ಚಿಕ್ಕಮಗಳೂರು: ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಲಿಂಗದಹಳ್ಳಿ ಕಾಲೇಜು ವಿದ್ಯಾರ್ಥಿಗಳು
ಲಿಂಗದಹಳ್ಳಿ, ಸೆ.25: ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾ ಕೂಟದಲ್ಲಿ ಲಿಂಗದಹಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕರಾಟೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಟೇಕ್ವಾಂಡೋ ಸ್ಪರ್ಧೆಯಲ್ಲಿ ಶೀಲಾ ಪ್ರಥಮ ಸ್ಥಾನ ಪಡೆದಿದ್ದು, ಮಹಿಳೆಯರ 4*400 ಮೀಟರ್ ರಿಲೇಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಳ್ಳುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕಾಲೇಜಿನ ಪ್ರಾಚಾರ್ಯ ಚಂದ್ರಕಾಂತ ಪಾಟೀಲ್ ತಿಳಿಸಿದ್ದಾರೆ.
ಲಿಂಗದಹಳ್ಳಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶಕರಾಗಿರುವ ಶಾಲಾ ಶಿಕ್ಷಕ ಶಿವಸ್ವಾಮಿ ಮತ್ತು ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಶಾಲಾಬಿವೃದ್ಧಿ ಸಮಿತಿ ಉಪಾಧ್ಯಕ್ಷ ಅನಿಲ್ ಕುಮಾರ್, ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು, ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದು, ಮುಂದೆ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲೂ ಗೆಲ್ಲುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವಂತೆ ಶುಭಕೋರಿದ್ದಾರೆ.
Next Story