Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೆ.22: ಸರ್.ಸಿ.ವಿ.ರಾಮನ್‌ ನಗರದಲ್ಲಿ...

ಸೆ.22: ಸರ್.ಸಿ.ವಿ.ರಾಮನ್‌ ನಗರದಲ್ಲಿ 3ನೆ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ21 Sept 2018 9:55 PM IST
share

ಬೆಂಗಳೂರು, ಸೆ.21: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರ್.ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರದ 3ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶನಿವಾರ ಬೆಳಗ್ಗೆ 8ಗಂಟೆಗೆ ಇಂದಿರಾ ನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಭಾರತಿ ವೃಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 

ಶಾಸಕ ಎಸ್.ರಘು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮಾಯಣ್ಣ ಪರಿಷತ್‌ನ ಧ್ವಜ ಹಾಗೂ ಸರ್.ಸಿ.ವಿ.ರಾಮನ್‌ನಗರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮೊಮ್ಮದ್ ಮುನಾಫ್ ಕನ್ನಡ ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ಖ್ಯಾತ ವೈದ್ಯ ಪುಟ್ಟಶಂಕರಪ್ಪ ಆಯ್ಕೆಯಾಗಿದ್ದು, ಬೆಳಗ್ಗೆ 9ಗಂಟೆಗೆ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಪಿ.ಸಿ.ಮೋಹನ್ ನೆರವೇರಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಸಲೀಂ ಪಾಷ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಾಡೋಜ, ಕವಿ ಡಾ.ಸಿದ್ದಲಿಂಗಯ್ಯ ಉದ್ಘಾಟಿಸಲಿದ್ದಾರೆ. ಸಂಸ್ಕೃತಿ ಚಿಂತಕ ಚಿರಂಜೀವಿ ಸಿಂಗ್, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್, ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಭಾಕರ್ ಪಟೇಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಚಿಂತನಾಗೋಷ್ಠಿ ನಡೆಯಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ, ವಿಮರ್ಶಕ ಭೈರಮಂಗಲ ರಾಮೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಹ.ರಾ.ನಾಗರಾಜಾಚಾರ್ಯ, ಕಾರ್ಮಿಕ ಮುಖಂಡ ಕೆ.ಪ್ರಕಾಶ್ ವಿಷಯ ಮಂಡನೆ ಮಾಡಲಿದ್ದಾರೆ. ಸಂಜೆ 3.30ಕ್ಕೆ ಕವಿಗೋಷ್ಠಿ ನಡೆಯಲಿದ್ದು, ಅನುವಾದಕ ಸುಧಾಕರ್ ರಾಮನ್‌ಥಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಉಪನ್ಯಾಸಕರಾದ ವಿ.ಎಸ್.ಹಿರೇಮಠ್, ರಾಮಲಿಂಗೇಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 4ಗಂಟೆಗೆ ಹಿಂದೂಸ್ಥಾನಿ ಗಾಯನ, ಭರತನಾಟ್ಯ ಸೇರಿ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಂಜೆ 5ಗಂಟೆಗೆ ಸಮಾರೋಪ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ವಹಿಸಲಿದ್ದು, ರಾಜ್ಯಸಭಾ ಸದಸ್ಯರಾದ ಕೆ.ಸಿ.ರಾಮಮೂರ್ತಿ, ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ನಿಕಟಪೂರ್ವ ಅಧ್ಯಕ್ಷ ಟಿ.ತಿಮ್ಮೇಶ್ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ನಾರಾಯಣಸ್ವಾಮಿ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X