Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು: ಹ್ಯುಮಾನಿಟೇರಿಯನ್ ರಿಲೀಫ್...

ಕೊಡಗು: ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯಿಂದ 650 ಕ್ಕೂ ಅಧಿಕ ಕುಟುಂಬಗಳಿಗೆ ನೆರವಿನ ಹಸ್ತ

ವಾರ್ತಾಭಾರತಿವಾರ್ತಾಭಾರತಿ4 Sept 2018 11:39 PM IST
share
ಕೊಡಗು: ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯಿಂದ 650 ಕ್ಕೂ ಅಧಿಕ ಕುಟುಂಬಗಳಿಗೆ ನೆರವಿನ ಹಸ್ತ

ಮಡಿಕೇರಿ, ಸೆ.4 : ಪ್ರಕೃತಿ ವಿಕೋಪದಿಂದ ನೆಲೆ ಕಳೆದುಕೊಂಡಿರುವ ಕೊಡಗಿನ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುತ್ತಾ ಸಾಮಾಜಿಕ ಕಳಕಳಿಯನ್ನು ಮೆರೆಯುತ್ತಿರುವ ಜಮಾಅತೆ ಇಸ್ಲಾಮೀ ಹಿಂದ್‍ನ ಸಮಾಜಸೇವಾ ವಿಭಾಗ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ 650 ಕ್ಕೂ ಅಧಿಕ ಕುಟುಂಬಗಳ ನೋವಿಗೆ ಸ್ಪಂದಿಸಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ಜಿಲ್ಲೆಯಲ್ಲಿ ಅದರಲ್ಲೂ ಮಡಿಕೇರಿ ತಾಲೂಕಿನಲ್ಲಿ ಜಲಪ್ರಳಯ ಹಾಗೂ ಭೂಕುಸಿತ ಉಂಟಾಗಿ ಸಾರ್ವಜನಿಕರ ಆಸ್ತಿ-ಪಾಸ್ತಿ ನಾಶವಾಗಿದ್ದು, ಜೀವಹಾನಿಯೂ ಉಂಟಾಗಿದೆ. ಹೆಚ್.ಆರ್.ಎಸ್‍ನ ಕಾರ್ಯಕರ್ತರು ಈಗಾಗಲೇ ಎಲ್ಲಾ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಮೂಲಕ ನೊಂದವರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು. 

ಮಡಿಕೇರಿಯ ಕಾರುಣ್ಯ ಸೆಂಟರ್ ನಲ್ಲಿ ಕೊಡಗು ರಿಲೀಫ್ ಸೆಲ್ ಸ್ಥಾಪಿಸಿ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. 
ಪರಿಹಾರ ಕೇಂದ್ರಗಳಿಗೆ ಹೊರತಾಗಿ ಕೆಲಸವಿಲ್ಲದೇ ಕಷ್ಟ ಪಡುವ ಸುಮಾರು 650 ಕುಟುಂಬಗಳಿಗೆ ಆಹಾರ ಪರಿಕರ ವಿತರಿಸಲಾಗಿದೆ. ಪ್ರವಾಹಕ್ಕೆ ತುತ್ತಾದ ಸುಮಾರು 20 ಮನೆಗಳನ್ನು ಶುಚಿಗೊಳಿಸಲಾಗಿದೆ. ಓರ್ವ ವಿಧವಾ ಸಂತ್ರಸ್ತೆಗೆ 1.50ರೂ. ಮೌಲ್ಯದ ಮನೆಯನ್ನು ನಗರದ ತ್ಯಾಗರಾಜ ಬಡಾವಣೆಯಲ್ಲಿ ನೀಡಲಾಗಿದೆ. ಓರ್ವ ವೆಲ್ಡರ್‍ಗೆ ಜೀವನ ನಿರ್ವಹಣೆಗೋಸ್ಕರ ವೆಲ್ಡಿಂಗ್ ಯಂತ್ರವನ್ನು ವಿತರಿಸಲಾಗಿದೆ. ಎರಡು ಪರಿಹಾರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ನಡೆಸಲಾಗಿದೆ. ಒಬ್ಬ ಸಂತ್ರಸ್ತನಿಗೆ ಜೀವನ ನಿರ್ವಹಣೆಗಾಗಿ ಆಟೋರಿಕ್ಷಾ ಒಂದನ್ನು ನೀಡಲಾಗಿದೆ. 

