Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ...

ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ6 Sept 2018 9:48 PM IST
share
ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಸಮ್ಮೇಳನ

ಮೂಡುಬಿದಿರೆ, ಸೆ.6: "ಭವಿಷ್ಯದಲ್ಲಿ ದೇಶಗಳ ನಡುವಿನ ಕದನಗಳು ಬಂದೂಕುಗಳಿಂದಲ್ಲ, ಬದಲಾಗಿ ತಂತ್ರಜ್ಞಾನದ ಮೇಲೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ಅದನ್ನು ಎದುರಿಸಲು ನಾವು ಸನ್ನದ್ಧರಾಗಬೇಕು" ಎಂದು ಬೆಂಗಳೂರಿನ ಸಿ-ಡ್ಯಾಕ್‍ನ ಹಿರಿಯ ನಿರ್ದೇಶಕ ಗಂಗಾಪ್ರಸಾದ್. ಜಿ. ಎಲ್ ಅಭಿಪ್ರಾಯಪಟ್ಟರು.

ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‍ನ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫೋರ್ಮೇಶನ್ ಸೈನ್ಸ್ ವಿಭಾಗ ಹಾಗೂ ಐಇಇಇ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ `ಅಪ್ಲೈಡ್ ಆ್ಯಂಡ್ ಥಿಯರಿಟಿಕಲ್ ಕಂಪ್ಯೂಟಿಂಗ್ ಆ್ಯಂಡ್ ಕಮ್ಯುನಿಕೇಶನ್ ಟೆಕ್ನಾಲಜಿ' ಎಂಬ ವಿಷಯದ ಕುರಿತು ನಡೆಯುತ್ತಿರುವ ಎರಡು ದಿನಗಳ ನಾಲ್ಕನೇ ಅಂರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

"ಒಂದು ಶಿಕ್ಷಣ ಸಂಸ್ಥೆಯ ಯಶಸ್ಸಿನ ಹಿಂದೆ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಒಬ್ಬ ಉತ್ತಮ ಶಿಕ್ಷಕನಿಗೆ ಎರಡು ಗುಣಗಳು ಅತ್ಯವಶ್ಯ. ಒಂದು ವಿಷಯಜ್ಞಾನ, ಮತ್ತೊಂದು ಬೋಧನಾಕೌಶಲ್ಯ. ಇವೆರಡರಲ್ಲಿ ಯಾವುದೊಂದು ಇಲ್ಲವಾದರೂ, ಆತ ವಿದ್ಯಾರ್ಥಿಯ ಭವಿಷ್ಯರೂಪಿಸುವಲ್ಲಿ ಸೋಲಬೇಕಾಗುತ್ತದೆ. ಈ ಸಮಸ್ಯೆಯೇ ನಮ್ಮದೇಶದ ಶೈಕ್ಷಣಿಕ ಗುಣಮಟ್ಟ ಕುಸಿಯಲು ಕಾರಣ" ಎಂದು ವಿಷಾದ ವ್ಯಕ್ತಪಡಿಸಿದರು.

"ಎಷ್ಟು ಮಂದಿ ರ್ಯಾಂಕ್ ಪಡೆದರು, ಎಷ್ಟು ಸಂಖ್ಯೆ ವಿದ್ಯಾರ್ಥಿಗಳು ಕ್ಯಾಂಪಸ್ ಸೆಲೆಕ್ಷನ್‍ನಲ್ಲಿ ಉದ್ಯೋಗ ಪಡೆದರು ಎಂಬ ಆಧಾರದ ಮೇಲೆ ಸಂಸ್ಥೆಯ ಪ್ರಗತಿಯನ್ನು ಅಳೆಯಲಾಗುತ್ತದೆ. ಆದರೆ ಇದ್ಯಾವುದು ಅದರ ಮಾಪಕವಲ್ಲ. ಶಿಕ್ಷಣ ನಂತರ ಎಷ್ಟು ಜನ ಸ್ವ-ಉದ್ಯೋಗ ಆರಂಭಿಸಿದರು ಮತ್ತು ಹೊಸ ಹೊಸ ಆವಿಷ್ಕಾರಗಳಿಗೆ ತಮ್ಮನ್ನು ತೆರೆದುಕೊಂಡರು ಎಂಬುದರಲ್ಲಿ ಸಂಸ್ಥೆಯ ಯಶಸ್ಸು ಅಡಗಿದೆ. ಇದನ್ನು ಎಲ್ಲರೂ ಮನಗಾಣಬೇಕು" ಎಂದು ತಿಳಿಸಿದರು.

