Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಜಿನಿಯರಿಂಗ್, ಮೆಡಿಕಲ್‍ಗೆ...

ಇಂಜಿನಿಯರಿಂಗ್, ಮೆಡಿಕಲ್‍ಗೆ ಆಕರ್ಷಿತರಾಗಲು ಅರ್ಥಿಕ ಕಾರಣ ಮುಖ್ಯ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ16 Sept 2018 5:32 PM IST
share
ಇಂಜಿನಿಯರಿಂಗ್, ಮೆಡಿಕಲ್‍ಗೆ ಆಕರ್ಷಿತರಾಗಲು ಅರ್ಥಿಕ ಕಾರಣ ಮುಖ್ಯ: ಡಾ.ಜಿ.ಪರಮೇಶ್ವರ್

ತುಮಕೂರು,ಸೆ.16: ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸುಗಳನ್ನು ವಿದ್ಯಾರ್ಥಿಗಳು ವೃತ್ತಿ ಗೌರವದ ಹೊರತಾಗಿಯೂ ಅರ್ಥಿಕ ಸದೃಢತೆಗೆ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಶ್ರೀಗಂಗಾಭವಾನಿ ಮಹಿಳಾ ಸಹಕಾರ ಸಂಘ(ರಿ), ಶ್ರೀರಾಜರಾಜೇಶ್ವರಿ ಮಹಿಳಾ ಸಮಾಜ(ರಿ) ಜಂಟಿಯಾಗಿ ಆಯೋಜಿಸಿದ್ದ ಗಣ್ಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಭಿನಂದಿತರಾಗಿ ಮಾತನಾಡಿದ ಅವರು, ಇಂಜಿನಿಯರ್ ಮತ್ತು ವೈದ್ಯ ಪದವಿ ಪಡೆದವರಿಗೆ ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಬೇಡಿಕೆ. ನಮ್ಮ ದೇಶದಲ್ಲಿಯೂ ಉತ್ತಮ ಅವಕಾಶಗಳು ದೊರೆಯಲಿವೆ. ಈ ಹಿನ್ನೆಲೆಯಲ್ಲಿ ಇತರೆ ಕೋರ್ಸುಗಳಿಗಿಂತ ವೃತ್ತಿಪರ ಕೋರ್ಸುಗಳ ಕಡೆಗೆ ಹೆಚ್ಚಾಗಿ ಯುವಜನತೆ ಆಕರ್ಷಿತರಾಗುತ್ತಿದ್ದಾರೆ ಎಂದರು.

ಭಾರತದಲ್ಲಿ ಒಂದು ವರ್ಷಕ್ಕೆ ಸುಮಾರು 5 ಲಕ್ಷದಷ್ಟು ಇಂಜಿನಿಯರಿಂಗ್ ಪದವಿಧರರು ಹೊರಬರುತ್ತಿದ್ದು, ಇವರಲ್ಲಿ ಶೇ.25 ರಿಂದ 30ರಷ್ಟು ಜನರು ಹೊರದೇಶಗಳಿಗೆ ಹೋಗುತ್ತಿದ್ದಾರೆ. ವೈದ್ಯಕೀಯ ಪದವಿ ಪಡೆದ ಸುಮಾರು 70 ರಿಂದ 80 ಸಾವಿರ ವೈದ್ಯರಲ್ಲಿ ಶೇ.20ಷ್ಟು ಮಂದಿ ವಿದೇಶಗಳಿಗೆ ತೆರಳುತ್ತಿದ್ದಾರೆ. ಉಳಿದವರು ಖಾಸಗಿ ಅಭ್ಯಾಸದಲ್ಲಿ ತೊಡಗಿದ್ದು, ಸರಕಾರಿ ಸೇವೆಗೆ ಸೇರುವವರ ಸಂಖ್ಯೆ ಕಡಿಮೆ. ಇದರಿಂದಾಗಿ ಇಂದಿಗೂ ಭಾರತದಲ್ಲಿ ವೈದ್ಯರ ಕೊರತೆಯಿದೆ. ವೈದ್ಯರಾದರೆ ತಾವು ಬದುಕಿರುವವರೆಗೂ ರೋಗಿಗೆ ಚಿಕಿತ್ಸೆ ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಪ್ರಾದಾನ್ಯತೆ ನೀಡಿ, ಪಿಯುಸಿ ನಂತರ ಬಹುಜನರು ಈ ಕೋರ್ಸುಗಳಿಗೆ ಅದ್ಯತೆ ನೀಡುತ್ತಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.

