Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿಂತನೆಶೀಲತೆ, ಸೃಜನಾಶೀಲತೆಯಿಂದ ಕೂಡಿದ...

ಚಿಂತನೆಶೀಲತೆ, ಸೃಜನಾಶೀಲತೆಯಿಂದ ಕೂಡಿದ ಪಲ್ಲಟದ ಅವಶ್ಯಕತೆಯಿದೆ : ಡಾ. ಚಂದ್ರಶೇಖರ ದಾಮ್ಲೆ

ವಾರ್ತಾಭಾರತಿವಾರ್ತಾಭಾರತಿ20 Sept 2018 11:57 PM IST
share
ಚಿಂತನೆಶೀಲತೆ, ಸೃಜನಾಶೀಲತೆಯಿಂದ ಕೂಡಿದ ಪಲ್ಲಟದ ಅವಶ್ಯಕತೆಯಿದೆ : ಡಾ. ಚಂದ್ರಶೇಖರ ದಾಮ್ಲೆ

ಪುತ್ತೂರು,ಸೆ.20: ಕಾಲ ಬದಲಾದಂತೆ ಪಲ್ಲಟಗಳಾಗುವುದು ಸಹಜ. ಆದರೆ ಪ್ರಸ್ತುತ ಚಿಂತನೆಶೀಲತೆ, ಸೃಜನಾಶೀಲತೆಯಿಂದ ಕೂಡಿದ ಪಲ್ಲಟದ ಅವಶ್ಯಕತೆ ಇದೆ. ಇದನ್ನು ತರುವ ಶಕ್ತಿ ಯುವ ಸಮುದಾಯದ ಮೇಲಿದೆ ಎಂದು ಪತ್ರಕರ್ತ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು.

ಅವರು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದ ಜಿ.ಎಲ್. ಆಚಾರ್ಯ ಸಭಾಂಗಣದಲ್ಲಿ ಹಾಗೂ ಎನ್.ವಿ. ಮೂರ್ತಿ ವೇದಿಕೆಯಲ್ಲಿ ನಡೆದ ಪುತ್ತೂರು ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯುವ ಜನತೆ ಮತ್ತು ಕೌಟುಂಬಿಕ ಪಲ್ಲಟಗಳು ಕುರಿತಾದ ವಿಚಾರಗೋಷ್ಠಿಯಲ್ಲಿ ಕೌಟುಂಬಿಕ ಪಲ್ಲಟಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಪ್ರಸ್ತುತ ಶಿಕ್ಷಣ, ಕೌಟುಂಬಿಕ ವಿಚಾರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಲ್ಲಟಗಳು ಆಗುತ್ತಿವೆ. ಮಕ್ಕಳು ಮನೆಯಲ್ಲಿ ಹೋಂವರ್ಕ್, ಶಾಲೆಗೆ ಬಂದಾಗ ಆಡುತ್ತಿರುತ್ತಾರೆ. ಇದು ಪಲ್ಲಟದ ವಿಚಾರವನ್ನು ತಿಳಿಸುತ್ತದೆ. ಕುಟುಂಬ ಎಂಬುವುದು ಸರ್ವೋದಯ ಮೂಲಬೀಜವಾಗಿದ್ದು, ಮಕ್ಕಳಿಗೆ ಪೋಷಕರು ಭಯ ಪಡುವ ಸನ್ನಿವೇಶ ನಿರ್ಮಾಣವಾಗಿದೆ. ಈಗ ಮಕ್ಕಳೇ ಯಜಮಾನರು ಎಂದು ಕೌಟುಂಬಿಕ ಪಲ್ಲಟದ ಕುರಿತು ವಿವರಿಸಿದರು.

