Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅರಿವೇ ಗುರು

ಅರಿವೇ ಗುರು

ವಾರ್ತಾಭಾರತಿವಾರ್ತಾಭಾರತಿ15 Sept 2018 12:14 AM IST
share
ಅರಿವೇ ಗುರು

ಅರಿವೇ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ,

ಪರಿಣಾಮವೆ ತಪ, ಸಮತೆಯಿಂಬುದೆ ಯೋಗದಾಗು ನೋಡಾ
ಈಸುವನರಿಯದೆ ವೇಷವ ಧರಿಸಿ, ಲೋಚು ಬೋಳಾದಡೆ
ಮಹಾಲಿಂಗ ಕಲ್ಲೇಶ್ವರದೇವರು ನಗುವರು.
                                   -ಹಾವಿನಾಳ ಕಲ್ಲಯ್ಯ

'ಅರಿವೇ ಗುರು' ಮತ್ತು 'ಕಾಯಕವೆ ಕೈಲಾಸ' ಎಂಬುವು ಲಿಂಗವಂತ ಧರ್ಮದ ಎರಡು ಬಹು ಪ್ರಚಲಿತ ಘೋಷವಾಕ್ಯಗಳು. 'ಅರಿವೇ ಗುರು' ಎಂದು ಹಾವಿನಾಳ ಕಲ್ಲಯ್ಯ ಮತ್ತು ಮುಕ್ತಾಯಕ್ಕ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ. ಅದೇ ರೀತಿ 'ಕಾಯಕವೆ ಕೈಲಾಸ' ಎಂಬ ಘೋಷವಾಕ್ಯವನ್ನು ಆಯ್ದಕ್ಕಿ ಮಾರಯ್ಯ ಮತ್ತು ಮನಸಂದ ಮಾರಯ್ಯನವರು ತಮ್ಮ ವಚನಗಳಲ್ಲಿ ಹೇಳಿದ್ದಾರೆ. ಬಸವಣ್ಣನವರ ವಚನವೊಂದರಲ್ಲಿ 'ಕಾಯವೇ ಕೈಲಾಸ' ಎಂದು ಬರುತ್ತದೆ. ಕಾಯಕ ಮತ್ತು ಕೈಲಾಸ ಪದಗಳನ್ನು ಅನೇಕ ವಚನಕಾರರು ಬಳಸಿದ್ದಾರೆ. ಅದೇ ರೀತಿ ಅರಿವು ಮತ್ತು ಗುರು ಶಬ್ದಗಳನ್ನೂ ಬಳಸಿದ್ದಾರೆ. ಆದರೆ ಈ ಘೋಷವಾಕ್ಯಗಳು ಬೇರೆ ಯಾರಲ್ಲಿಯೂ ಸಿಗುವುದಿಲ್ಲ.
ಅರಿವು ಗುರುವಾದಾಗ ಅದನ್ನು ಆಚರಣೆಯಲ್ಲಿ ತರುವ ಮನಸ್ಸೇ ಶಿಷ್ಯನ ಸ್ಥಾನ ಪಡೆಯುತ್ತದೆ. ಈ ಅರಿವು ಮತ್ತು ಆಚರಣೆಗೆ ಲಿಂಗವು ಜ್ಞಾನರೂಪದಲ್ಲಿದೆ. ಹೀಗೆ ಲಿಂಗವಂತ ಧರ್ಮದಲ್ಲಿ ನಡೆ ನುಡಿ ಸಿದ್ಧಾಂತವಾದಾಗ ಅದರ ಪರಿಣಾಮವೇ ತಪ ಎನಿಸಿಕೊಳ್ಳುತ್ತದೆ. ಸಮತೆ ಎಂಬುದು ಯೋಗದಿಂದ ಒದಗಿ ಬರುವಂಥದ್ದು. ಮನಸ್ಸು ಮತ್ತು ಇಂದ್ರಿಯಗಳನ್ನು ನಿಗ್ರಹಿಸಿ ತದೇಕಚಿತ್ತದಿಂದ ಧ್ಯಾನಸ್ಥನಾಗುವುದೇ ಯೋಗ. ಇದುವೇ ಲಿಂಗವಂತ ಧರ್ಮದಲ್ಲಿ ಲಿಂಗಾಂಗ ಸಾಮರಸ್ಯ. ಆತ್ಮವು ಪರಮಾತ್ಮನೊಂದಿಗೆ ಒಂದಾಗುವ ಲಿಂಗಾಂಗಸಾಮರಸ್ಯ ಸಕಲಜೀವಾತ್ಮರಿಗೆ ಲೇಸನೆ ಬಯಸುವ ಮನಸ್ಥಿತಿಯನ್ನು ಸೃಷ್ಟಿಸುವುದು. ಆಗ ದಯವೇ ಧರ್ಮದ ಮೂಲವಾಗುವುದು. ಹೀಗೆ ಸರ್ವಜೀವದಯಾಪಾರಿಯಾಗುವ ಸ್ಥಿತಿಯೆ ಸಮತೆಯ ಸ್ಥಿತಿ. ಇದು ಧಾರ್ಮಿಕ, ಪಾರಮಾರ್ಥಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಒಳಗೊಂಡಿರುತ್ತದೆ. ಎಲ್ಲ ದುರಂತಗಳ ಮೂಲವಾದ ಖಾಸಗಿ ಆಸ್ತಿಗೆ ಇಲ್ಲಿ ಸ್ಥಾನವಿಲ್ಲ. ನರನ ಸಂಗ್ರಹಬುದ್ಧಿಯಿಂದ ಉತ್ಪನ್ನವಾಗುವ ಎಲ್ಲ ರೀತಿಯ ಅಸಮಾನತೆಗಳಿಗೆ ಶರಣರ ಸಮತಾ ತತ್ತ್ವ ವಿರುದ್ಧವಾಗಿದೆ. ಕಾರ್ಲ್ ಮಾರ್ಕ್ಸ್ ಅವರ ಆರ್ಥಿಕ ಸಮಾನತೆ ಮತ್ತು ಅಂಬೇಡ್ಕರರ ಧಾರ್ಮಿಕ ಮತ್ತು ಸಾಮಾಜಿಕ ಸಮಾನತೆಯನ್ನು ಇದು ಒಳಗೊಂಡಿದೆ. ಇದೆಲ್ಲವನ್ನು ತಿಳಿದುಕೊಳ್ಳದೆ ಕಾವಿ ವೇಷಧರಿಸಿ, ಕೂದಲುದುರಿ ತಲೆ ಬೋಳುಮಾಡಿಕೊಂಡರೆ ದೇವರ ದೃಷ್ಟಿಯಲ್ಲಿ ಹಾಸ್ಯಾಸ್ಪದವೆನಿಸುವುದು ಎಂದು ಹಾವಿನಾಳ ಕಲ್ಲಯ್ಯನವರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X