Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರ ಸಾಗಾಟಕ್ಕೆ ಅವಕಾಶ: ಸೂಕ್ತ...

ಮರ ಸಾಗಾಟಕ್ಕೆ ಅವಕಾಶ: ಸೂಕ್ತ ನಿರ್ಧಾರಕ್ಕೆ ಕಾಲಾವಕಾಶ ಕೋರಿದ ಕೊಡಗು ಜಿಲ್ಲಾಡಳಿತ

ವಾರ್ತಾಭಾರತಿವಾರ್ತಾಭಾರತಿ4 Sept 2018 11:55 PM IST
share
ಮರ ಸಾಗಾಟಕ್ಕೆ ಅವಕಾಶ: ಸೂಕ್ತ ನಿರ್ಧಾರಕ್ಕೆ ಕಾಲಾವಕಾಶ ಕೋರಿದ ಕೊಡಗು ಜಿಲ್ಲಾಡಳಿತ

ಮಡಿಕೇರಿ ಸೆ.4 : ಪ್ರಕೃತಿ ವಿಕೋಪದಿಂದ ಕೊಡಗಿನ ಬೆಳೆಗಾರರು ಸಂಕಷ್ಟದಲ್ಲಿರುವುದರಿಂದ ಮರದ ದಿಮ್ಮಿಗಳ ಸಾಗಾಟಕ್ಕೆ ಹೇರಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ಮರ ವ್ಯಾಪಾರಿಗಳನ್ನೊಳಗೊಂಡ ನಿಯೋಗ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ.

ಮಂಗಳವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿಯ ಕುರಿತು ಮನವರಿಕೆ ಮಾಡುವುದರೊಂದಿಗೆ ಮರ ಸಾಗಾಟಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು, ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಒಂದುವೇಳೆ ಜಿಲ್ಲಾಧಿಕಾರಿಗಳು ಸ್ಪಂದಿಸದಿದ್ದರೆ ಮುಂದೆ ಸರಕಾರದ ಮಟ್ಟದಲ್ಲಿ ವ್ಯವಹರಿಸಿ ನಿರ್ಬಂಧವನ್ನು ತೆಗೆಸಬಹುದೆಂದು ಸಲಹೆ ಮಾಡಿದರು. ಬೆಳೆಗಾರರು, ಜನಪ್ರತಿನಿಧಿಗಳು, ಮರ ವ್ಯಾಪಾರಿಗಳು ಹಾಗೂ ಕಾರ್ಮಿಕ ಮುಖಂಡರನ್ನೊಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರು ಈ ಸಂದರ್ಭ ಮರ ಸಾಗಾಟ ನಿರ್ಬಂಧದಿಂದ ಜಿಲ್ಲೆಯ ಜನಜೀವನದ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ಗಮನಸೆಳೆದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾಗರರು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಭಾರೀ ಗಾಳಿಗೆ ಸಿಲುಕಿ ತೋಟದ ಮರಗಳು ನೆಲಕ್ಕುರುಳಿವೆ. ಇವುಗಳ ಮಾರಾಟದಿಂದ ಮಾತ್ರ ಬೆಳೆಗಾರರು ಆರ್ಥಿಕ ಸ್ಥಿತಿಯನ್ನು ಸರಿದೂಗಿಸಿಕೊಳ್ಳಬಹುದಾಗಿದೆ.  ಮಳೆಗಾಲದಲ್ಲಿ ರಸ್ತೆಗಳು ಹದಗೆಡುತ್ತವೆ ಎನ್ನುವ ಕಾರಣಕ್ಕೆ ಆಗಸ್ಟ್ 31 ರವರೆಗೆ ಮರಗಳ ಸಾಗಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ ಇದೀಗ ಮತ್ತೆ ಎರಡು ತಿಂಗಳು ನಿರ್ಬಂಧವನ್ನು ವಿಸ್ತರಿಸಿದ್ದು, ಈ ಕ್ರಮದಿಂದಾಗಿ ಬೆಳೆಗಾರರು ಮಾತ್ರವಲ್ಲದೆ ಕಾರ್ಮಿಕರು ಹಾಗೂ ಜನಸಾಮಾನ್ಯರು ಕೂಡ ಕಷ್ಟ, ನಷ್ಟ ಅನುಭವಿಸಬೇಕಾಗುತ್ತದೆ. ಕಾಫಿ ಹಾಗೂ ಕರಿಮೆಣಸು ಮಹಾಮಳೆಗೆ ಸಂಪೂರ್ಣವಾಗಿ ನಾಶವಾಗಿದೆ. ಮರಗಳು ಬಿದ್ದಿರುವುದರಿಂದ ಕಾಫಿ ಗಿಡಗಳು ನೆಲಕಚ್ಚಿವೆ. ಇಂತಹ ಪರಿಸ್ಥಿತಿಯಲ್ಲಿ ಬಿದ್ದಿರುವ ಮರಗಳನ್ನು ತೋಟದಲ್ಲೇ ಬಿಡುವುದರಿಂದ ತೋಟಗಳಿಗೆ ಮತ್ತಷ್ಟು ಹಾನಿಯಾಗುವುದಲ್ಲದೆ, ಬಿದ್ದಿರುವ ಮರಗಳು ಮೃದು ಮರಗಳಾಗಿರುವುದರಿಂದ ಅವುಗಳೂ ಹಾಳಾಗಿ ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರದಂತಾಗುತ್ತವೆ. ಆದ್ದರಿಂದ ಇದೀಗ ಮಹಾಮಳೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರಿಗೆ ಮರ ಮಾರಾಟದಿಂದ ಒಂದಷ್ಟು ನೆರವಾಗಲಿದೆ ಎಂದು ಸಭೆಯಲ್ಲಿದ್ದ ಬಹುತೇಕ ಮಂದಿ ಅಭಿಪ್ರಾಯಪಟ್ಟರು.

ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅದರಂತೆ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ.ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ.ಶಶಿಧರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ,  ಸಂಘಟಕರಾದ ಶ್ಯಾಂ ಪ್ರಸಾದ್,ಸಮೀರ್ ಮತ್ತಿತರರನ್ನೊಳಗೊಂಡ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿತು. ಈ ಸಂದರ್ಭ ಗಾಳಿ ಮಳೆಗೆ ಬಿದ್ದಿರುವ ಮರಗಳನ್ನು ಕಾಫಿ ತೋಟಗಳಲ್ಲೇ ಬಿಡುವುದರಿಂದ ಆಗುವ ಹಾನಿಯ ಬಗ್ಗೆ ನಿಯೋಗದ ಸದಸ್ಯರು ಜಿಲ್ಲಾಧಿಕಾಗಳಿಗೆ ಮನವರಿಕೆ ಮಾಡಿದರಲ್ಲದೆ, ತಮಗೆ 20 ಟನ್ ತೂಕದ ಲಾರಿಗಳಲ್ಲಿ ಮರ ಸಾಗಾಟಕ್ಕೆ ಅವಕಾಶ ನೀಡದಿದ್ದರೂ, ಕೊಡಗಿನ ರಸ್ತೆಗಳಲ್ಲಿ ಕನಿಷ್ಟ 10 ಟನ್ ತೂಕದ ಲಾರಿಗಳಲ್ಲಿ ಮರ ಸಾಗಾಟಕ್ಕೆ ಅವಕಾಶ ನೀಡಿದಲ್ಲಿ ಜಿಲ್ಲೆಯ ಹೊರಭಾಗಕ್ಕೆ ಸಾಗಿಸಿ ಅಲ್ಲಿಂದ ಮತ್ತೆ ಹೆಚ್ಚು ತೂಕ ಸಾಗಿಸುವ ಲಾರಿಗಳಿಗೆ ತುಂಬಿಸಿ ಮರದ ಮಿಲ್‍ಗಳಿಗೆ ಸಾಗಿಸಲಾಗುವುದು ಎಂದು ಭರವಸೆ ನೀಡಿದರು.

ಸುಮಾರು ಅರ್ಧ ಗಂಟೆಗಳ ಕಾಲ ನಿಯೋಗದ ಸದಸ್ಯರ ಮನವಿ ಆಲಿಸಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು, ತಮಗೆ 8-10 ದಿನಗಳ ಕಾಲಾವಕಾಶ ನೀಡಿದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಭೂ ವಿಜ್ಞಾನಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಹಿಡಿಯುವುದಾಗಿ ವಾಗ್ದಾನ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X