ಜಮ್ಮು ಮತ್ತು ಕಾಶ್ಮೀರ: ಮೂವರು ಉಗ್ರರ ಹತ್ಯೆಗೈದ ಸೇನೆ, ಓರ್ವ ಯೋಧ ಹುತಾತ್ಮ
ಸಾಂದರ್ಭಿಕ ಚಿತ್ರ
ಶ್ರೀನಗರ, ಸೆ.24: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗಡಿನಿಯಂತ್ರಣ ರೇಖೆಯ ಬಳಿ ನುಸುಳುಕೋರರ ವಿರುದ್ಧ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಕಾರ್ಯಾಚರಣೆಯಲ್ಲಿ ಸೇನಾಪಡೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ. ರವಿವಾರ ನಡೆದ ಕಾರ್ಯಾಚರಣೆಯಲ್ಲಿ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು. ಗಡಿನಿಯಂತ್ರಣ ರೇಖೆಯ ಸಮೀಪ ನಿಯೋಜಿಸಲಾಗಿರುವ ನಿಗಾ ತಂಡ ಕುಪ್ವಾರಾ ಜಿಲ್ಲೆಯ ತಂಗ್ದರ್ ಸೆಕ್ಟರ್ ಸಮೀಪ ಎಲ್ಒಸಿ ಬಳಿ ಸಂಶಯಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಮನಿಸಿ ರವಿವಾರ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯ ವೇಳೆ ಇಬ್ಬರು ಉಗ್ರರು ಹತರಾದರೆ ಸೋಮವಾರ ಮತ್ತೆ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story