Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.22ರಂದು ತಮ್ಮಯ ಅವರಿಗೆ ಚಾವಡಿ ತಮ್ಮನ...

ಸೆ.22ರಂದು ತಮ್ಮಯ ಅವರಿಗೆ ಚಾವಡಿ ತಮ್ಮನ ಗೌರವ

ವಾರ್ತಾಭಾರತಿವಾರ್ತಾಭಾರತಿ20 Sept 2018 8:13 PM IST
share
ಸೆ.22ರಂದು ತಮ್ಮಯ ಅವರಿಗೆ ಚಾವಡಿ ತಮ್ಮನ ಗೌರವ

ಬಂಟ್ವಾಳ, ಸೆ. 20: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರಿಗೆ ಕೊಡಮಾಡುವ "ಚಾವಡಿ ತಮ್ಮನ" ಗೌರವಕ್ಕೆ ಈ ಬಾರಿ ಹಿರಿಯ ಸಾಹಿತಿ, ತುಳು ಲಿಪಿ ಶಿಕ್ಷಕ ಬಿ.ತಮ್ಮಯ ಅವರು ಆಯ್ಕೆಯಾಗಿದ್ದಾರೆ.

ಮಂಗಳೂರು ಉರ್ವಸ್ಟೋರ್‌ನಲ್ಲಿರುವ ಅಕಾಡೆಮಿಯ ತುಳುಭವನದ "ಸಿರಿ ಚಾವಡಿಯಲ್ಲಿ" ಬಿ.ತಮ್ಮಯ ಅವರಿಗೆ "ಚಾವಡಿ ತಮ್ಮನ" ಕಾರ್ಯಕ್ರಮವು ಸೆ.22ರಂದು ಮಧ್ಯಾಹ್ನ 3:30ಕ್ಕೆ ನಡೆಯಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ.ಬಿ.ಮತ್ತು ಕಾರ್ಯಕ್ರಮದ ಸದಸ್ಯ ಸಂಚಾಲಕ ಎ.ಗೋಪಾಲ ಅಂಚನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸುವರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಟಿ.ಹೆಬ್ಬಾರ್ ಬಿ.ತಮ್ಮಯರ ಬಗ್ಗೆ ಅಭಿನಂದನಾ ಭಾಷಣ ಮಾಡುವರು.

ತಮ್ಮಯರ ಪರಿಚಯ:
ವಿದ್ಯಾರ್ಥಿ ಜೀವನದಲ್ಲೇ ನಾಟಕ, ಯಕ್ಷಗಾನ, ತಾಳಮದ್ದಳೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಬಿ.ತಮ್ಮಯ ಅವರು ನಾನಾ ಕಡೆಗಳಲ್ಲಿ ಸಂಘಟನೆಗಳನ್ನು ಸ್ಥಾಪಿಸಿ ತುಳು ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸಿ ಪ್ರದರ್ಶಿಸಿದವರು.

ಕಂದಾಯ ಇಲಾಖೆಯಲ್ಲಿ ವೃತ್ತಿ ಬದುಕಿನ ನಡುವೆಯೇ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡ ಇವರು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ- ಅಧ್ಯಕ್ಷರಾಗಿ, ಯುವವಾಹಿನಿಯ ಸಲಹೆಗಾರರಾಗಿ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು.

ಪ್ರಸ್ತುತ "ತುಳುವೆ" ತುಳುಲಿಪಿ ಪತ್ರಿಕೆಯ ಸಂಪಾದಕರಾಗಿ, ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಯಾಗಿರುವ ಇವರು ಹಣತೆ, ನಾರಾಯಣ ಗುರು ಭಜನೆ, ಚಿಂತನ ಮಂಥನ, ಹಿಂದಿರುಗಿ ನೋಡಿದಾಗ, ಕರಿಕೋಟು, ಕಾಡಿನ ಹಕ್ಕಿ ಹಾಡಿತು, ತಟಪಟ ಹನಿ, ತುಳುವೆರೆ ಪರ್ಬ, ತುಳು ಲಿಪಿ ಕಲ್ಪಿ-ತುಳು ಮೊದಲಾದ ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ.

ಹಲವಾರು ಶಾಲಾ ಕಾಲೇಜು ಮತ್ತು ಸಂಘಟನೆಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಲಿಪಿ ಕಲಿಸುವ ಮೂಲಕ "ತುಳು ಮಾಸ್ತರ್" ಎನಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X