Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ತಾನ: ಎಸ್‌ಬಿಐ ಸಿಬ್ಬಂದಿ ಮಾಡಿದ...

ರಾಜಸ್ತಾನ: ಎಸ್‌ಬಿಐ ಸಿಬ್ಬಂದಿ ಮಾಡಿದ ಎಡವಟ್ಟು; ರೈತರಿಗೆ ಪಾವತಿಯಾಗದ ಬೆಳೆ ವಿಮಾ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ18 Sept 2018 9:38 PM IST
share

ಜೈಪುರ, ಸೆ.18: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರೀಮಿಯಂ ಪಾವತಿಸದಿದ್ದ ಕಾರಣ ರಾಜಸ್ತಾನದ ಸುಮಾರು 3,052 ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ(ಪಿಎಂಎಫ್‌ಬಿವೈ)ಯಡಿ ವಿಮೆ ಹಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ.

ರಾಜಸ್ತಾನದ ಹನುಮಾನ್‌ಗಢ ಜಿಲ್ಲೆಯ ರಾಮಗಢ ಉಜ್ಜಲ್ವಾಸ್, ಭುಕಾರ್ಕ ಮತ್ತು ಗೋರ್ಖಾನಾ ಗ್ರಾಮಗಳ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಹೊಂದಿರುವ ರೈತರಿಗೆ 2017ರ ಮುಂಗಾರು ಬೆಳೆಯ ವಿಮಾ ಹಣ ಪಡೆಯಲು ಸಾಧ್ಯವಾಗಿಲ್ಲ. ರಾಮಗಢ ಉಜ್ಜಲ್ವಾಸ್‌ನ ಎಸ್‌ಬಿಐ ಶಾಖೆಯು ರೈತರ ವಿಮಾ ಕಂತಿನ ಹಣವನ್ನು ಬಜಾಜ್ ಅಲಯನ್ಸ್ ಜನರಲ್ ಇನ್ಷೂರೆನ್ಸ್ ಸಂಸ್ಥೆಯ ಬದಲು ಅಗ್ರಿಕಲ್ಚರ್ ಇನ್ಷೂರೆನ್ಸ್ ಕಂಪೆನಿ ಆಫ್ ಇಂಡಿಯಾದ ಬ್ಯಾಂಕ್ ಖಾತೆಗೆ ವರ್ಗಾಯಿಸಿದೆ. ಇದರಿಂದ ನಿಗದಿತ ಅವಧಿಯಲ್ಲಿ ವಿಮಾ ಮೊತ್ತದ ಕಂತನ್ನು ಪಾವತಿಸಲು ಸಾಧ್ಯವಾಗಿಲ್ಲ. ಭುಕಾರ್ಕ ಮತ್ತು ಗೋರ್ಖಾನಾ ಶಾಖೆಗಳು ವಿಮಾ ಕಂತನ್ನು ಪಾವತಿಸುವ ಗೋಜಿಗೇ ಹೋಗಿಲ್ಲ. ಕೆಲಸದ ಒತ್ತಡದ ಕಾರಣ ವಿಮೆಯ ಕಂತಿನ ಹಣ ತಪ್ಪಾಗಿ ಮತ್ತೊಂದು ಕಂಪೆನಿಯ ಖಾತೆಗೆ ವರ್ಗಾವಣೆಯಾಗಿದೆ.

