ಮೈಸೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಬಾಲಕ ಸಾವು

ಮೈಸೂರು,ಸೆ.15: ದ್ವಿಚಕ್ರ ವಾಹನವೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಉತ್ತನಹಳ್ಳಿ ಸಮೀಪದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಉತ್ತನಹಳ್ಳಿ ನವೀನ್ (16)ಎಂದು ಗುರುತಿಸಲಾಗಿದೆ. ಈತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತಿದ್ದ. ಕಾರಿನ ಚಾಲಕ ಅಪಘಾತವಾಗುತ್ತಿದ್ದಂತೆ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಕಾರಿನ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





