Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳು...

ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳು ಯಶಸ್ಸು: ಸಿಎಂ ಕುಮಾರಸ್ವಾಮಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ7 Sept 2018 9:55 PM IST
share
ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳು ಯಶಸ್ಸು: ಸಿಎಂ ಕುಮಾರಸ್ವಾಮಿ

ಮಂಗಳೂರು, ಸೆ.7: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಯಶಸ್ಸು ಕಂಡಿದ್ದು, ಅವರು ಅಭಿನಂದನಾರ್ಹರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ದ.ಕ.ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ದ.ಕ.ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಹಿರಿಯ ಅಧಿಕಾರಿಗಳ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೌರಿ ಹತ್ಯೆಯಾಗಿ ಒಂದು ವರ್ಷವಾಗಿದೆ. ತನಿಖೆಯ ನೇತೃತ್ವ ವಹಿಸಿದ ಪೊಲೀಸ್ ಅಧಿಕಾರಿಗಳ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಶೋಧಕ ಡಾ.ಎಂ.ಎಂ.ಕಲಬುರಗಿ ಹತ್ಯೆ ಪ್ರಕರಣವನ್ನೂ ಕೂಡಾ ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಿದೆ ಎಂದರು.

ಕೆಲವು ಶಕ್ತಿಗಳು ಮತ ಗಳಿಸಲು ಸಾರ್ವಜನಿಕವಾಗಿ ನಡೆದುಕೊಳ್ಳುವ ನಡಾವಳಿಗಳು ಇಂದು ಎಲ್ಲೆಡೆ ಭಾರೀ ಚರ್ಚೆಯಾಗುತ್ತಿವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಮತ್ತು ನಾಗರಿಕರ ಜೀವ ಹಾನಿಯಾಗದಂತೆ ಮೈತ್ರಿ ಸರಕಾರ ಕಠಿಣ ಜರುಗಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ದ.ಕ.ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸುರಿದ ಮಳೆಯಿಂದ ಭಾರೀ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಹಿತ ಜಿಲ್ಲಾಧಿಕಾರಿ ಮತ್ತಿತರರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 213 ಕೋ.ರೂ. ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಬದಿಗಿಟ್ಟು ಸರಕಾರ ಹೆಚ್ಚುವರಿ ಪರಿಹಾರ ನೀಡಿದೆ ಎಂದರು.

ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಅಡಿಕೆಗೆ ಕೊಳೆ ರೋಗ ಹಾಗೂ ಹಳದಿ ರೋಗ ತಗುಲಿದೆ. ಈ ಬಗ್ಗೆ ಸಂಸದರು, ಶಾಸಕರು ಕೂಡಾ ಗಮನ ಸೆಳೆದಿದ್ದಾರೆ. ಆ ಹಿನ್ನಲೆಯಲ್ಲಿ ಸಂಕಷ್ಟಕ್ಕೀಡಾದ ರೈತರಿಗೆ ಗರಿಷ್ಠ ಮಟ್ಟದ ಪರಿಹಾರ ನೀಡಲು ಸರಕಾರ ಮುಂದಾಗಲಿದೆ ಎಂದು ಕುಮಾರಸ್ವಾಮಿ ನುಡಿದರು.

ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಡ್ರಗ್ಸ್ ಹಾವಳಿಯ ವಿರುದ್ಧ ಕಠಿಣ ಕ್ರಮಕ್ಕೂ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಮುಖ್ಯವಾಗಿದೆ. ಮೈತ್ರಿ ಸರಕಾರವು ಜಿಲ್ಲೆಯ ಅಭಿವೃದ್ಧಿಗೆ ಹೆಚ್ವಿನ ಪ್ರಾಮುಖ್ಯತೆ ನೀಡುತ್ತಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಕಡಲ್ಕೊರತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರಕ್ಕೆ ಕೈಗೊಳ್ಳಲು ಯೋಜನೆ ರೂಪಿಸಲಿದೆ ಎಂದರು.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ಅಕ್ರಮ ಎಸಗಿದವರೊಂದಿಗೆ ನಾನು ಯಾವತ್ತೂ ರಾಜಿಯಾಗಲ್ಲ. ಮೊದಲು ಜನರ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಬಳಿಕ ನಂತರ ಯೋಜನೆಗಳ ವಿಚಾರದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ಕೂಡಾ ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ. ಪೆಟ್ರೋಲ್ ದರ ಏರಿಕೆಯಾಗುತ್ತಿದ್ದರೂ ಕೂಡಾ ಬಿಜೆಪಿ ಮೌನವಾಗಿದೆ. ಆದಾಗ್ಯೂ ಪೆಟ್ರೋಲ್ ದರ ಕಡಿಮೆ ಮಾಡುವ ವಿಷಯಕ್ಕೆ ಸಂಬಂಧಿಸಿ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಮೇಯರ್ ಭಾಸ್ಕರ ಮೊಯ್ಲಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಎಸ್ಪಿ ರವಿಕಾಂತೇ ಗೌಡ ಉಪಸ್ಥಿತರಿದ್ದರು.

ಊಹಾಪೋಹ ಬೇಡ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ.ಜಿಲ್ಲೆಗೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಪೂರಕ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅವರ ಅನುಪಸ್ಥಿಯ ಬಗ್ಗೆ ಉಹಾಪೋಹ ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X