Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಾಂಪತ್ಯ ಜೀವನಕ್ಕೆ ಬ್ಯಾಡ್ಮಿಂಟನ್...

ದಾಂಪತ್ಯ ಜೀವನಕ್ಕೆ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್-ಕಶ್ಯಪ್

ಡಿ.16ಕ್ಕೆ ಒಂದು ದಶಕದ ರೊಮ್ಯಾನ್ಸ್ ಗೆ ಬೀಳಲಿದೆ ವಿವಾಹಮುದ್ರೆ

ವಾರ್ತಾಭಾರತಿವಾರ್ತಾಭಾರತಿ26 Sept 2018 9:45 AM IST
share
ದಾಂಪತ್ಯ ಜೀವನಕ್ಕೆ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್-ಕಶ್ಯಪ್

ಹೈದರಾಬಾದ್, ಸೆ.26: ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಮತ್ತು ಪರುಪಲ್ಲಿ ಕಶ್ಯಪ್, ಬ್ಯಾಡ್ಮಿಂಟನ್ ಕೋರ್ಟ್ ಹೊರಗೆ ಅಪರೂಪದ ಮ್ಯಾಚ್ ಪಾಯಿಂಟ್ ಸಾಧಿಸಿದ್ದಾರೆ!

ಉಭಯ ಆಟಗಾರರ ಒಂದು ದಶಕದ ರೊಮ್ಯಾನ್ಸ್ ವಿವಾಹ ರೂಪದಲ್ಲಿ ಸುಖಾಂತ್ಯವಾಗುತ್ತಿದೆ. ಭಾರತದ ಹೆಮ್ಮೆಯ ತಾರೆಗಳು ಡಿಸೆಂಬರ್ 16ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ ಎಂದು ತಿಳಿದುಬಂದಿದೆ. ತೀರಾ ಖಾಸಗಿ ಕಾರ್ಯಕ್ರಮ ಕೇವಲ 100 ಮಂದಿಗಷ್ಟೇ ಸೀಮಿತವಾಗಲಿದೆ. ಆದರೆ ಡಿಸೆಂಬರ್ 21ರಂದು ವೈಭವದ ರಿಸೆಪ್ಷನ್ ನಡೆಯಲಿದೆ.

"ಎರಡೂ ಕುಟುಂಬಗಳು ಸದ್ಯದಲ್ಲೇ ವಿವಾಹ ಇಟ್ಟುಕೊಳ್ಳುವ ನಿರ್ಧಾರಕ್ಕೆ ಬಂದಿವೆ. ಇದೀಗ ದಿನಾಂಕ ಅಂತಿಮವಾಗಿದ್ದು, ಡಿಸೆಂಬರ್ 16ಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ" ಎಂದು ಈ ಜೋಡಿಯ ಆತ್ಮೀಯ ಮೂಲಗಳಿಂದ ತಿಳಿದುಬಂದಿದೆ.

ಈ ಹೈದ್ರಾಬಾದಿ ಜೋಡಿ ಹತ್ತು ವರ್ಷಗಳಿಂದ ಸಂಬಂಧ ಹೊಂದಿದ್ದರು. ಆದರೆ ಕಿಡಂಬಿ ಶ್ರೀಕಾಂತ್, ಎಚ್.ಎಸ್.ಪ್ರಣಯ್ ಹಾಗೂ ಗುರುಸಾಯಿದತ್ ಬಳಗದೊಂದಿಗೆ ಕಾಣಿಸಿಕೊಳ್ಳುವ ಮೂಲಕ ಈ ರಹಸ್ಯ ಬಚ್ಚಿಟ್ಟುಕೊಂಡಿದ್ದರು. ಇದುವರೆಗೆ ಇಬ್ಬರೂ ಈ ಸಂಬಂಧವನ್ನು ದೃಢಪಡಿಸಿರಲಿಲ್ಲ ಅಥವಾ ನಿರಾಕರಿಸಿರಲೂ ಇಲ್ಲ.

ಈ ವಿವಾಹವು ಮತ್ತೊಂದು ಕ್ರೀಡಾ ಜೋಡಿಗೆ ಸಾಕ್ಷಿಯಾಗಲಿದೆ. ದೀಪಿಕಾ ಪಲ್ಲಿಕಲ್- ದಿನೇಶ್ ಕಾರ್ತಿಕ್, ಇಶಾಂತ್ ಶರ್ಮಾ- ಪ್ರತಿಮಾ ಸಿಂಗ್, ಗೀತಾ ಪೋಗಟ್- ಪವನ್ ಕುಮಾರ್, ಸಾಕ್ಷಿ ಮಲಿಕ್- ಸತ್ಯಾವರ್ತ್ ಕದಿಯನ್ ಇತ್ತೀಚಿನ ವರ್ಷಗಳಲ್ಲಿ ವಿವಾಹ ಬಂಧನಕ್ಕೊಳಗಾದ ಕ್ರೀಡಾಜೋಡಿಗಳು.

28 ವರ್ಷದ ಸೈನಾ ಹಾಗೂ 32 ವರ್ಷದ ಕಶ್ಯಪ್, ಬ್ಯಾಡ್ಮಿಂಟನ್‌ನ ಸೂಪರ್ ಜೋಡಿ ಎನಿಸಿದ ಇಂಡೋನೇಷ್ಯಾದ ಸೂಸಿ ಸುಸಾಂತಿ ಮತ್ತು ಅಲನ್ ಬುಡಿಕುಸುಮಾ, ಚೀನಾದ ಲೀ ಡೆನ್ ಹಾಗೂ ಕ್ಸಿ ಕ್ಸಿಂಗ್‌ಫಾಂಗ್, ಬ್ರಿಟಿಷ್ ಜೋಡಿ ಕ್ರಿಸ್ ಗಾಬ್ಬೆ ಅಡ್‌ಕಾಕ್ ಹಾಗೂ ಬಾಕ್ ಹೋಮ್, ಮಧುಮಿತಾ ಗೋಸ್ವಾಮಿ- ವಿಕ್ರಮ್ ಸಿಂಗ್ ಭಿಷ್ಟ್, ಸೈಯದ್ ಮೋದಿ- ಅಮಿತಾ ಕುಲಕರ್ಣಿ ಜೋಡಿಯನ್ನು ಅನುಕರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X