Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲ ಮರು ಪಾವತಿಗೆ ಸಂತ್ರಸ್ತರ ಮೇಲೆ...

ಸಾಲ ಮರು ಪಾವತಿಗೆ ಸಂತ್ರಸ್ತರ ಮೇಲೆ ಒತ್ತಡ ಹೇರುವಂತಿಲ್ಲ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ

ವಾರ್ತಾಭಾರತಿವಾರ್ತಾಭಾರತಿ6 Sept 2018 11:34 PM IST
share
ಸಾಲ ಮರು ಪಾವತಿಗೆ ಸಂತ್ರಸ್ತರ ಮೇಲೆ ಒತ್ತಡ ಹೇರುವಂತಿಲ್ಲ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ

ಮಡಿಕೇರಿ, ಸೆ.6: ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕ್‍ಗಳಿಂದ ಸಾಲ ಪಡೆದ ಸಂತ್ರಸ್ತ ಕುಟುಂಬದವರಿಗೆ ಸಾಲ ಮರುಪಾವತಿ ಮಾಡುವಂತೆ ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಸಂಬಂಧಪಟ್ಟ ಬ್ಯಾಂಕ್ ಹಾಗೂ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಂಸ್ಥೆ, ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿದಾರರ ಉಪಸ್ಥಿತಿಯಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತಿವೃಷ್ಟಿಯಿಂದ ಜಿಲ್ಲೆಯ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಇವರ ನೆರವಿಗೆ ಸ್ಪಂದಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸಹಜವಾಗಿ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಾಲ ಮರು ಪಾವತಿಸುವಂತೆ ಒತ್ತಡ ಉಂಟು ಮಾಡಬಾರದು, ಇಂತಹ ದೂರುಗಳು ಕೇಳಿಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು.   

ಮುಂದಿನ ಮೂರು ತಿಂಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು, ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಯಿಂದ ಪಡೆದ ಯಾವುದೇ ರೀತಿಯ ಸಾಲ ಮರು ಪಾವತಿಗೆ ಒತ್ತಡ ಹೇರಿದರೆ ಜನರು ಮತ್ತಷ್ಟು ತೊಂದರೆಗೆ ಸಿಲುಕಿದಂತಾಗುತ್ತದೆ. ಆದ್ದರಿಂದ ಎಲ್ಲಾ ಹಣಕಾಸು ಸಂಸ್ಥೆಗಳು ಅರ್ಥ ಮಾಡಿಕೊಂಡು ಜನರಿಗೆ ಸ್ಪಂದಿಸಬೇಕೆಂದು ಜಿಲ್ಲಾಧಿಕಾರಿ ಅವರು ನುಡಿದರು. 

ಸ್ವಇಚ್ಛೆಯಿಂದ ಸಾಲ ಮರು ಪಾವತಿ ಮಾಡುವಂತಹ ಜನರಿಂದ ಪಾವತಿ ಮಾಡಿಕೊಳ್ಳಲು ಯಾವುದೇ ಅಭ್ಯಂತರವಿರುವುದಿಲ್ಲ. ಇದನ್ನು ಹೊರತುಪಡಿಸಿ ಒತ್ತಾಯದಿಂದ ಮರುಪಾವತಿಗೆ ಒತ್ತಡ ಹೇರಿದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ತಿಳಿಸಿದರು. 

ನಬಾರ್ಡ್‍ನ ಸಹಾಯಕ ಪ್ರಬಂಧಕರಾದ ಮುಂಡಂಡ ಸಿ.ನಾಣಯ್ಯ ಅವರು ಮಾತನಾಡಿ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಎಲ್ಲಾ ಜನರು ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೆ ಸಿಲುಕಿದ್ದಾರೆ. ಆದ್ದರಿಂದ ಯಾರಿಂದಲೂ ಸಾಲ ಮರು ಪಾವತಿಗೆ ಒತ್ತಾಯಿಸಬಾರದು ಎಂದು ಅವರು ಕೋರಿದರು.   

ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಧಾರಾಕಾರ ಮಹಾ ಮಳೆಗೆ ಒಂದು ಕಡೆ ಭೂ ಕುಸಿತ, ಮತ್ತೊಂದು ಕಡೆ ಪ್ರವಾಹ, ಮಗದೊಂದು ಕಡೆ ಬೆಳೆ ಹಾನಿ, ಹೀಗೆ ಎಲ್ಲರಿಂದಲೂ ಜಿಲ್ಲೆಯ ಕೃಷಿಕರಿಗೆ ತೊಂದರೆಯಾಗಿದೆ. ಜೊತೆಗೆ ಕಾರ್ಮಿಕರಿಗೂ ಉದ್ಯೋಗ ಇಲ್ಲದಂತಾಗಿದೆ ಎಂದು ಮುಂಡಂಡ ಸಿ.ನಾಣಯ್ಯ ಅವರು ನುಡಿದರು.        

ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಚಾರುಲತ ಸೋಮಲ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಡಿ.ಭಾಸ್ಕರಾಚಾರ್, ಖಾಸಗಿ ಬ್ಯಾಂಕ್‍ಗಳ ವ್ಯವಸ್ಥಾಪಕರು ಇತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X