ಇನ್ನು ಮುಂದೆಯೂ ಹೆಚ್.ಆರ್.ಎಸ್. ನಿಂದ ಸೇವಾ ಕಾರ್ಯಗಳು ಮುಂದುವರಿಯಲಿದೆ ಎಂದು ತಿಳಿಸಿದ ಪ್ರಮುಖರು ಪ್ರವಾಹದ ನಡುವೆ ಸಮಾಜದಲ್ಲಿದ್ದ ಅಸಹಿಷ್ಣುತೆ ಕೊಚ್ಚಿ ಹೋಗಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು. ಸಂಕಷ್ಟದ ಸಂದರ್ಭದಲ್ಲಿ ಜಾತಿ ಭೇದ ಮರೆತು, ಒಬ್ಬರಿಗೊಬ್ಬರು ಸಹಾಯ ಹಸ್ತ ಚಾಚುವ ಮೂಲಕ ಕೋಮು ಸೌಹಾರ್ದತೆಯನ್ನು ಪ್ರದರ್ಶಿಸಿರುವುದು ಮಾನವೀಯತೆಯ ಆಳವನ್ನು ಸಾಕ್ಷೀಕರಿಸಿದೆ ಎಂದು ಅಭಿಪ್ರಾಯಪಟ್ಟರು.

ಈ ಸೌಹಾರ್ದತೆಯ ವಾತಾವರಣ ಎಲ್ಲಾ ಸಂದರ್ಭದಲ್ಲೂ ಪ್ರಜ್ವಲಿಸಬೇಕೆಂದು ಕರೆ ನೀಡಿದರು. ಅತಿವೃಷ್ಟಿ ಹಾನಿ ಪ್ರದೇಶಗಳ ಪರಿಹಾರೋಪಾಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗಾಗಿ ಈಗಾಗಲೇ ಮನವಿ ಪತ್ರವನ್ನು ಸಲ್ಲಿಸಲಾಗಿದ್ದು, ಕೆಲವು ಸಲಹೆಗಳನ್ನು ನೀಡಿರುವುದಾಗಿ ಪ್ರಮುಖರು ವಿವರಿಸಿದರು. ಹಾನಿಗೊಳಗಾಗಿರುವ ಪ್ರಮುಖ ಹೆದ್ದಾರಿಗಳನ್ನು ಶೀಘ್ರ ದುರಸ್ತಿಗೊಳಿಸಿ ಜನರ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಸಂಪಾಜೆಯವರೆಗೆ ಲಘು ವಾಹನ ಸಂಚರಿಸಲು ತಾತ್ಕಾಲಿಕ ರಸ್ತೆಯ ವ್ಯವಸ್ಥೆ ಕಲ್ಪಿಸಬೇಕು. ನಿರಾಶ್ರಿತರ ಕೇಂದ್ರಗಳಲ್ಲಿರುವವರಿಗೆ ಆಪ್ತ ಸಮಾಲೋಚನೆ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು. ಸಂಪೂರ್ಣ ಮನೆ ಕಳೆದುಕೊಂಡವರಿಗೆ ಕನಿಷ್ಟ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಬೇಕು. ಮನೆ ಕಳೆದು ಕೊಂಡವರಿಗೆ ಪುನರ್ವಸತಿ ಕಲ್ಪಿಸುವಾಗ ಆಯಾ ಗ್ರಾಮಗಳನ್ನೇ ಪರಿಗಣಿಸಬೇಕು. ಆಸ್ತಿಯ, ಶಿಕ್ಷಣದ, ಆರ್ಥಿಕ ವ್ಯವಹಾರದ, ಉದ್ಯೋಗದ, ಆರೋಗ್ಯದ ಬಗೆಗಿನ ದಾಖಲಾತಿಗಳನ್ನು ಕಳೆದುಕೊಂಡವರಿಗೆ ಅವನ್ನು ಮರಳಿ ಪಡೆಯುವ ಬಗ್ಗೆ ಮಾಹಿತಿಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸುವುದು ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸುವುದು. ದಾಖಲೆಗಳ ಅಭಾವದಲ್ಲಿ ಸರಕಾರದ ಸೌಲಭ್ಯಗಳನ್ನು ಕೋರುವ ಫಲಾನುಭವಿಗಳಿಗೆ ನಿಬಂಧನೆಗಳನ್ನು ಸಡಿಲಗೊಳಿಸಬೇಕು.

