Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಹೆದ್ದಾರಿ, ಭೂಕುಸಿತ...

ಮಡಿಕೇರಿ: ಹೆದ್ದಾರಿ, ಭೂಕುಸಿತ ಪ್ರದೇಶಗಳನ್ನು ಪರಿಶೀಲಿಸಿದ ಕೇಂದ್ರದ ತಂಡ

ವಾರ್ತಾಭಾರತಿವಾರ್ತಾಭಾರತಿ12 Sept 2018 9:29 PM IST
share
ಮಡಿಕೇರಿ: ಹೆದ್ದಾರಿ, ಭೂಕುಸಿತ ಪ್ರದೇಶಗಳನ್ನು ಪರಿಶೀಲಿಸಿದ ಕೇಂದ್ರದ ತಂಡ

ಮಡಿಕೇರಿ,ಸೆ.12: ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಮಡಿಕೇರಿ ಸಮೀಪದ ಹಾಲೇರಿ, ಕಾಂಡಕೊಲ್ಲಿ, ಹಟ್ಟಿಹೊಳೆ, ಸೋಮವಾರಪೇಟೆ ರಸ್ತೆಯ ಭೂಕುಸಿತ ಪ್ರದೇಶಗಳಿಗೆ ತೆರಳಿ ವಾಸ್ತವಾಂಶವನ್ನು ದಾಖಲಿಸಿಕೊಂಡರು. ಕೇಂದ್ರ ಸರಕಾರದ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಭಿಯಂತರ ಜಿತೇಂದ್ರ ಪನ್ವ, ಕೇಂದ್ರ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಪೊನ್ನುಸ್ವಾಮಿ ಅವರುಗಳು ಅತಿವೃಷ್ಠಿ ಹಾನಿಯ ಕುರಿತು ಪರಿಶೀಲನೆ ನಡೆಸಿದರು.

ಬೆಟ್ಟ ಕುಸಿತ, ಹೆದ್ದಾರಿ ಹಾನಿ ಮತ್ತು ತೋಟಗಾರಿಕೆ  ಬೆಳೆಗಳಿಗಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾತ್ರವಲ್ಲದೆ ಆ ಹಾನಿಗೀಡಿದ ಪ್ರದೇಶಗಳಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲನೆಯನ್ನು ನಡೆಸಿದರು. ಬಳಿಕ ಮುಕ್ಕೋಡ್ಲು, ಹಟ್ಟಿಹೊಳೆ ಕಡೆಗೆ ತೆರಳಿದ ತಂಡ ಗ್ರಾಮೀಣ ಭಾಗಗಳಲ್ಲಾದ ಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದರು.

ಜಿಲ್ಲಾಧಿಕಾರಿ ಶ್ರೀವಿದ್ಯಾ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್  ಅವರುಗಳು ಅತೀವೃಷ್ಠಿಯಿಂದಾಗಿ ಬೆಳೆ, ಕೃಷಿ ಫಸಲು ನಾಶದ ಬಗ್ಗೆ ಅಧಿಕಾರಿಗಳ ತಂಡಕ್ಕೆ ವಿವರಿಸಿದರಲ್ಲದೇ ಈಗಾಗಲೇ ಕೇಂದ್ರ ವಿಪತ್ತು ನಿರ್ವಹಣಾ ನಿಧಿಯ ಮಾರ್ಗಸೂಚಿ ಅನ್ವಯ ನಿಗಧಿಪಡಿಸಲಾಗಿರುವ ಪರಿಹಾರದ ಮೊತ್ತವನ್ನು ಏರಿಕೆ ಮಾಡುವಂತೆಯೂ ಮನವಿ ಸಲ್ಲಿಸಿದರು. ವಿಪತ್ತು ಅಧ್ಯಯನಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ಸೆ.13 ರಂದು ಕೂಡ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ. ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಸುದ್ದಿಗಾರರೊಂದಿಗೆ ತಮ್ಮ ಅಧ್ಯಯನ ಭೇಟಿಯ ಕುರಿತು ಯಾವುದೇ  ಪ್ರತಿಕ್ರಿಯೆ ನೀಡಲು ಮುಂದಾಗಲಿಲ್ಲ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಈಗಾಗಲೇ ಕೃಷಿ ಇಲಾಖೆ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಳೆ ಹಾನಿಯಿಂದಾದ ನಷ್ಟದ ಕುರಿತು ಮಾಹಿತಿ ನೀಡಿದ್ದಾರೆ. ಈ ಮಾಹಿತಿಗಳನ್ನು ಕೇಂದ್ರದ ಅಧ್ಯಯನ ತಂಡಕ್ಕೆ ಸಲ್ಲಿಸಲಾಗಿದ್ದು, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯೊಂದಿಗೆ ಚರ್ಚಿಸಿ ಬಳಿಕ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕೇಂದ್ರದಿಂದ ಬಂದಿರುವ ಅಧ್ಯಯನ ತಂಡ ಜಿಲ್ಲೆಯಲ್ಲಾದ ಅತಿವೃಷ್ಟಿ ಹಾನಿಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಕೃಷಿ ಫಸಲು, ತೋಗಾರಿಕೆ ಬೆಳೆಗಳು ನಾಶಗೊಂಡಿರುವ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಸಮಗ್ರ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದ್ದಾರೆ. ಆ ಬಳಿಕ ಕೇಂದ್ರ ಸರಕಾರ ಪರಿಹಾರ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಶಾಸಕ  ಅಪ್ಪಚ್ಚು ರಂಜನ್ ಮಾತನಾಡಿ, ಬೆಳೆ ಮತ್ತು ಫಸಲು ನಷ್ಟದಿಂದ ಸಂತ್ರಸ್ತರಾದವರಿಗೆ ಹೆಚ್ಚಿನ ಪರಿಹಾರ ಕಲ್ಪಿಸಬೇಕಿದೆ. ತೋಟ, ಕೃಷಿ ಗದ್ದೆ  ಕಳೆದುಕೊಂಡವರಿಗೆ ಜಾಗವನ್ನು ವಿತರಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿ.ಪಂ. ಮಾಜಿ ಅಧ್ಯಕ್ಷ  ರವಿ ಕುಶಾಲಪ್ಪ, ಪಿಡಬ್ಲೂಡಿ, ಚೆಸ್ಕಾಂ, ಹೆದ್ದಾರಿ ಪ್ರಾಧಿಕಾರ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X