ವಿಜ್ಞಾನ ಕ್ಷೇತ್ರದಲ್ಲಿ ಮೈಲಿಗಲ್ಲು
"ಒಂದು ಕಾಲಘಟ್ಟದಲ್ಲಿ ಅಮೆರಿಕ ಭಾರತಕ್ಕೆ ಸೂಪರ್ ಕಂಪ್ಯೂಟರ್ ನೀಡಲು ನಿರಾಕರಿಸಿದ್ದರಿಂದ, ನಾವು ನಮ್ಮದೇ ಸೂಪರ್ ಕಂಪ್ಯೂಟರ್ ಉತ್ಪಾದಿಸಿ, ಇಂದು ಅದನ್ನು ಬೇರೆ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ. ಅದರಂತೆ ಮೇಕ್‍ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಸಿಟಿಯಂಥ ಯೋಜನೆಗಳು ನಮ್ಮನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಕಾರ್ಯಗಳನ್ನು ಸಾಧಿಸಲು ಇಂಬು ನೀಡಿವೆ. ಸದ್ಯ ಅಭಿವೃದ್ಧಿಯ ಹಂತದಲ್ಲಿರುವ ಸ್ಪೀಚ್ ತಂತ್ರಜ್ಞಾನ, ನಮ್ಮ ಸಾಧನೆಗೆ ಹೊಸ ಸೇರ್ಪಡೆ" ಎಂದು ಸಂತಸ ವ್ಯಕ್ತಪಡಿಸಿದರು.

ಸ್ಪೀಚ್ ತಂತ್ರಜ್ಞಾನ
ಸ್ಪೀಚ್ ತಂತ್ರಜ್ಞಾನದ ಮುಖೇನ ಯಾವುದೇ ಭಾಷೆಯಲ್ಲಿರುವ ಭಾಷಣ ಅಥವಾ ಉಪನ್ಯಾಸದ ಸಾರವನ್ನು ನಮಗೆ ಬೇಕಾದ ಭಾಷೆಯಲ್ಲಿ ಕೇಳಬಹುದಾಗಿದೆ. ಭಾರತದ ಬಹುತೇಕ ಸ್ಥಳೀಯ ಭಾಷೆಗಳು ಸಹ ಇಲ್ಲಿ ಲಭ್ಯವಿರುತ್ತವೆ.

"ಇಂದು ಇಂಜಿನಿಯರ್‍ಗಳಾಗಿ ಹೊರಬರುವ ವಿದ್ಯಾರ್ಥಿಗಳು ತಮ್ಮ ಓದಿಗೆ ತಕ್ಕಂಥ ಕೌಶಲ್ಯಗಳನ್ನು ಹೊಂದಿರುವುದಿಲ್ಲ. ಸಮೀಕ್ಷೆಗಳ ಪ್ರಕಾರ ಹೊಸದಾಗಿ ಉದ್ಯೋಗ ಆರಂಭಿಸಿದ ವ್ಯಕ್ತಿಗೆ ಶೇ.70ರಷ್ಟು ಕ್ಷಮತೆ ಇರಬೇಕು. ಆದರೆ ನಮ್ಮಲ್ಲಿ ಆ ಪ್ರಮಾಣ ಶೇ. 30ರಷ್ಟಾಗಿದೆ. ತಮ್ಮ ಕೆಲಸದ ಬಗ್ಗೆ ನಿರಾಸಕ್ತಿ ಇದ್ದಲ್ಲಿ, ಈ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ನೀವೆಲ್ಲರೂ ನಿಮ್ಮ ಕೆಲಸದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಿ. ಹೆಚ್ಚುವರಿ ಪಠ್ಯಕ್ರಮಗಳಾದ ಕ್ವಿಜ್ó, ಸೆಮಿನಾರ್, ಕಾರ್ಯಾಗಾರ, ತಾಂತ್ರಿಕ ಪತ್ರಿಕೆ, ತಾಂತ್ರಿಕ ಸ್ಪರ್ಧೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ" ಎಂದು ಹೇಳಿದರು.