 ತಪ್ಪಿನ ಅರಿವಾದೊಡನೆ ಹಣವನ್ನು ಬಜಾಜ್ ಇನ್ಷೂರೆನ್ಸ್ ಸಂಸ್ಥೆಯ ಖಾತೆಗೆ ವರ್ಗಾಯಿಸಲಾಗಿದೆ. ಆದರೆ ಅದಾಗಲೇ 10 ದಿನ ವಿಳಂಬವಾಗಿದ್ದ ಕಾರಣ ಅವರು ಇದನ್ನು ಸ್ವೀಕರಿಸಿಲ್ಲ ಎಂದು ರಾಮಗಢ ಉಜ್ಜಲ್ವಾಸ್‌ನ ಎಸ್‌ಬಿಐ ಶಾಖೆಯ ಮ್ಯಾನೇಜರ್ ಮುಕೇಶ್ ಕುಮಾರ್ ಹೇಳಿದ್ದಾರೆ. 2017ರ ಮುಂಗಾರಿನ ಬೆಳೆ ಕಟಾವು ಪ್ರಾಯೋಗಿಕ ಮಾಹಿತಿ(ಸಿಸಿಇ)ಯ ಪ್ರಕಾರ ರಾಮಗಢ ಜಿಲ್ಲೆಯಲ್ಲಿ ಬೆಳೆ ನಷ್ಟವಾಗಿದ್ದು ಪಿಎಂಎಫ್‌ಬಿವೈ ಯೋಜನೆಯಡಿ ವಿಮಾ ಪರಿಹಾರ ಪಡೆಯಲು ಅರ್ಹವಾಗಿದೆ. ಆದರೆ ಈ ಜಿಲ್ಲೆಯ ಬ್ಯಾಂಕ್ ಶಾಖೆಗಳು ರೈತರ ಖಾತೆಗೆ ‘ಕ್ಲೇಮ್ ಮೊತ್ತದ ಬದಲು ಈ ಹಿಂದೆ ಪಾವತಿಸಲಾದ ಪ್ರೀಮಿಯಂ ಮೊತ್ತವನ್ನು ವರ್ಗಾಯಿಸಿವೆ. 2016ರ ಮುಂಗಾರು ಅವಧಿಯಲ್ಲಿ 1.6 ಲಕ್ಷ ರೂ. ಕೆಸಿಸಿ ಸಾಲಕ್ಕೆ ತನಗೆ 18,000 ರೂ. ಕ್ಲೇಮ್ ದೊರಕಿತ್ತು. ಆದರೆ 2017ರಲ್ಲಿ ತಾನು 10.70 ಲಕ್ಷ ರೂ. ಕೆಸಿಸಿ ಸಾಲ ಪಡೆದಿದ್ದು ತನ್ನ ಖಾತೆಗೆ ಕೇವಲ 302.40 ರೂ. ಮೊತ್ತ ವರ್ಗಾಯಿಸಲಾಗಿದೆ. ಇದು ತಾನು ಪಾವತಿಸಿರುವ ಪ್ರೀಮಿಯಂ ಮೊತ್ತವಾಗಿದೆ. ಕ್ಲೇಮ್ ಮೊತ್ತವಲ್ಲ ಎಂದು ರಾಮಗಢದ ಕೆಸಿಸಿ ಕಾರ್ಡ್ ಹೊಂದಿರುವ ರೈತ ಖೇತಾರಾಮ್ ಎಂಬವರು ಅಳಲು ತೋಡಿಕೊಂಡಿದ್ದಾರೆ. ಬ್ಯಾಂಕ್ ನಡೆಸಿರುವ ಪ್ರಮಾದ ಬೆಳಕಿಗೆ ಬರುತ್ತಿದ್ದಂತೆಯೇ ಜಿಲ್ಲೆಯ ರೈತರು ಕಳೆದ ಜುಲೈಯಲ್ಲಿ 36 ದಿನ ಪ್ರತಿಭಟನೆ ನಡೆಸಿದ್ದರು. ಬಳಿಕ, ರೈತರಿಗೆ ಬರಬೇಕಿರುವ ಹಣವನ್ನು ಪಾವತಿಸುವುದಾಗಿ ಬ್ಯಾಂಕ್ ಆಗಸ್ಟ್ 20ರಂದು ಒಪ್ಪಿದ್ದು ಪಾವತಿ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ ಎಂದು ರೈತರು ತಿಳಿಸಿದ್ದಾರೆ.

ಇದು ಬ್ಯಾಂಕಿನ ಸಿಬ್ಬಂದಿ ಎಸಗಿರುವ ಪ್ರಮಾದವಾಗಿದ್ದು ಇದರಲ್ಲಿ ನಮ್ಮ ಪಾತ್ರವೇನಿಲ್ಲ. ಆದರೆ ರೈತರಿಗೆ ಪರಿಹಾರ ನೀಡುವಂತೆ ಬ್ಯಾಂಕ್‌ಗೆ ಸೂಚಿಸಲಾಗಿದೆ ಎಂದು ಹನುಮಾನ್‌ಗಢದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಬಲ್ವೀರ್ ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X