Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : ಕೋಮು ಪ್ರಚೋದನಾತ್ಮಕ ಭಾಷಣ;...

ವಿಟ್ಲ : ಕೋಮು ಪ್ರಚೋದನಾತ್ಮಕ ಭಾಷಣ; ಕಾಸರಗೋಡು ಹಿಂದೂ ಐಕ್ಯ ವೇದಿಕೆಯ ಮುಖಂಡನ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Sept 2018 10:03 PM IST
share
ವಿಟ್ಲ : ಕೋಮು ಪ್ರಚೋದನಾತ್ಮಕ ಭಾಷಣ; ಕಾಸರಗೋಡು ಹಿಂದೂ ಐಕ್ಯ ವೇದಿಕೆಯ ಮುಖಂಡನ ಬಂಧನ

ಬಂಟ್ವಾಳ, ಸೆ. 21: ಇಸ್ಲಾಂ ಧರ್ಮದ ಬಗ್ಗೆ ನಿಂದನೆ ಹಾಗೂ ಕೋಮು ಪ್ರಚೋದನಾತ್ಮಕ ಭಾಷಣ ಮಾಡಿರುವ ಕಾಸರಗೋಡು ಹಿಂದೂ ಐಕ್ಯ ವೇದಿಕೆಯ ಮುಖಂಡನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಾಸರಗೋಡು ಬಿಜೆಪಿ ಪ್ರಮುಖ ರವೀಷ ತಂತ್ರಿಯವರ ಸಹವರ್ತಿ, ಕಾಸರಗೋಡ್ ಹಿಂದೂ ಐಕ್ಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಉಡುಪ (32) ಬಂಧಿತ ಆರೋಪಿ.

ಈತ ಘಟನೆಯ ದಿನದಿಂದ ತಲೆಮರೆಸಿಕೊಂಡಿದ್ದು, ಸೆ.19ರಂದು ನ್ಯಾಯಾಲಯದಿಂದ ಜಾಮೀನು ಪಡೆದು ಠಾಣೆಗೆ ಹಾಜರಾದವನನ್ನು ದಸ್ತಗಿರಿ ಮಾಡಲಾಗಿದೆ. ಈತನ ವಿರುದ್ಧ ಮತೀಯ ಗೂಂಡಾಶೀಟ್ ತೆರೆಯಲು ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಬಂಟ್ವಾಳ ತಾಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಗ್ರಾಮದಲ್ಲಿ ಸೆ. 9ರಂದು ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಖಾಸಗಿ ಜಾಗದಲ್ಲಿ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಕೇರಳದ ಕಾಸರಗೋಡು ಜಿಲ್ಲಾ ಹಿಂದೂ ಐಕ್ಯವೇಧಿ ಕಾರ್ಯದರ್ಶಿ ಮಂಜುನಾಥ ಉಡುಪ ಯಾನೆ ಪುಷ್ಪರಂಗ ಭಟ್ ಎಂಬಾತ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದಿಕ್ಸೂಚಿ ಭಾಷಣದಲ್ಲಿ ಅನ್ಯಧರ್ಮದವರನ್ನು ಹೀಯಾಳಿಸಿ, ಕೋಮು ಪ್ರಚೋಧನಕಾರಿಯಾಗಿ ಭಾಷಣ ಮಾಡಿದ್ದಾನೆ. ಅಲ್ಲದೆ, ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯದೆ ಧ್ವನಿವರ್ಧಕವನ್ನು ಉಪಯೋಗಿಸಿದ್ದು, ಈ ಕುರಿತು ಭಾಷಣ ಮಾಡಿದ ಮಂಜುನಾಥ ಉಡುಪ, ಕಾರ್ಯಕ್ರಮದ ಸಂಘಟಕ ಚೇತನ್ ಪೆಡಿಮಲೆ, ನಿರೂಪಕ ಭಾಸ್ಕರ್ ಟೇಲರ್ ಮತ್ತು ವೇದಿಕೆ ಮೇಲೆ ಹಾಜರಿದ್ದ ಸುರೇಶ ಕೊಟ್ಟಾರಿ, ವರದರಾಜ ಕೊಟ್ಟಾರಿ, ಬಿ.ಕೆ ಕೃಷ್ಣಪ್ಪ ಸಾಲಿಯಾನ, ರಮೇಶ ಪೂಜಾರಿ ಎಂಬವರ ವಿರುದ್ಧ ಕಡಂಬು ಜುಮಾ ಮಸೀದಿಯ ಆಡಳಿತ ಸಮಿತಿ ಈ ದೂರು ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಪ್ರಕರಣ ದಾಖಲಾದ ದಿನದಿಂದ ಆರೋಪಿತರೆಲ್ಲರೂ ತಲೆ ಮರೆಸಿಕೊಂಡಿದ್ದು, ಮಂಜುನಾಥ ಉಡುಪ ಮತ್ತು ಬಿ.ಕೆ ಕೃಷ್ಣಪ್ಪ ಸಾಲಿಯಾನ ಎಂಬವರನ್ನು ಹೊರತು ಪಡಿಸಿ ಉಳಿದ ಆರೋಪಿಗಳು ಸೆ. 11ರಂದು ನ್ಯಾಯಾಲಯದಲ್ಲಿ ಜಾಮೀನು ಪಡೆದು ಠಾಣೆಗೆ ಹಾಜರಾಗಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೂರು ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು:
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಂಜುನಾಥ ಉಡುಪ ಪತ್ತೆಗೆ ಕೇರಳದ ಕಾಸರಗೋಡು ಜಿಲ್ಲೆಯ ಅದೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಳ್ಳೇರಿಯಾ, ಗಾಡಿಗುಡ್ಡೆ, ಕುಂಟಾರು ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈತನು ಕಣಿಯೂರು ಮಠ ಶಾಖೆ ಗಾಡಿಗುಡ್ಡೆ ಮೇಲ್ವಿಚಾರಕನಾಗಿ ಕೆಲಸ ಮಾಡಿಕೊಂಡಿದ್ದು, ಅಲ್ಲದೆ ಕಾಸರಗೋಡು ಬಿಜೆಪಿ ಪ್ರಮುಖ ರವೀಷ ತಂತ್ರಿಯವರ ಸಹವರ್ತಿಯಾಗಿರುತ್ತಾನೆ. ಮತ್ತು ಈತನ ಮೇಲೆ ಅದೂರು ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿರುತ್ತದೆ. ಈತ ಮೂಲತಃ ತುಮಕೂರು ಜಿಲ್ಲೆ ಶೆಟ್ಟಿಕೆರೆ ಗೇಟ್ ಸಿ.ಎನ್ ಹಳ್ಳಿಯವಾನಾಗಿದ್ದು, ಪ್ರಸ್ತುತ ಕಾಸರಗೋಡು ಹಿಂದೂ ಐಕ್ಯವೇದಿ ಜಿಲ್ಲಾ ಕಾರ್ಯದರ್ಶಿಯಾಗಿರುತ್ತಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X