ಸೆ.21ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕರೆ
ಬೆಂಗಳೂರು, ಸೆ.20: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯಿಂದ ಸೆ.21ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.
ಇತ್ತೀಚಿಗೆ ಹಾಸನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ದಂಗೆ ಏಳಿ ಎಂದು ಕರೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದು ಕಾನೂನು ಉಲ್ಲಂಘನೆಯಾಗಿದ್ದು, ಸಿಎಂ ಸ್ಥಾನದಲ್ಲಿದ್ದು, ಈ ರೀತಿ ಹೇಳಿಕೆ ನೀಡಿರುವುದು ಕಾನೂನು ಬಾಹಿರವಾಗಿದೆ. ಹೀಗಾಗಿ, ಕಾನೂನು ಪಾಲನೆ ಮಾಡದವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.
Next Story