ಇಂದು ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಎಲ್ಲ ರಂಗದಲ್ಲಿಯೂ ಮಂಚೂಣಿಯಲ್ಲಿದ್ದಾರೆ. ಈ ಸಾಲಿನ ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ದೆಹಲಿಯಿಂದ ಸ್ಯಾನ್‍ಪ್ರಾನ್ಸಿಕೋಗೆ ಮಹಿಳೆಯರೇ ಸತತ 19 ಗಂಟೆಗಳ ಕಾಲ ನಾಗರಿಕ ವಿಮಾನ ಚಲಾಯಿಸಿ, ಪುರುಷರಿಗಿಂತ ನಾವೇನು ಕಡಿಮೆಯಿಲ್ಲ ಎಂದು ತೋರಿಸಿದ್ದಾರೆ. ಅಲ್ಲದೆ ಯುದ್ದ ವಿಮಾನಗಳನ್ನು ಚಲಾಯಿಸಿ, ಎದುರಾಯಿಯ ಮೇಲೆರಗುವ ಧೈರ್ಯ ತೋರಿದ್ದಾರೆ. ಭವಿಷ್ಯದಲ್ಲಿ ಮಹಿಳೆಯರ ಮುಂದೆ ದೊಡ್ಡ ಅವಕಾಶಗಳ ಮಹಾಪೂರವೇ ಇದೆ ಎಂದ ಅವರು, ಇಂತಹ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸುತ್ತಿರುವ ಶ್ರೀಮತಿ ಗಂಗಮ್ಮ ನೇತೃತ್ವದ ಶ್ರೀಗಂಗಾಭವಾನಿ ಮಹಿಳಾ ಸಹಕಾರ ಸಂಘ ಮತ್ತು ಶ್ರೀರಾಜರಾಜೇಶ್ವರಿ ಮಹಿಳಾ ಸಂಘದ ಕೆಲಸ ಶ್ಲಾಘನೀಯ. ಇವರು ನಗರದಲ್ಲಿ ನಿವೇಶನ ಪಡೆದರೆ, ಕಚೇರಿ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅನುದಾನ ಕೊಡಿಸುವ ಭರವಸೆಯನ್ನು ಗೃಹ ಸಚಿವರು ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಗಂಗಾಭವಾನಿ ಮಹಿಳಾ ಸಹಕಾರ ಸಂಘ(ರಿ)ದ ಅಧ್ಯಕ್ಷೆ ಶ್ರೀಮತಿ ಗಂಗಮ್ಮ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ, ನಮ್ಮ ಸಂಘದ ಹೆಸರಿನಲ್ಲಿ ಆನಾಥ ಹೆಣ್ಣು ಮಕ್ಕಳಿಗೆ ತರಬೇತಿ ಸಂಸ್ಥೆ ಆರಂಭಿಸಬೇಕೆಂದಿದ್ದು, ಸರಕಾರದ ವತಿಯಿಂದ ಸಹಕಾರ ಕೊಡಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಮೇಲಿನ ಎರಡು ಸಂಘಗಳು ನೀಡುವ ಗಂಗಾಶ್ರೀ ಪ್ರಶಸ್ತಿಯನ್ನು ಮಹಿಳೆಯರ ಸ್ವಾವಲಂಬನೆಗಾಗಿ ದುಡಿದ ಶ್ರೀಮತಿ ಸುನಂದಮ್ಮ, ಶ್ರೀಮತಿ ಭಾಗ್ಯಮ್ಮ, ಶ್ರೀಮತಿ ಲಲಿತಮ್ಮ ಅವರುಗಳಿಗೆ ನೀಡಿ ಗೌರವಿಸಲಾಯಿತು. 2017-18ನೇ ಸಾಲಿನ ಎಸೆಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸಾಕ್ಷರತ ಪ್ರೇರಕ, ಉಪಪ್ರೇರಕರು ತಮ್ಮ ಸೇವೆಯನ್ನು ಖಾಯಂ ಮಾಡುವಂತೆ ಉಪಮುಖ್ಯಮಂತ್ರಿ ಗಳಲ್ಲಿ ಮನವಿ ಮಾಡಿದರು.
ವೇದಿಕೆಯ ದಿವ್ಯ ಸಾನಿಧ್ಯವನ್ನು ಬೆಂಗಳೂರಿನ ಪ್ರಕಾಶನಗರದ ಓಂ ನಮಃಶಿವಾಯ ಸ್ವಾಮೀಜಿ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ತು.ಬಿ.ಮಲ್ಲೇಶ್, ಬಿ.ಇ.ಓ ರಂಗಧಾಮಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X