀಲಿ ಬಣ್ಣವನ್ನು ಬೆರೆಸಿ ತನ್ನ ತಲೆಯ ಮೇಲೆ ತಿರುಗಿಸಿದಾಗ ಆ ನೀರು ಗುಂಪಿನ ಮೇಲೆ ಬಿದ್ದಿದ್ದು, ಈ ವೇಳೆ ಗುಂಪಿನಲ್ಲಿದ್ದವರ ಜೊತೆ ಬಾಲಕನೂ ಗಾಯಗೊಂಡಿದ್ದಾನೆ ಎಂದರು.

ಸದರಿ ಬಾಟಲಿಯಲ್ಲಿ ಟಾಯ್ಲೆಟ್ ತೊಳೆಯುವ ಆ್ಯಸಿಡ್ ಇದ್ದು, ಇದರ ಅರಿವು ಇಲ್ಲದ ಬಾಲಕ ತನ್ನಿಬ್ಬರು ಗೆಳೆಯರ ಜೊತೆ ಅದಕ್ಕೆ ನೀರು ಮತ್ತು ಬಣ್ಣ ಹಾಕಿ ಸಂಭ್ರಮಾಚಾರಿಸಿದಾಗ ಈ ಅವಘಡ ಸಂಭವಿಸಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿದ ಘಟನೆಯಲ್ಲ ಎಂಬುದು ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಸ್ಪಷ್ಟಪಡಿಸಿದರು.

ನಗರ ಡಿವೈಎಸ್ಪಿ ಕೆ.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ನಗರ ಪಿಎಸ್‍ಐ ವಿಜಯಲಕ್ಷ್ಮಿ, ಅಪರಾಧ ವಿಭಾಗ ಪಿಎಸ್‍ಐ ಸಿ.ಆರ್.ಭಾಸ್ಕರ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಮೆರವಣಿಗೆಯ ದೃಶ್ಯಾವಳಿ ಇರುವ ವಿಡಿಯೋವನ್ನು ಆಧರಿಸಿ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದರು.

ಬಾಲ ಅಪರಾಧ ಕಾಯ್ದೆ ಅನುಸಾರ ಸದರಿ ಅಪ್ರಾಪ್ತ ಹುಡುಗನ ಹೆಸರನ್ನು ಬಹಿರಂಗ ಪಡಿಸುತ್ತಿಲ್ಲ ಎಂದ ಅವರು, ಈ ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಈ ಘಟನೆಗೆ ಕಾರಣವಾಗಿರುವ ದ್ರಾವಣವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಅದರ ವರದಿ ಬಂದ ನಂತರ ಸದರಿ ಬಾಟಲಿಯಲ್ಲಿದ್ದ ದ್ರಾವಣ ಯಾವುದು ಎಂಬುದು ಪತ್ತೆಯಾಗಲಿದೆ ಎಂದರು.

ಹೆಚ್ಚುವರಿ ಎಸ್ಪಿ ಡಾ.ಶೋಭಾರಾಣಿ ಮತ್ತು ಇತರೆ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X