Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ...

ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ ತರಬೇತಿ ಕಮ್ಮಟ

ವಾರ್ತಾಭಾರತಿವಾರ್ತಾಭಾರತಿ23 Sept 2018 5:54 PM IST
share
ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ ತರಬೇತಿ ಕಮ್ಮಟ

ಬೆಳ್ತಂಗಡಿ, ಸೆ.23: ಪರಿಶುದ್ಧ ಮನಸ್ಸಿನಿಂದ, ಶ್ರದ್ಧಾ-ಭಕ್ತಿಯಿಂದ ಭಗವಂತನ ಗುಣಗಾನ ಮಾಡಿ ಹಾಡುವುದರಿಂದ ನಮಗೆ ಆನಂದ ಸಿಗುತ್ತದೆ. ಭಜನೆಯಿಂದ ಸಮಾಜದ ಸಂಘಟನೆ ಆಗಬೇಕು ಎಂದು ಧಾರವಾಡದ ಮಣಕವಾಡ ಶ್ರೀ ಗುರು ಅನ್ನದಾನೀಶ್ವರ ದೇವಮಂದಿರ ಸಿದ್ಧರಾಮ ದೇವರು ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಧರ್ಮಸ್ಥಳದ ಶ್ರೀ ಮಹೋತ್ಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಇಪ್ಪತ್ತನೇ ವರ್ಷದ ಭಜನಾ ತರಬೇತಿ ಕಮ್ಮಟವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಭಜನೆ ಕಲಿತು ಇತರರಿಗೂ ಕಲಿಸಿ. ಎಂದೂ ಜಗಳ ಮಾಡಬಾರದು. ವ್ಯಕ್ತಿಯಾಗಿ ಶಿಬಿರಕ್ಕೆ ಬಂದವರು ಅಪಾರ ಶಕ್ತಿಯೊಂದಿಗೆ ಹೊರಗೆ ಹೋಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಶ್ರದ್ಧಾ-ಭಕ್ತಿಯಿಂದ ಭಾಷಾ ಶುದ್ಧಿಯೊಂದಿಗೆ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಬೇಕು. ಯಾವುದೇ ವಿಚಾರಗಳನ್ನು ಸರಿಯಾಗಿ ತಿಳಿದುಕೊಂಡು ಆಚರಣೆ ಮಾಡಬೇಕು. ಸಂಸ್ಕೃತಿಯ ಪಲ್ಲಟದಿಂದಾಗಿ ಮೂಲ ಸ್ವರೂಪ, ತತ್ವ ಮತ್ತು ಸತ್ವಕ್ಕೆ ಧಕ್ಕೆಯಾಗಬಾರದು. ಭಜನೆ ಮೂಲಕ ಮುಕ್ತ ಹಾಗೂ ಮುಗ್ಧ ಮನಸ್ಸಿನಿಂದ ದೇವರ ಆರಾಧನೆ ಮಾಡಬೇಕು ಎಂದರು.

ಹೇಮಾವತಿ ವಿ. ಹೆಗ್ಗಡೆ ಶಿಬಿರಾರ್ಥಿಗಳಿಗೆ ಭಜನಾ ಪರಿಕರಗಳನ್ನು ವಿತರಿಸಿ ಶುಭ ಹಾರೈಸಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ, ನಮ್ಮ ಮನಸ್ಸು, ಭಾವನೆ ಮತ್ತು ಕರ್ಮ ಪರಿಶುದ್ಧವಾದಾಗ ಸಾರ್ಥಕ ಜೀವನ ನಡೆಸಲು ಸಾಧ್ಯ. ಭಜನಾಪಟುಗಳು ನಾಯಕತ್ವ ಗುಣ ಬೆಳೆಸಿಕೊಂಡು ಸಮಾಜದ ದುಶ್ಚಟಗಳು ಹಾಗೂ ದೌರ್ಬಲ್ಯಗಳನ್ನು ದೂರ ಮಾಡುವ ಸಮಾಜ ಸುಧಾರಕರಾಗಬೇಕು ಎಂದರು.

ಅಕ್ಕಿ ಆಲೂರು ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ, ಡಿ.ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ. ಶಿಕ್ಷ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ. ಯಶೋವರ್ಮ, ಮೂಡುಬಿದಿರೆಯ ದಿನೇಶ್ ಕುಮಾರ್ ಆನಡ್ಕ ಉಪಸ್ಥಿತರಿದ್ದರು.

ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಮಮತಾ ರಾವ್ ವಂದಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯದ 12 ಜಿಲ್ಲೆಗಳಿಂದ 178 ಪುರುಷರು ಹಾಗೂ 94 ಮಹಿಳೆಯರು ಸೇರಿದಂತೆ ಒಟ್ಟು 272 ಶಿಬಿರಾರ್ಥಿಗಳು ಭಜನಾ ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X