ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಮಂಡ್ಯ, ಸೆ.19: ಕಾರು ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಕಟ್ಟಡ ಕಾರ್ಮಿಕರಾದ ಬೈಕ್ ಸವಾರ ಕಿರಣ್ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿರುವ ಭಾಸ್ಕರ್ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಕಿರಣ್, ಭಾಸ್ಕರ್ ಬೈಕ್‍ನಲ್ಲಿ ಕಟ್ಟಡ ನಿರ್ಮಾಣ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story