ಗ್ರಾಮೀಣ ಬದುಕಿನ ಪಲ್ಲಟಗಳು ಎಂಬ ವಿಚಾರದ ಕುರಿತು ಉಪನ್ಯಾಸ ನೀಡಿದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗದ ನಿರ್ದೇಶಕಿ ಮನೋರಮಾ ಭಟ್ ಉಜಿರೆ, ಗ್ರಾಮೀಣ ಬದುಕು ಇಂದು ಪಲ್ಲಟವಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೇವಲ ಋಣಾತ್ಮಕ ಪಲ್ಲಟಗಳನ್ನು ಮಾತ್ರವಲ್ಲದೆ ಧನಾತ್ಮಕ ಪಲ್ಲಟಗಳನ್ನು ಗುರುತಿಸಲು ಅವಕಾಶವಿದೆ. ಸ್ವದೇಶಿ ಕಲ್ಪನೆ ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಸಾಕಾಗದು. ಅದನ್ನು ಅನುಷ್ಠಾನಗೊಳಿಸುವಲ್ಲಿ ಯುವಜನತೆ ಮುಂದೆ ಬಂದಾಗ ಮಾತ್ರ ಗ್ರಾಮೀಣ ಬದುಕಿನಲ್ಲಿ ಸ್ವದೇಶಿ ಕಲ್ಪನೆಯ ಪಲ್ಲಟಗಳು ಧನಾತ್ಮಕವಾಗಿ ಇರಲು ಸಾಧ್ಯವಿದೆ. ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಕೂಡಾ ಬಹುರಾಷ್ಟ್ರೀಯ ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಸ್ವದೇಶಿ ಕಲ್ಪನೆಗೆ ಹಿನ್ನಡೆಯಾಗುತ್ತಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಗ್ರಾಮೋದ್ಯೋಗವು ಗ್ರಾಮೀಣ ಜನರಲ್ಲಿ ಸ್ವದೇಶಿ ಕಲ್ಪನೆಯನ್ನು ಮೂಡಿಸಿದೆ. ಇದು ಗ್ರಾಮೀಣ ಭಾಗದ ಅಭ್ಯುಧಯಕ್ಕೆ ಕಾರಣವಾಗಿದೆ. ಖಾಸಗೀಕರಣ ಮತ್ತು ಕೈಗಾರೀಕರಣದ ಪ್ರಭಾವದಿಂದ ಗ್ರಾಮೀಣ ಬದುಕಿನಲ್ಲಿ ಪಲ್ಲಟಗಳು ತೀವ್ರವಾಗಿ ನಡೆದಿವೆ. ಹಸಿರು ಕ್ರಾಂತಿಯಿಂದ ಹಿಡಿದ ಕೈಗಾರೀಕರಣದವರೆಗೂ ಗ್ರಾಮೀಣ ಬದುಕಿನಲ್ಲಿ ಪಲ್ಲಟವಾಗಿದೆ. ಇವುಗಳಿಗೆ ಪರಿಹಾರವಾಗಿ ಸರಕಾರದ ನೀತಿಗಳಲ್ಲಿ ಬದಲಾಗಬೇಕಾಗಿದೆ. ರೈತರು ಬೆಳೆದ ಬೆಲೆಗೆ ಸ್ಥಿರ ಮಾರುಕಟ್ಟೆಯ ವ್ಯವಸ್ಥೆಯ ಅವಶ್ಯಕತೆ ಇದೆ ಎಂದು ಅಭಿಪ್ರಾಯಿಸಿದರು.

ಅಧ್ಯಕ್ಷತೆ ವಹಿಸಿದ್ದ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಮಾತನಾಡಿ, ಇಂದು ಬಾಹ್ಯ ಸಂಬಂಧಗಳು ಗಟ್ಟಿಯಾಗಿದ್ದು, ಅಂತರ್ ಸಂಬಂಧಗಳು ಕಡಿಮೆಯಾಗುತ್ತಿವೆ. ಆತ್ಮಬಂಧಗಳು, ಪ್ರೀತಿಗಳು ಕೌಟುಂಬಿಕ ವ್ಯಾಪ್ತಿಯಿಂದ ಮರೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಾವು ಆತ್ಮ ವಿಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ನಮ್ಮಲ್ಲಿ ಸಹಿಷ್ಣುತೆ ಕಡಿಮೆಯಾಗಿದ್ದು, ಸೌಕರ್ಯಗಳು, ಸೌಲಭ್ಯಗಳು ಹೆಚ್ಚಾದಂತೆ ನಿರಾಸೆ, ದುಃಖಗಳು ಹೆಚ್ಚಾಗುತ್ತವೆ. ಹಣ ಸಂಪಾದಿಸುವ ದಾವಂತದಲ್ಲಿ ಬದುಕಿನ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಈ ನಿಟ್ಟಿನಲ್ಲಿ ಇಂದು ಬದುಕು ಕಲಿಸುವ ಪಾಠಶಾಲೆಗಳ ಅವಶ್ಯಕತೆ ಇದ್ದು, ಅಂತಹ ಪಾಠಶಾಲೆಗಳು ನಮ್ಮ ಮನೆಗಳಾಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷ ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ರೋಹಿಣಿ ಆಚಾರ್ಯ ಉಪಸ್ಥಿತರಿದ್ದರು. ಪ್ರೊ. ವತ್ಸಲಾ ರಾಜ್ಞಿ ಸ್ವಾಗತಿಸಿ, ಕವಯಿತ್ರಿ ಕವಿತಾ ಅಡೂರು ಸ್ವಾಗತಿಸಿದರು. ಉಪನ್ಯಾಸಕಿ ಭವ್ಯಾ ಆರ್. ನಿಡ್ಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X