Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರ ಪಟ್ಟಿಯಲ್ಲಿನ ಗೊಂದಲವೇ ಬಿಜೆಪಿಗೆ...

ಮತದಾರರ ಪಟ್ಟಿಯಲ್ಲಿನ ಗೊಂದಲವೇ ಬಿಜೆಪಿಗೆ ಗೆಲುವಿಗೆ ಅಡ್ಡಿ: ಶಾಸಕ ಜ್ಯೋತಿಗಣೇಶ್

ಸ್ಥಳೀಯ ಸಂಸ್ಥೆಗಳ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ4 Sept 2018 9:10 PM IST
share
ಮತದಾರರ ಪಟ್ಟಿಯಲ್ಲಿನ ಗೊಂದಲವೇ ಬಿಜೆಪಿಗೆ ಗೆಲುವಿಗೆ ಅಡ್ಡಿ: ಶಾಸಕ ಜ್ಯೋತಿಗಣೇಶ್

ತುಮಕೂರು,ಸೆ.04: ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಮೇಲೆ ಪಾಲಿಕೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಬಿಜೆಪಿ ಕಳೆದ ಭಾರಿಗಿಂತ ಮೂರುಪಟ್ಟು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು, ಮತದಾರರಪಟ್ಟಿಯಲ್ಲಿನ ಕೆಲವೊಂದು ಲೋಪದೋಷಗಳಿಂದ ಇನ್ನೂ ಕೆಲವು ವಾರ್ಡುಗಳಲ್ಲಿ ಗೆಲುವಿಗೆ ಹಿನ್ನಡೆಯಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ಕೆಲ ಅಧಿಕಾರಿಗಳ ಲೋಪದಿಂದಾಗಿ ನಗರದ ಬಹುತೇಕ ವಾರ್ಡ್‍ಗಳಲ್ಲಿನ ಮತದಾರರ ಪಟ್ಟಿಯಲ್ಲಿ ಸತ್ತವರು ಹೆಸರು ಇದ್ದು, ಬದುಕಿವರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದರು.

ವಾರ್ಡ್ ಮರು ವಿಂಗಡಣೆಯಿಂದಾಗಿ ಬಹುತೇಕ ಮತದಾರರ ಹೆಸರುಗಳು ಒಂದು ವಾರ್ಡ್‍ನಿಂದ ಇನ್ನೊಂದು ವಾರ್ಡ್‍ಗೆ ವರ್ಗಾವಣೆಯಾಗಿದೆ. ಇದಕ್ಕೆ ಚುನಾವಣಾ ಆಯೋಗದ ವೈಫಲ್ಯವೇ ಕಾರಣ ಎಂದ ಅವರು, ಮತದಾರರ ಪಟ್ಟಿಯಲ್ಲಿ ಲೋಪ ಉಂಟಾಗಿ ಮತದಾರರನ್ನು ಗೊಂದಲಕ್ಕೀಡು ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.   

ಕಳೆದ 25 ವರ್ಷಗಳಿಂದ ವಾಸ ಇರುವವರ ಹೆಸರುಗಳನ್ನು ಕ್ಷೇತ್ರ ಮರುವಿಂಗಡಣೆಯಾದ ಬಳಿಕ ಮತಪಟ್ಟಿಯಿಂದ ಕೈ ಬಿಡಲಾಗಿದೆ. ಆದರೆ ಮೃತಪಟ್ಟಿರುವವರ ಹೆಸರುಗಳು ಮಾತ್ರ ಹಾಗೆಯೇ ಉಳಿದಿವೆ. ಇದಕ್ಕೆ ಆಯಾ ಬೂತ್ ಮಟ್ಟದ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಪ್ರಮುಖ ಕಾರಣವಾಗಿದೆ. ಹಾಗಾಗಿ ಅಂಥ ಅಧಿಕಾರಿಗಳನ್ನು ಪತ್ತೆಹಚ್ಚಿ ಪಟ್ಟಿ ಮಾಡುತ್ತಿದ್ದು, ಅವರುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. 

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2.56 ಲಕ್ಷ ಮತದಾರರು ಇದ್ದರು. ಆದರೆ ಮಹಾನಗರ ಪಾಲಿಕೆ ಚುನಾವಣೆಯ ಮತಪಟ್ಟಿಯಲ್ಲಿ 2.46 ಲಕ್ಷ ಮತದಾರರು ಮಾತ್ರ ಇದ್ದು, ಉಳಿದ 10 ಸಾವಿರ ಮತದಾರರು ಹೆಸರುಗಳೇ ಮಾಯವಾಗಿವೆ. ತುಮಕೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ 33 ವಾರ್ಡ್‍ಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಈ ಪೈಕಿ 12 ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿರುವ ನಗರದ ಜನತೆಗೆ ಹಾಗೂ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ತುಮಕೂರು ಸ್ಮಾರ್ಟ್ ಸಿಟಿಯಾಗುತ್ತಿದೆ. ಸ್ಮಾರ್ಟ್‍ಸಿಟಿಯ ಅಭಿವೃದ್ಧಿಗೆ ಗೆದ್ದ ಸದಸ್ಯರೊಂದಿಗೆ ಸೋತಿರುವ ಸದಸ್ಯರುಗಳೂ ಶ್ರಮಿಸಬೇಕು. ಶಾಸಕನಾಗಿರುವ ನಾನು ಸದಾ ಎಲ್ಲರೊಂದಿಗೆ ಕೈಜೋಡಿಸುತ್ತೇನೆ ಎಂದರು.

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು ಎಂಬ ಕೆಲವರು ಷಡ್ಯಂತ್ರ ರೂಪಿಸಿದ್ದರು. ಹಾಗಾಗಿ 12 ಸ್ಥಾನಗಳಿಗಷ್ಟೇ ಸೀಮಿತವಾಗಬೇಕಾಯಿತು. ಜತೆಗೆ ಚುನಾವಣಾ ದಿನಾಂಕ ಘೋಷಣೆ ದಿಢೀರೆಂದು ಆಗಿದ್ದರಿಂದ ತನಗೂ ಎಲ್ಲ ವಾರ್ಡ್‍ಗಳಿಗೆ ಭೇಟಿ ನೀಡಲು ಸಮಯಾವಕಾಶದ ಅಭಾವ ಎದುರಾಯಿತು. ಹಾಗಾಗಿ ಮತ್ತಷ್ಟು ಸೀಟುಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ನಗರಾಧ್ಯಕ್ಷ ಹಾಗೂ ಪಾಲಿಕೆ ನೂತನ ಸದಸ್ಯ ಸಿ.ಎನ್. ರಮೇಶ್, ನೂತನ ಪಾಲಿಕೆ ಸದಸ್ಯರಾದ ಹೆಚ್. ಮಲ್ಲಿಕಾರ್ಜುನಯ್ಯ, ನಳಿನ ಇಂದ್ರಕುಮಾರ್, ಮಾಜಿ ಸದಸ್ಯ ಬಾವಿಕಟ್ಟೆ ನಾಗಣ್ಣ, ಹೆಬ್ಬಾಕ ರವೀಶ್, ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X