Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರದ ಅವಕಾಶ ಬಂದಲ್ಲಿ ಬಿಜೆಪಿ...

ಅಧಿಕಾರದ ಅವಕಾಶ ಬಂದಲ್ಲಿ ಬಿಜೆಪಿ ಕೈಕಟ್ಟಿ ಕೂರಲ್ಲ: ಶಾಸಕ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ14 Sept 2018 6:17 PM IST
share
ಅಧಿಕಾರದ ಅವಕಾಶ ಬಂದಲ್ಲಿ ಬಿಜೆಪಿ ಕೈಕಟ್ಟಿ ಕೂರಲ್ಲ: ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ಸೆ.14: ರಾಜಕೀಯ ನಿಂತ ನೀರಲ್ಲ, ಅವಕಾಶ ಬಂದಾಗ ಬಿಜೆಪಿ ಪಕ್ಷ ಕೈಕಟ್ಟಿ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದರು.

ಸಮ್ಮಿಶ್ರ ಸರಕಾರದ ರಾಜಕೀಯ ಬೆಳವಣಿಗೆ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸರಕಾರ ರಚನೆಯಾಗಿರುವುದು ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕು ಎಂಬ ಉದ್ದೇಶದಿಂದ. ಆದರೆ ಪ್ರಸಕ್ತ ಅವರಲ್ಲಿಯೇ ವಿರೋಧಗಳು, ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದೆ ಎಂದು  ಲೇವಡಿ ಮಾಡಿದರು.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪತ್ರ ಬರೆಯುತ್ತಾರೆ ಎಂದರೆ ಅವರ ನೋವು ಮತ್ತು ಆಕ್ರೋಶ ಏನು ಎಂಬುವುದು ತಿಳಿಯುತ್ತದೆ. ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಬಿಜೆಪಿಯವರಲ್ಲ. ಅವರು ಕಟ್ಟಾ ಕಾಂಗ್ರೆಸ್ ನವರು. ಕಾಂಗ್ರೆಸ್ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಅವರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಆಕ್ರೋಶ ಸ್ಪೋಟಗೊಂಡರೆ ಯಾವಾಗ ಬೇಕಾದರೂ ಸರಕಾರ ಬಿಳುತ್ತದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾದ ದಿನದಿಂದಲೂ ಸಾರ್ವಜನಿಕರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರಲ್ಲಿಯೇ ಅಸಮಧಾನವಿದೆ. ಅಸಮಾಧಾನ ಸರಿಪಡಿಸುವುದು ಕಾಂಗ್ರೆಸ್, ಜೆಡಿಎಸ್ ಸರಕಾರದ ಕೆಲಸ. ಅದೇನು ನಮ್ಮ ಕೆಲಸವೇ ಎಂದು ಪ್ರಶ್ನಿಸಿದರು.

ಯಾವ ಸರಕಾರಕ್ಕೆ ಸೈದ್ಧ್ದಾಂತಿಕ ಬದ್ದತೆ ಇರುತ್ತದೋ ಆ ಸರಕಾರ ಉಳಿಯುತ್ತದೆ. ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಸೈದ್ಧಾಂತಿಕ ಬದ್ಧತೆಯೂ ಇಲ್ಲ, ಜನರ ಬಗ್ಗೆ ಕಾಳಜಿಯೂ ಇಲ್ಲ. ಹಾಗಾಗೀ ರಾಜ್ಯ ಸರಕಾರ ಸಮಸ್ಯೆಯ ಸುಳಿಯಲ್ಲಿ ಸಿಲುಕಿದೆ ಎಂದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು, ಸಿದ್ದರಾಮಯ್ಯ ಅವರನ್ನು ಕುರಿತು ಇಂತಹ ಕೆಟ್ಟ ಸಿ.ಎಂ. ಜೀವನದಲ್ಲಿಯೇ ನೋಡಿಲ್ಲ, ಎಂಥ ಕೆಟ್ಟ ವ್ಯಕ್ತಿಯನ್ನು ಬೆಳೆಸಿದೆ ಎಂದು ಪಶ್ವತಾಪ ಪಡುತ್ತಿದ್ದೇನೆ ಎಂದು ಹೇಳಿದ್ದರು. ಆನಂತರ ಅವರು ಯಾರ ಜೊತೆ ಸೇರಿದರು ಎಂದರು ಪ್ರಶ್ನಿಸಿದ ರವಿ, ಸರಕಾರಕ್ಕೆ ಸಮಾಜಿಕ ನ್ಯಾಯದ ಕಾಳಜಿ ಇಲ್ಲ. ಇದು ಪ್ರಜಾಪ್ರಭುತ್ವಕ್ಕೆ ಪೂರಕವಾದ ಸರಕಾರವಲ್ಲ. ಈ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X