Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮೋದಿ ಹೇಳಿದಂತೆ 4 ವರ್ಷಗಳಲ್ಲಿ 35 ವಿಮಾನ...

ಮೋದಿ ಹೇಳಿದಂತೆ 4 ವರ್ಷಗಳಲ್ಲಿ 35 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆಯೇ?: ಇಲ್ಲಿದೆ ವಾಸ್ತವಾಂಶ

www.boomlive.in ವಿಶೇಷ ವರದಿ

ವಾರ್ತಾಭಾರತಿವಾರ್ತಾಭಾರತಿ25 Sept 2018 10:21 PM IST
share
ಮೋದಿ ಹೇಳಿದಂತೆ 4 ವರ್ಷಗಳಲ್ಲಿ 35 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆಯೇ?: ಇಲ್ಲಿದೆ ವಾಸ್ತವಾಂಶ

"ಭಾರತದಲ್ಲಿ ಈಗ 100 ವಿಮಾನ ನಿಲ್ದಾಣಗಳಿದ್ದು, ಈ ಪೈಕಿ 35 ನಿಲ್ದಾಣಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ನಿರ್ಮಾಣ ಮಾಡಲಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ, ಸಿಕ್ಕಿಂ ರಾಜ್ಯದ ಮೊಟ್ಟಮೊದಲ ವಿಮಾನ ನಿಲ್ದಾಣವನ್ನು ಪಕ್ಯಾಂಗ್ ನಗರದಲ್ಲಿ ಉದ್ಘಾಟಿಸಿ ಮಾಡಿದ ಭಾಷಣದಲ್ಲಿ ಸೋಮವಾರ (ಸೆ.24) ನುಡಿದಿದ್ದರು.

"ಸ್ವಾತಂತ್ರ್ಯ ಬಂದು 2014ರವರೆಗೆ 67 ವರ್ಷಗಳಲ್ಲಿ 65 ವಿಮಾನ ನಿಲ್ದಾಣಗಳು ನಿರ್ಮಾಣವಾಗಿವೆ. ಅಂದರೆ ವರ್ಷಕ್ಕೆ ಸರಾಸರಿ ಒಂದು ವಿಮಾನ ನಿಲ್ದಾಣ ನಿರ್ಮಾಣವಾಗಿದ್ದರೆ, ಕಳೆದ ನಾಲ್ಕು ವರ್ಷಗಳಲ್ಲಿ ಸರಾಸರಿ ವರ್ಷಕ್ಕೆ ಒಂಬತ್ತು ವಿಮಾನ ನಿಲ್ದಾಣಗಳು ನಿರ್ಮಾಣಗೊಂಡಿವೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

ವಾಸ್ತವವೇನು?: ಅಧಿಕೃತ ಅಂಕಿ ಅಂಶಗಳ ಪ್ರಕಾರ ಕಳೆದ ನಾಲ್ಕು ವರ್ಷಗಳಲ್ಲಿ ಕಾರ್ಯ ನಿರ್ವಹಣೆ ಆರಂಭವಾಗಿರುವುದು ಕೇವಲ ಏಳು ವಿಮಾನ ನಿಲ್ದಾಣಗಳು.

ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮಾಲಕತ್ವದಲ್ಲಿ ಒಟ್ಟು 129 ವಿಮಾನ ನಿಲ್ದಾಣಗಳು ಇದ್ದು, ಈ ಪೈಕಿ 23 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾದರೆ, 78 ದೇಶೀಯ, ಎಂಟು ಕಸ್ಟಮ್ಸ್ ಮತ್ತು 20 ರಕ್ಷಣಾ ಪಡೆಯ ವಾಯುಕ್ಷೇತ್ರಗಳಲ್ಲಿರುವ ಸಿವಿಲ್ ಎನ್‍ಕ್ಲೇವ್‍ಗಳು ಸೇರಿವೆ ಎನ್ನುವುದನ್ನು ನಾಗರಿಕ ವಿಮಾನಯಾನ ಸಚಿವಾಲಯದ 2017-2018ರ ವರದಿ ಹೇಳುತ್ತದೆ.

129 ವಿಮಾನ ನಿಲ್ದಾಣಗಳ ಪೈಕಿ ಸಿವಿಲ್ ಎನ್‍ಕ್ಲೇವ್‍ಗಳು ಸೇರಿದಂತೆ 101 ವಿಮಾನ ನಿಲ್ದಾಣಗಳು ಕಾರ್ಯ ನಿರ್ವಹಿಸುತ್ತಿದ್ದು, 28 ಚಾಲ್ತಿಯಲ್ಲಿಲ್ಲ ಎಂದು 2018ರ ಜುಲೈ 19 ಮತ್ತು ಆಗಸ್ಟ್ 8ರಂದು ಲೋಕಸಭೆಯಲ್ಲಿ ಸರ್ಕಾರ ನೀಡಿದ ಉತ್ತರದಲ್ಲಿ ಹೇಳಲಾಗಿದೆ.

