Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಪೌರತ್ವ ತಡೆಯಲು ಟ್ರಂಪ್...

ಅಮೆರಿಕ ಪೌರತ್ವ ತಡೆಯಲು ಟ್ರಂಪ್ ಸರಕಾರದಿಂದ ಇನ್ನಷ್ಟು ಅಡಚಣೆ

ನಿರ್ಬಂಧಕರ ಹೊಸ ನಿಯಮಗಳು

ವಾರ್ತಾಭಾರತಿವಾರ್ತಾಭಾರತಿ23 Sept 2018 10:19 PM IST
share
ಅಮೆರಿಕ ಪೌರತ್ವ ತಡೆಯಲು ಟ್ರಂಪ್ ಸರಕಾರದಿಂದ ಇನ್ನಷ್ಟು ಅಡಚಣೆ

ವಾಶಿಂಗ್ಟನ್, ಸೆ. 23: ಆಹಾರ ಮತ್ತು ನಗದು ನೆರವು ಸೇರಿದಂತೆ ಸರಕಾರಿ ಸವಲತ್ತುಗಳನ್ನು ಪಡೆದಿರುವ ಹಾಗೂ ಮುಂದಕ್ಕೆ ಪಡೆಯಬಹುದಾದ ವಲಸಿಗರಿಗೆ ಅಮೆರಿಕದ ಟ್ರಂಪ್ ಸರಕಾರವು, ಹೊಸ ನಿಯಮಗಳ ಪ್ರಕಾರ ಹಸಿರು ಕಾರ್ಡ್‌ಗಳನ್ನು ನಿರಾಕರಿಸಬಹುದಾಗಿದೆ.

ಇದು ಅಮೆರಿಕದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಭಾರತೀಯರ ಮೇಲೆ ಪರಿಣಾಮ ಬೀರಲಿದೆ.

ಹೊಸ ನಿಯಮಗಳಿಗೆ ಆಂತರಿಕ ಭದ್ರತಾ ಕಾರ್ಯದರ್ಶಿ ಸೆಪ್ಟಂಬರ್ 21ರಂದು ಸಹಿ ಹಾಕಿದ್ದಾರೆ ಹಾಗೂ ನಿಯಮಗಳನ್ನು ಆಂತರಿಕ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ.

ಆದರೆ, ನೂತನ ನಿಯಮಗಳ ವಿರುದ್ಧ ಸಿಲಿಕಾನ್ ಕಣಿವೆಯಲ್ಲಿರುವ ತಂತ್ರಜ್ಞಾನ ಉದ್ದಿಮೆಗಳು ಮತ್ತು ರಾಜಕೀಯ ನಾಯಕರು ಕಿಡಿಗಾರಿದ್ದಾರೆ.

  ಎಚ್-4 ವೀಸಾದಾರರ ಉದ್ಯೋಗ ಪರ್ಮಿಟ್‌ಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ಮೂರು ತಿಂಗಳಲ್ಲಿ ತೆಗೆದುಕೊಳ್ಳಲಾಗುವುದು ಎಂಬುದಾಗಿ ಟ್ರಂಪ್ ಸರಕಾರವು ಅಮೆರಿಕದ ಫೆಡರಲ್ ನ್ಯಾಯಾಲಯವೊಂದಕ್ಕೆ ಮಾಹಿತಿ ನೀಡಿದ ಒಂದು ದಿನದ ಬಳಿಕ ಈ ಹೊಸ ನಿರ್ಬಂಧಗಳನ್ನು ಹೇರಲಾಗಿದೆ.

ಅಮೆರಿಕದಲ್ಲಿ ಎಚ್-1ಬಿ ವೀಸಾದಡಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವಿದೇಶಿಯರ ಸಂಗಾತಿಗಳಿಗೆ ಎಚ್-4 ವೀಸಾಗಳನ್ನು ನೀಡಲಾಗುತ್ತದೆ.

ಎಚ್-4 ವೀಸಾಗಳನ್ನು ಹೊಂದಿರುವವರಲ್ಲಿ ಭಾರತೀಯ ಮಹಿಳೆಯರೇ ಅಧಿಕ.

ನಿಯಮ ಏನು ಹೇಳುತ್ತದೆ?

ನೂತನ ನಿಯಮಗಳ ಪ್ರಕಾರ, ಸ್ಥಾನಮಾನ ಅಥವಾ ವೀಸಾದಲ್ಲಿ ಬದಲಾವಣೆ ತರಲು ಬಯಸುವ ವಿದೇಶಿ ವಲಸಿಗರು, ಯಾವುದೇ ಸಮಯದಲ್ಲಿ ನಾವು ಬದುಕಲಿಕ್ಕಾಗಿ ಸರಕಾರದ ಆಶ್ರಯ ಕೋರುವುದಿಲ್ಲ ಅಥವಾ ಸರಕಾರದಿಂದ ನೆರವು ಪಡೆದುಕೊಳ್ಳುವ ಸಾಧ್ಯತೆಯಿಲ್ಲ ಎಂಬುದನ್ನು ನಿರೂಪಿಸಬೇಕು.

‘‘ಅಮೆರಿಕದಲ್ಲಿ ವಾಸ್ತವ್ಯವನ್ನು ಮುಂದುವರಿಸಬಯಸುವ ಅಥವಾ ಸ್ಥಾನಮಾನ ಬದಲಾಯಿಸಬಯಸುವ ಎಲ್ಲ ವಲಸಿಗರು, ನಾವು ಸರಕಾರದ ಯಾವುದೇ ಸವಲತ್ತುಗಳನ್ನು ಹಿಂದೆ ಸ್ವೀಕರಿಸಿಲ್ಲ, ಈಗ ಸ್ವೀಕರಿಸುತ್ತಿಲ್ಲ ಹಾಗೂ ಮುಂದೆಯೂ ಸ್ವೀಕರಿಸುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಬೇಕು’’ ಎಂದು ನೂತನ ನಿಯಮಗಳು ಹೇಳುತ್ತವೆ.

ತಂತ್ರಜ್ಞಾನ ಕಂಪೆನಿಗಳ ವಿರೋಧ

ಫೇಸ್‌ಬುಕ್, ಮೈಕ್ರೊಸಾಫ್ಟ್, ಡ್ರಾಪ್‌ಬಾಕ್ಸ್, ಯಾಹೂ ಮತ್ತು ಗೂಗಲ್ ಮುಂತಾದ ತಂತ್ರಜ್ಞಾನ ಕಂಪೆನಿಗಳನ್ನು ಪ್ರತಿನಿಧಿಸುವ ‘ಎಫ್‌ಡಬ್ಲುಡಿ.ಯುಎಸ್’ ಎಂಬ ಸಂಸ್ಥೆಯು ಟ್ರಂಪ್ ಸರಕಾರದ ನೂತನ ನಿಯಮಗಳನ್ನು ವಿರೋಧಿಸಿದೆ.

ಇದು ಕಾನೂನುಬದ್ಧ ವಲಸೆಯನ್ನು ಗಣನೀಯವಾಗಿ ಕಡಿಮೆ ಮಾಡಲು ಸರಕಾರದ ‘ಹಿಂಬಾಗಿಲ’ ಕ್ರಮವಾಗಿದೆ ಎಂದು ಅದು ಆರೋಪಿಸಿದೆ ಹಾಗೂ ಈ ನಿಯಮಗಳನ್ನು ಜಾರಿಗೊಳಿಸಿದರೆ ಇಡೀ ದೇಶಕ್ಕೆ ಘಾಸಿಯಾಗುತ್ತದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X