ಸೆ.9: ಸನ್ನಡತೆಯ ಆಧಾರದ ಮೇಲೆ ಬಂಧಿಗಳ ಅವಧಿ ಪೂರ್ವ ಬಿಡುಗಡೆ
ಬೆಂಗಳೂರು, ಸೆ. 7: ಕಾರಾಗೃಹ ಇಲಾಖೆ ವತಿಯಿಂದ ಸೆ.9ರ ಬೆಳಗ್ಗೆ 11.30ಕ್ಕೆ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳ ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದ ಡಿ.ಕೆ.ಸುರೇಶ್, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Next Story