ವಿವಾಹವಾಗುತ್ತೇನೆ ಎಂದು ನಂಬಿಸಿ ಅತ್ಯಾಚಾರ : ದೂರು ದಾಖಲು
ಬೆಳ್ತಂಗಡಿ, ಸೆ.6: ವಿವಾಹವಾಗುತ್ತೇನೆ ಎಂದು ನಂಬಿಸಿ ಅತ್ಯಾಚಾರ ನಡೆಸಿದ ಬಗ್ಗೆ ಯುವತಿಯೋರ್ವಳು ಬೆಳ್ತಂಗಡಿ ಠಾಣೆಯಲ್ಲಿ ಯುವಕನೋರ್ವನ ವಿರುದ್ಧ ದೂರು ನೀಡಿದ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ ಹಾಗೂ ತೆಂಕಕಾರಂದೂರು ಗ್ರಾಮದ ನಿವಾಸಿ ಆಸಿಫ್ ಎಂಬಾತ ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದರೆನ್ನಲಾಗಿದೆ.
ಕಳೆದ ಮಾರ್ಚ್ನಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಯುವತ್ಞಿ ನಿರಾಕರಿಸಿದಾಗಲೂ ಬಲಾತ್ಕಾರ ಮಾಡಿ ಅತ್ಯಾಚಾರ ನಡೆಸಿದ್ದನೆನ್ನಲಾಗಿದೆ. ಆದರೆ ನಂತರದ ದಿನಗಳಲ್ಲಿ ಆಸಿಫ್, ನಾನು ನಿನ್ನನ್ನು ವಿವಾಹವಾಗುವುದಿಲ್ಲ. ಇನ್ನು ಮುಂದಕ್ಕೆ ನನಗೂ ನಿನಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿ ನಂಬಿಕೆ ದ್ರೋಹ ಮಾಡಿದ್ದಾನೆ ಎಂದು ಯುವತಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾಳೆ.ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story