2014ರ ಮಾರ್ಚ್ 31ರ ವೇಳೆಗೆ 125 ವಿಮಾನ ನಿಲ್ದಾಣಗಳು ಎಎಐ ವಶದಲ್ಲಿದ್ದವು ಎಂದು ವಿಮಾನಯಾನ ಸಚಿವಾಲಯದ 2013-14ರ ವಾರ್ಷಿಕ ವರದಿಯಿಂದ ತಿಳಿದುಬರುತ್ತದೆ. ಈ ಪೈಕಿ 29 ಸಿವಿಲ್ ಎನ್‍ಕ್ಲೇವ್‍ಗಳು ಸೇರಿದಂತೆ 94 ಚಾಲ್ತಿಯಲ್ಲಿದ್ದವು ಹಾಗೂ 31 ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರಲಿಲ್ಲ.

ಇದರಿಂದ ಸ್ಪಷ್ಟವಾಗಿ ತಿಳಿದುಬರುವ ಅಂಶವೆಂದರೆ, ಕಳೆದ ನಾಲ್ಕು ವರ್ಷಗಳಲ್ಲಿ ಕಾರ್ಯನಿರ್ವಹಣೆ ಆರಂಭಿಸಿದ ವಿಮಾನ ನಿಲ್ದಾಣಗಳು ಕೇವಲ ಏಳು ಎನ್ನುವುದು!

ಸಿಕ್ಕಿಂ ರಾಜ್ಯದ ಪಕ್ಯಾಂಗ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ 2008ರ ಅಕ್ಟೋಬರ್‍ನಲ್ಲಿ ಅನುಮೋದನೆ ನೀಡಿತ್ತು. 2014ರ ವೇಳೆಗೆ ಈ ವಿಮಾನ ನಿಲ್ದಾಣದ ಶೇಕಡ 83ರಷ್ಟು ಕೆಲಸ ಪೂರ್ಣಗೊಂಡಿತ್ತು ಎಂದು 2014ರ ಜುಲೈ 21ರಂದು ಸರ್ಕಾರ ಲೋಕಸಭೆಗೆ ತಿಳಿಸಿತ್ತು.

"ಈ ಯೋಜನೆಯು ಸುಮಾರು 50 ತಿಂಗಳ ಕಾಲ ವಿವಿಧ ಕಾರಣಗಳಿಂದಾಗಿ ವಿಳಂಬವಾಯಿತು. ವಿಮಾನ ನಿಲ್ದಾಣದ ಜಾಗಕ್ಕೆ ಸೂಕ್ತ ಸಂಪರ್ಕದ ಕೊರತೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ಪದೇ ಪದೇ ಸಂಭವಿಸಿದ ಬಂದ್, ಗೂರ್ಖಾ ಜನಮುಕ್ತಿ ಮೋರ್ಚಾ ಸೃಷ್ಟಿಸಿದ ಅರಾಜಕತೆ, 2011ರ ಭೂಕಂಪ, ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರಿಂದ ಮನೆಗಳಿಗೆ ಆದ ಹಾನಿಗೆ ಪರಿಹಾರ ಆಗ್ರಹಿಸಿ ನಡೆದ ಪ್ರತಿಭಟನೆ ಮತ್ತಿತರ ಕಾರಣಗಳಿಂದ ಯೋಜನೆ ವಿಳಂಬವಾಯಿತು" ಎಂದು ಆಗ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವರಾಗಿದ್ದ ಜಿ.ಎಂ.ಸಿದ್ದೇಶ್ವರ 2014ರ ಜುಲೈ 21ರಂದು ಲೋಕಸಭೆಗೆ ನೀಡಿದ ಉತ್ತರದಲ್ಲಿ ಸ್ಪಷ್ಟಪಡಿಸಿದ್ದರು.

"ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇರುವ ಪರಿಹಾರ ವಿತರಣೆ ಮತ್ತು ಸ್ಥಳದ ಭದ್ರತಾ ವಿಚಾರದ ಬಗೆಗಿನ ಸಮಸ್ಯೆಗಳನ್ನು ಸಿಕ್ಕಿಂ ಸರ್ಕಾರ ಇತ್ಯರ್ಥಪಡಿಸಿದ ಬಳಿಕವಷ್ಟೇ ಪಕ್ಯಾಂಗ್ ವಿಮಾನ ನಿಲ್ದಾಣ ಯೋಜನೆ ಪೂರ್ಣಗೊಳ್ಳುವ ದಿನಾಂಕವನ್ನು ಅಂದಾಜಿಸಲು/ ಮರು ನಿರ್ಧಾರ ಮಾಡಲು ಸಾಧ್ಯ" ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X