"ಪ್ರತಿಯೊಬ್ಬ ವ್ಯಕ್ತಿಗೂ ತಾಳ್ಮೆ, ಸಮಯದ ಮೌಲ್ಯ ಹಾಗೂ ಎಲ್ಲರನ್ನೂ ಗೌರವಿಸುವ ಗುಣ ಅಗತ್ಯ. ಯಾವಾಗಲೂ ನಾವು ಯಾವುದೇ ವಿಷಯದ ಕುರಿತು ಆದಷ್ಟು ನಿಖರರಾಗಿರುವಂತೆ ನೋಡಿಕೊಳ್ಳಬೇಕು. ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು” ಎಂದುಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ "ನಮ್ಮ ಶಿಕ್ಷಕರಲ್ಲಿರುವ ವೇಳಾಪಟ್ಟಿಯ ಮನೋಭಾವದಿಂದ ನಮ್ಮ ಶೈಕ್ಷಣಿಕ ಪದ್ಧತಿಯ ನೈಜ ಸಾಮಥ್ರ್ಯ ಮಸುಕಾಗಿದೆ. ಅರ್ಥಗ್ರಹಿಕೆ ಇಲ್ಲದ ಹಾಗೂ ಹೊಣೆಗಾರಿಕೆ ಹೊಂದಿರದ ಬೋಧನೆಯಿಂದ ಯಾವ ಪ್ರಯೋಜನವೂ ಇಲ್ಲ. ನಮ್ಮ ಶಿಕ್ಷಕರು ಇಂಥಹ ಮನಸ್ಥಿತಿಯಿಂದ ಮೊದಲು ಹೊರಬರಬೇಕು" ಎಂದು ತಿಳಿಸಿದರು.

"ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಉದ್ದೇಶವನ್ನು ಸರಿಯಾಗಿ ಅರ್ಥೈಸಿಕೊಂಡು, ತನ್ಮೂಲಕ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸಬೇಕು. ಸೋಲುಗಳಿಗೆ ಎದೆಗುಂದದೇ, ಅದರಿಂದ ಹೊರಬಂದು ಜೀವನದಲ್ಲಿ ಮುನ್ನಡೆಯಬೇಕು" ಎಂದು ಹೇಳಿದರು. 

ಸಮ್ಮೇಳನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪೋರ್ಚುಗಲ್‍ನ ಕೊಯಂಬ್ರಾ ವಿಶ್ವವಿದ್ಯಾಲಯದ ಆಲ್ವಾರೋರೋಚಾ `ಪ್ರೋಸೆಸ್‍ಕ್ವಾಲಿಟಿ ಮ್ಯಾನೇಜ್ಮೆಂಟ್‍ಥ್ರೂ ಇನ್ಫೋರ್ಮೇಶನ್‍ಟೆಕ್ನಾಲಜಿ ಆಡಿಟ್' ಎಂಬ ವಿಷಯದ ಕುರಿತು ಮಾತನಾಡಿ ತಂತ್ರಜ್ಞಾನದ ಮೂಲಕ ಸಂಸ್ಥೆಯಲ್ಲಿನ ಬಿಕ್ಕಟ್ಟು ನಿರ್ವಹಣೆ ಹಾಗೂ ಸಂವಹನಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸಮ್ಮೇಳನದ ಆಶಯದ ಕುರಿತಾದ ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ಸಮ್ಮೇಳನದ ಎರಡೂ ದಿನಗಳು ಸಂವಹನ ಹಾಗೂ ತಂತ್ರಜ್ಞಾನದ ವಿವಿಧ ವಿಷಯಗಳ ಮೇಲೆ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 50ಕ್ಕೂ ಹೆಚ್ಚು  ಸಂಶೋಧನ ವಿದ್ಯಾರ್ಥಿಗಳು ಈ ವೇಳೆ ತಮ್ಮ ವಿಷಯ ಮಂಡನೆ ಮಾಡಲಿದ್ದಾರೆ.

ಐಇಇಇ ಸಂಸ್ಥೆಯ ಹಿರಿಯ ಸದಸ್ಯ ಡಾ. ಎಸ್. ಕೆ. ನಿರಂಜನ್, ಎಐಇಟಿಯ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡೀಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದ ಡೀನ್‍ಡಾ. ದತ್ತಾತ್ರೇಯ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X