Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಸಂತ್ರಸ್ತರಿಗಾಗಿ ಉದ್ಯೋಗ ಮೇಳ;...

ಮಡಿಕೇರಿ: ಸಂತ್ರಸ್ತರಿಗಾಗಿ ಉದ್ಯೋಗ ಮೇಳ; 400 ಕ್ಕೂ ಅಧಿಕ ಮಂದಿಯಿಂದ ಉದ್ಯೋಗ ಕೋರಿ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ19 Sept 2018 11:44 PM IST
share
ಮಡಿಕೇರಿ: ಸಂತ್ರಸ್ತರಿಗಾಗಿ ಉದ್ಯೋಗ ಮೇಳ; 400 ಕ್ಕೂ ಅಧಿಕ ಮಂದಿಯಿಂದ ಉದ್ಯೋಗ ಕೋರಿ ಅರ್ಜಿ

ಮಡಿಕೇರಿ, ಸೆ.19 : ಸಂತ್ರಸ್ತ ಯುವ ಜನರಿಗಾಗಿ ಪ್ರಜಾಸತ್ಯ ದಿನಪತ್ರಿಕೆ ಬಳಗದಿಂದ ಬುಧವಾರ ನಗರದ ರೋಟರಿ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 400 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಸುಮಾರು 15 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಯುವ ಸಮೂಹಕ್ಕೆ ಉದ್ಯೋಗ ದೊರಕಿಸುವ ಭರವಸೆ ನೀಡಿದವು.  

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಜಾಸತ್ಯ ದಿನಪತ್ರಿಕೆಯ ಸಂಪಾದಕ ಡಾ.ನವೀನ್ ಕುಮಾರ್, ಕಾಯಕವೇ ಕೈಲಾಸವೆಂದು ಜಗಜ್ಯೋತಿ ಬಸವಣ್ಣ ನುಡಿದಿರುವಂತೆ ಕಾಯಕದಿಂದಲೇ ಸಂತಸ ಅನುಭವಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಅವಶ್ಯಕ. ಆದ್ದರಿಂದ ಆತ್ಮ ಸಂತೃಪ್ತಿಯ ಬದುಕು ಕಂಡುಕೊಳ್ಳಬೇಕಿದೆ ಎಂದರು.    

ದುಃಖದ ಸಂದರ್ಭದಲ್ಲಿ ಸಾಂತ್ವನ ಮಾತು ಹೇಳುವುದು ಅಗತ್ಯ. ಆದರೆ ಅನುಕಂಪದಿಂದಲೇ ಎಲ್ಲವನ್ನೂ ಗಳಿಸಲು ಸಾಧ್ಯವಿಲ್ಲ. ಆದ್ದರಿಂದ ಲೌಖಿಕ ಸಂಪತ್ತು ಮತ್ತು ಸಂತಸ ಎರಡು ಅವಶ್ಯಕ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಸಮಾಜ ನಿರ್ಮಾಣದಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿದಾಗ ಅಭಿವೃದ್ಧಿ ಸಾಧ್ಯ. ಆ ದಿಸೆಯಲ್ಲಿ ಕಠಿಣ ಶ್ರಮ ಜೊತೆಗೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಜಪಾನ್, ಚೀನಾದಂತಹ ರಾಷ್ಟ್ರಗಳಲ್ಲಿ ಪ್ರಕೃತಿ ವಿಕೋಪಗಳು ಸರ್ವೇ ಸಾಮಾನ್ಯವಾಗಿದೆ. ಆದರೂ ಆ ದೇಶದ ಜನರು ಯಾವುದಕ್ಕೂ ದೃತಿಗೆಡದೆ ಬದುಕು ಕಟ್ಟಿಕೊಂಡು ಮುನ್ನಡೆಯುತ್ತಾರೆ ಎಂದು ಅವರು ಹೇಳಿದರು. ಸಂತ್ರಸ್ತರು ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಸಬೇಕು ಎಂದರು. 

ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮಾತನಾಡಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಬದುಕು ಕಟ್ಟಿಕೊಳ್ಳುವಂತಾಗಲು ಪ್ರಜಾಸತ್ಯ ದಿನಪತ್ರಿಕೆಯೊಂದಿಗೆ ಶಕ್ತಿ ಬಳಗವು ಕೈಜೋಡಿಸಲಿದೆ. ಜೊತೆಗೆ ಸಂಘ ಸಂಸ್ಥೆಗಳ ಸಹಕಾರ ಪಡೆದು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸೋಣ ಎಂದು ಹೇಳಿದರು. ಪ್ರಕೃತಿಯ ಮುಂದೆ ಮಾನವ ಅತ್ಯಲ್ಪ. ಆದ್ದರಿಂದ ನೈತಿಕ ಧೈರ್ಯವನ್ನು ನೀಡುವುದು ಅತ್ಯಗತ್ಯ. ಜೀವನದ ಮುಂದಿನ ಸವಾಲುಗಳನ್ನು ಎದುರಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕಿದೆ ಎಂದು ಅವರು ಸಲಹೆ ಮಾಡಿದರು. ಭೂಮಿಯಲ್ಲಿ ಬದುಕಿರುವ ಮಾನವನಿಗೆ ಜಲ ಅತೀ ಮುಖ್ಯ. ಆದರೆ ಜಲಾವೃತವಾದರೆ ಪರಿಣಾಮವೇ ಬೇರಾಗುತ್ತದೆ ಎಂದು ಅವರು ಎಚ್ಚರಿಸಿದರು. 

ಸಾಹಿತಿ ನಾಗೇಶ್ ಕಾಲೂರು ಮಾತನಾಡಿ, ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಯನ್ನು ‘ರಾಷ್ಟ್ರೀಯ ಮಹಾ ವಿಪತ್ತು’ ಎಂದು ಘೋಷಣೆ ಮಾಡುವಂತಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ. ಮಳೆಹಾನಿ, ಬರೆ ಕುಸಿತ ಎಂಬುದಕ್ಕಿಂತ ಮಹಾ ಉತ್ಪಾದ, ಜಲಸ್ಪೋಟ ಎಂದು ಹೇಳಬೇಕಿದೆ ಎಂದು ಅವರು ಸಲಹೆ ಮಾಡಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ನಿಜವಾದ ಸಂತ್ರಸ್ತರಿಗೆ ಸೌಲಭ್ಯಗಳು ದೊರೆಯುವಂತಾಗಬೇಕು. ಸಂತ್ರಸ್ತರು ಸೊನ್ನೆಯಿಂದ ಪುನಃ ಜೀವನ ಆರಂಭಿಸಬೇಕಿದೆ ಎಂದು ಅವರು ಹೇಳಿದರು. 

ಜಲಸ್ಪೋಟವು ಹಾರಂಗಿ ನೀರಿನಿಂದ ಆಯಿತು ಎನ್ನುವವರು ಇದ್ದಾರೆ. ಈ ಸಂಬಂಧ ತಜ್ಞರಿಂದ ನಿಖರ ಮಾಹಿತಿ ಗೊತ್ತಾಗಬೇಕಿದೆ ಎಂದು ಅವರು ಹೇಳಿದರು. ಪ್ರತಿಯೊಬ್ಬರೂ ಸ್ವ ಉದ್ಯೋಗ ಕೈಗೊಳ್ಳಬೇಕು. ಇದರಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್ ಮಾತನಾಡಿ, ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ನಿರಾಶ್ರಿತರಾಗಿ ಉದ್ಯೋಗ ಕಳೆದುಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಲವು ಕಂಪನಿಗಳು ಉದ್ಯೋಗ ನೀಡಲು ಬಂದಿದ್ದು, ಕೆಲವು ಕಂಪನಿಗಳು ನೇರವಾಗಿ ಉದ್ಯೋಗ ನೀಡುತ್ತದೆ. ಕೆಲವು ಕಂಪನಿಗಳು ತರಬೇತಿ ನೀಡಿ ಸ್ವ ಉದ್ಯೋಗ ಕೈಗೊಳ್ಳುವಂತಾಗಲು ನೆರವು ನೀಡುತ್ತಾರೆ ಎಂದು ಅವರು ತಿಳಿಸಿದರು. ಧನಂಜಯ ನಿರೂಪಿಸಿದರು. ಮುರುಗೇಶ್ ಪ್ರಾರ್ಥಿಸಿ, ವಂದಿಸಿದರು.

ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕಾವೇರಿ ಟೈಮ್ಸ್ ಪತ್ರಿಕೆಯ ಬೊಳ್ಳಜ್ಜೀರ ಅಯ್ಯಪ್ಪ, ಚಾನಲ್ 24ನ ಸುರೇಶ್ ಹಾಗೂ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X