ಲಿಂಗದಹಳ್ಳಿ: ಬಳ್ಳಾವರ ಶಾಲಾ ವಿದ್ಯಾರ್ಥಿನಿ ಸುಷ್ಮಿತಾ ಲೋಬೋ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಲಿಂಗದಹಳ್ಳಿ, ಸೆ.11: ಬೀರೂರು ಶೈಕ್ಷಣಿಕ ವಲಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಬಳ್ಳಾವರ ಸರ್ಕಾರಿ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಸುಷ್ಮಿತಾ ಲೋಬೋ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಅಭಿನಂದನೆ ತಿಳಿಸಿದ್ದು, ಮುಂದೆ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲೂ ಹೆಚ್ಚಿನ ಸಾಧನೆಯೊಂದಿಗೆ ಶಾಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದ್ದಾರೆ.
Next Story