ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ
ಮಂಡ್ಯ, ಸೆ.11: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿರುವುದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಂದ ಮಂಡ್ಯ ಜಿ.ಪಂ.ನ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು ಹಾಗೂ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಶಾಂತ.ಎಂ ಅವರು ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
Next Story