Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಯುವಕನನ್ನು ವಿವಾಹವಾದ ಪುತ್ರಿಯ ಕೈ...

ದಲಿತ ಯುವಕನನ್ನು ವಿವಾಹವಾದ ಪುತ್ರಿಯ ಕೈ ಕತ್ತರಿಸಿದ ತಂದೆ

ವಾರ್ತಾಭಾರತಿವಾರ್ತಾಭಾರತಿ20 Sept 2018 9:17 AM IST
share
ದಲಿತ ಯುವಕನನ್ನು ವಿವಾಹವಾದ ಪುತ್ರಿಯ ಕೈ ಕತ್ತರಿಸಿದ ತಂದೆ

ಹೈದರಾಬಾದ್, ಸೆ.20: ದಲಿತ ಯುವಕನ್ನು ವಿವಾಹವಾದ ಕಾರಣಕ್ಕೆ ತಂದೆಯೇ ಮಗಳ ಕೈ ಕತ್ತರಿಸಿದ ಹೃದಯ ವಿದ್ರಾವಕ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಹೊಸದಾಗಿ ವಿವಾಹವಾದ ದಲಿತ ಯುವಕನ ಮೇಲೂ ಹಲ್ಲೆ ಮಾಡಲಾಗಿದೆ. ಮಗಳ ದವಡೆಯನ್ನೂ ಭಾಗಶಃ ಕತ್ತರಿಸಲಾಗಿದೆ.

ನಲ್ಗೊಂಡಾದಲ್ಲಿ ದಲಿತ ಯುವಕನೊಬ್ಬನನ್ನು ಗರ್ಭಿಣಿ ಪತ್ನಿಯ ಎದುರೇ ನಿರ್ದಯವಾಗಿ ಹತ್ಯೆ ಮಾಡಿದ ಘಟನೆಯ ಬೆನ್ನಲ್ಲೇ ಮತ್ತೊಂದು ಇಂಥ ಭೀಬತ್ಸ ಪ್ರಕರಣ ಬೆಳಕಿಗೆ ಬಂದಿದೆ.

ಇತರ ಹಿಂದುಳಿದ ವರ್ಗಕ್ಕೆ ಸೇರಿದ ಯುವತಿ ದಲಿತ ಯುವಕನನ್ನು ವಿವಾಹವಾದ್ದರಿಂದ ರೊಚ್ಚಿಗೆದ್ದ ತಂದೆ ಮೊದಲು ಯುವಕ ಬಿ.ಸಂದೀಪ್ (22) ಎಂಬಾತನ ಮೇಲೆ ಹಲ್ಲೆ ಮಾಡಿದರು. ಸಂದೀಪ್ ಹಾಗೂ ಮಾಧವಿ ಚಾರಿ ಐದು ವರ್ಷಗಳಿಂದ ಪ್ರೇಮಸಂಬಂಧ ಹೊಂದಿದ್ದು, ತಂದೆ ಮನೋಹರ್ ಚಾರಿ (42)ಯ ತೀವ್ರ ವಿರೋಧದ ನಡುವೆಯೂ ಸೆಪ್ಟೆಂಬರ್ 12ರಂದು ರಹಸ್ಯವಾಗಿ ವಿವಾಹವಾಗಿದ್ದರು. ಬುಧವಾರ ಮಧ್ಯಾಹ್ನ ಮಗಳಿಗೆ ದೂರವಾಣಿ ಕರೆ ಮಾಡಿ ಅಳಿಯನೊಂದಿಗೆ ಬರುವಂತೆ ತಂದೆ ಆಹ್ವಾನಿಸಿದ್ದ.

ಎರ್ರಗಡ್ಡ ಪ್ರದೇಶದ ಗೋಕುಲ್ ಥಿಯೇಟರ್ ಬಳಿಗೆ ಸಂಜೆ 3:30ರ ವೇಳೆಗೆ ಬಂದಾಗ, ಮಾಧವಿಯ ತಂದೆ ಚೀಲದಿಂದ ಹರಿತವಾದ ಆಯುಧ ತೆಗೆದು ಮೊದಲು ಸಂದೀಪ್ ಮೇಲೆ ಹಲ್ಲೆಗೆ ಮುಂದಾದ. ತಕ್ಷಣ ಸಂದೀಪ್ ತಪ್ಪಿಸಿಕೊಂಡು ಹೋಗಿರುವುದು ಪೊಲೀಸ್ ಸಿಸಿಟಿವಿ ದೃಶ್ಯಾವಳಿಯಿಂದ ಕಂಡುಬರುತ್ತದೆ. ಆಗ ಮಗಳತ್ತ ಕತ್ತಿ ಬೀಸಿದ ತಂದೆ ಆಕೆಯ ಕೈ ಕತ್ತರಿಸಿದ. ಬಳಿಕ ಮುಖವನ್ನೂ ಗಾಯಗೊಳಿಸಿದ. ಮಾಧವಿ ನೆಲದ ಮೇಲೆ ಬಿದ್ದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣುತ್ತದೆ. ಮತ್ತೆ ಮಗಳ ಮೇಲೆ ಕತ್ತಿ ಬೀಸಿದಾಗ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಮನೋಹರ್‌ನನ್ನು ಒದ್ದ. ತಕ್ಷಣ ಮನೋಹರ್ ಸ್ಥಳದಿಂದ ಪರಾರಿಯಾದ. ಮನೋಹರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಮಾಧವಿಯ ಮುಖದಿಂದ ಕುತ್ತಿಗೆಯುದ್ದಕ್ಕೂ 12 ಇಂಚು ಗಾಯವಾಗಿದೆ. ಎಡಗೈ ಚರ್ಮದಲ್ಲಿ ನೇತಾಡುತ್ತಿತ್ತು. ಕೈ ಮರುಜೋಡಿಸುವ ಶಸ್ತ್ರಚಿಕಿತ್ಸೆ ಪ್ರಗತಿಯಲ್ಲಿದೆ. ಸಂದೀಪ್‌ನ ಬಾಯಿಯ ಬಳಿಯೂ ಗಾಯವಾಗಿದ್ದು, 10 ಹೊಲಿಗೆ ಹಾಕಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X