ನಿರಾಶ್ರಿತರ ಕೇಂದ್ರಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಹೋಗುತ್ತಿರುವ ಮಕ್ಕಳಿಗೆ ಆಪ್ತ ಸಮಾಲೋಚನೆ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ಶಾಲಾ-ಕಾಲೇಜುಗಳಲ್ಲಿ ನಡೆಯಬೇಕು. ಸಂತ್ರಸ್ತರ ಮಕ್ಕಳು ವಿದ್ಯಾಭ್ಯಾಸ ಪಡೆಯುವ ವೃತ್ತಿಪರ ಕಾಲೇಜುಗಳೂ ಸೇರಿ ಸಂಬಂಧಪಟ್ಟ ಸಂಸ್ಥೆಗಳಿಗೆ ಶುಲ್ಕ ವಿನಾಯಿತಿ ಬಗ್ಗೆ ನಿರ್ದೇಶಿಸಬೇಕು. ಎಲ್ಲಾ ಬಗೆಯ ವಿದ್ಯಾರ್ಥಿ ವೇತನಗಳಿಗೆ ವೇತನಗಳಿಗೆ ನಿಗದಿ ಪಡಿಸಿರುವ ಅವಧಿಯನ್ನು ವಿಸ್ತರಣೆಗೊಳಿಸಲು ಸರಕಾರದ ಗಮನಹರಿಸಬೇಕು. ಎಸೆಸೆಲ್ಸಿ, ಪಿಯುಸಿ. ಮುಂತಾದ ಸಾರ್ವಜನಿಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ನಿರಾಯಾಸವಾಗಿ ಪರೀಕ್ಷೆಗೆ ಕುಳಿತುಕೊಳ್ಳುವಂತೆ ಪರೀಕ್ಷಾ ಮಂಡಳಿಗಳಿಗೆ ತಿಳಿಯಪಡಿಸುವುದು.

ಧರ್ಮಸ್ಥಳ ಗ್ರಾಮೀಣ ಹಣಕಾಸು ಸಂಸ್ಥೆಗಳಂತಹ ಸ್ವ-ಸಹಾಯ ಸಂಸ್ಥೆಗಳಿಂದ, ಬ್ಯಾಂಕ್, ಹಣಕಾಸು ಸಂಸ್ಥೆಗಳಿಂದ ಸಾರ್ವಜನಿಕರು ಪಡೆದಿರುವ ಸಾಲಗಳ ವಸೂಲಾತಿ ಬಗ್ಗೆ ನಿಬಂಧನೆ ಸಡಿಲಗೊಳಿಸುವುದು. ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಿ ಅಸಲಿನ ಮರುಪಾವತಿಗೆ ಕನಿಷ್ಟ ಒಂದು ವರ್ಷದ ಅವಧಿ ನೀಡಬೇಕಾಗಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು.

ಉದ್ಯೋಗ ಕಳೆದುಕೊಂಡವರಿಗೆ ಮರಳಿ ಉದ್ಯೋಗ ಕಲ್ಪಿಸಬೇಕು. ಜಿಲ್ಲೆಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳ ನಿರ್ಮಾಣದ ಮೇಲೆ ನಿಯಂತ್ರಣ ಹೇರಬೇಕು ಮತ್ತು ಈ ಬಗೆಗಿನ ಪರವಾನಗಿ ಮೇಲೆ ಷರತ್ತುಗಳನ್ನು ಪಾಲಿಸುತ್ತಿದ್ದಾರೆಯೇ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು.
ಕೊಡಗನ್ನು ಪ್ರವಾಸಿ ತಾಣವಾಗಿಯೇ ಉಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ವಿನಾಕಾರಣ ಹಾಳು ಬಿಟ್ಟಿರುವ ಕೃಷಿಭೂಮಿ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಕೃಷಿಭೂಮಿಯಲ್ಲಿ ಕೃಷಿ ಕಾರ್ಯ ನಡೆಸುವಂತೆ ಜನರನ್ನು ಪ್ರೋತ್ಸಾಹಿಸಬೇಕು. ಕೃಷಿಭೂಮಿಯನ್ನು ವಾಣಿಜ್ಯ ಉಪಯೋಗಕ್ಕಾಗಿ ಪರಿವರ್ತಿಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಮನವಿಯಲ್ಲಿ ತಿಳಿಸಿರುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಮರ್ಕಡ, ವಲಯ ಮೇಲ್ವಿಚಾರಕ ಯು.ಅಬ್ದುಸ್ಸಲಾಂ , ಜಿಲ್ಲಾ ಮೇಲ್ವಿಚಾರಕ ಸಿ.ಹೆಚ್.ಅಫ್ಸರ್, ಜಿಲ್ಲಾ ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರೆಹೆಮಾನ್, ಪ್ರಮುಖರಾದ ಜಿ.ಹೆಚ್.ಮಹಮ್ಮದ್ ಹನೀಫ್ ಹಾಗೂ ಮುಹಮ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X