ಚಿಕ್ಕಮಗಳೂರು: ಸೆ.22 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರವಾಸ

ಚಿಕ್ಕಮಗಳೂರು,ಸೆ.21: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆ. 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ ರಾತ್ರಿ 10.30 ಕ್ಕೆ ಶೃಂಗೇರಿಗೆ ಆಗಮಿಸಿ, ಶೃಂಗೇರಿಯಲ್ಲಿ ಅವರು ವಾಸ್ತವ್ಯ ಹೂಡುವರು. ಸೆ.22 ರಂದು ಮಧ್ಯಾಹ್ನ 12.00 ಗಂಟೆಗೆ ಶೃಂಗೇರಿ ತಾಲೂಕಿನ ಮೆಣಸೆ (ಕೊರಡಕಲ್ಲು) ಹೆಲಿಪ್ಯಾಡ್ ಮೂಲಕ ಮಧ್ಯಾಹ್ನ 12.30 ಗಂಟೆಗೆ ನಗರದ ಐ.ಡಿ.ಎ.ಜಿ ಕಾಲೇಜ್ ಮೈದಾನದ ಹೆಲಿಪ್ಯಾಡ್‍ಗೆ ಆಗಮಿಸಿ, ನಗರದ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಅನಾವಷ್ಟಿಯಿಂದ ಉಂಟಾದ ಹಾನಿ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ನಂತರ ಸಂಜೆ 5.00 ಗಂಟೆಗೆ ಹಾಸನಕ್ಕೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಬಿ.ಪಿ.ಚನ್ನಬಸಪ್ಪ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





