Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಾದಕ ವ್ಯಸನದ ವಿರುದ್ಧ...

ಮಣಿಪಾಲ: ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಓಟ

3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ

ವಾರ್ತಾಭಾರತಿವಾರ್ತಾಭಾರತಿ23 Sept 2018 6:27 PM IST
share
ಮಣಿಪಾಲ: ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಓಟ

ಉಡುಪಿ, ಸೆ.23: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಮಾದಕ ವ್ಯಸನ ವಿರೋಧಿ ಮಾಸಾಚರಣೆಯ ಪ್ರಯುಕ್ತ ಮಾಹೆ ಹಾಗೂ ಮಣಿಪಾಲ ರನ್ನರ್ಸ್‌ ಕ್ಲಬ್‌ಗಳ ಸಹಯೋಗದೊಂದಿಗೆ ರವಿವಾರ ಮಣಿಪಾಲದಲ್ಲಿ ಆಯೋಜಿಸಿದ 5 ಕಿ.ಮೀ. ದೂರದ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನ ಜಾಗೃತಿ ಓಟದಲ್ಲಿ 3000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು.

ಪುಟ್ಟ, ಪುಟಾಣಿ ಮಕ್ಕಳಿಂದ ಹಿಡಿದು, ವಯೋವೃದ್ಧರವರೆಗೆ ಎಲ್ಲರೂ ಈ ಓಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ವಿದ್ಯಾರ್ಥಿಗಳು, ಉದ್ಯೋಗಿಗಳು, ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಎಲ್ಲರೂ ಬೆಳಗಿನ ಓಟದಲ್ಲಿ ಭಾಗಿಯಾದರು.

ಮಾಹೆ ವಿಶ್ವವಿದ್ಯಾಲಯದ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಮಾಹೆ ವಿವಿಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಇತರ ಗಣ್ಯರು ಹಸಿರು ನಿಶಾನೆ ತೋರಿ ಓಟಕ್ಕೆ ಚಾಲನೆ ನೀಡಿದರು.

ವಿವಿ ಬಿಲ್ಡಿಂಗ್ ಎದುರಿನಿಂದ ಪ್ರಾರಂಭಗೊಂಡ ಜಾಗೃತಿ ಓಟ ಎಂ.ಕಾಪ್ಸ್, ಉಪೇಂದ್ರ ಪೈ ಸರ್ಕಲ್,ಸಿಂಡಿಕೇಟ್ ಸರ್ಕಲ್, ವೇಣುಗೋಪಾಲ ದೇವಸ್ಥಾನ, ಎಂಐಟಿ ಈಜು ಕೊಳ, ಎಂಐಟಿ, ಕಾಮತ್ ಕೆಫೆ, ಟೈಗರ್ ಸರ್ಕಲ್ ಮೂಲಕ ಮಣಿಪಾಲ್ ಎಜ್ಯು ಕಟ್ಟಡದ ಬಳಿ ಸಮಾಪನಗೊಂಡಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಹೆ ವಿವಿಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ನಮ್ಮ ದೇಶದ ಮುಂದಿನ ಭವಿಷ್ಯವಾಗಿರುವ ಯುವಜನತೆ ಮಾದಕ ವ್ಯಸನದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿತುಕೊಳ್ಳಬೇಕೆಂಬ ಉದ್ದೇಶದಿಂದ ಜಾಗೃತಿ ನಡಿಗೆಯನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಅಭಿಮಾನದ ಸಂಗತಿ ಎಂದರು.

ವ್ಯಸನ ಮುಕ್ತ ಸಮಾಜ ನಿರ್ಮಾಣದತ್ತ ಮಣಿಪಾಲ ಸಂಸ್ಥೆಗಳು ಸದಾ ತಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದು, ಮುಂದೆಯೂ ಇಂತಹ ಜಾಗೃತಿ ಕಾರ್ಯಕ್ರಮಗಳಿಗೆ ಸದಾ ಸಹಕಾರ ನೀಡಲಿದೆ ಎಂದರು.

ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ ಮಾತನಾಡಿ, ಭಾರತ ಸದ್ಯ ವಿಶ್ವದಲ್ಲೇ ಅತೀ ಹೆಚ್ಚು ಯುವಜನತೆಯನ್ನು ಹೊಂದಿದ ದೇಶವಾಗಿದ್ದು, ಈದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ ಭವಿಷ್ಯ ಯುವಜನರ ಮೇಲೆ ನಿಂತಿರುವುದರಿಂದ ಅವರಿಗೆ ಸೂಕ್ತ ಸಮಯದಲ್ಲಿ ಸರಿಯಾದ ದಾರಿಯಲ್ಲಿ ಸಾಗಲು ಮಾರ್ಗದರ್ಶನ ಮಾಡಿಕೊಡಬೇಕಾಗಿದೆ ಎಂದರು.

ಮಾದಕ ವ್ಯಸನ ಮುಕ್ತ ಅಭಿಯಾನದ ಅಂಗವಾಗಿ ಕಳೆದೆರಡು ತಿಂಗಳಲ್ಲಿ ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸರು ಮಾದಕ ವ್ಯಸನಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಮೂಲಕ ಮಾದಕ ವ್ಯಸನವನ್ನು ತಡೆಗಟ್ಟಬಹುದು ಎಂಬ ಭಾವನೆ ಹಲವರಲ್ಲಿದೆ. ಕೇವಲ ಪೊಲೀಸ್ ಅಥವಾ ಕಾನೂನಿನಿಂದ ಇದು ಸಾಧ್ಯವಾಗದೇ ಇರುವಾಗ ಜನಜಾಗೃತಿ ಮೂಡಿಸುವುದು ಅಗತ್ಯವಾಗುತ್ತದೆ. ಈ ಮೂಲಕ ಒಂದು ಉತ್ತಮ ಸಂದೇಶವನ್ನು ಸಮಾಜಕ್ಕೆ ತಲುಪಿಸಲು ಜಾಗೃತಿ ಅಭಿಯಾನ ಸಹಕಾರಿಯಾಗಿದೆ ಎಂದರು.

ಸಿಂಡಿಕೇಟ್ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಎಚ್. ಭಾಸ್ಕರ ಹಂದೆ, ಜಿಡಿಎಂ ಬಿ.ಆರ್. ಹಿರೇಮಠ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ ರಾವ್, ಕೆಎಂಸಿ ಪ್ರಾಧ್ಯಾಪಕ ಡಾ.ವಿನೋದ್ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.
 ಪೊಲೀಸರೂ ಭಾಗಿ: ಸದಾ ಬಂದೋಬಸ್ತ್, ಕಳ್ಳರು, ಆರೋಪಿಗಳು ಎಂದು ಕರ್ತವ್ಯದಲ್ಲೇ ಸದಾ ಕಾರ್ಯನಿರತರಾಗಿರುವ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿಗಳಾದ ಕುಮಾರಸ್ವಾಮಿ, ಬೆಳ್ಳಿಯಪ್ಪ, ದಿನೇಶ್ ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಇಂದು ತಮ್ಮ ಖಾಕಿ ಸಮವಸ್ತ್ರ ಕಳಚಿಟ್ಟು ಕ್ರೀಡಾ ಧಿರಿಸಿನೊಂದಿಗೆ ಓಟದಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X