Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಾನಾ ಪಾಟೇಕರ್ ವಿರುದ್ಧ ಬಾಲಿವುಡ್ ನ...

ನಾನಾ ಪಾಟೇಕರ್ ವಿರುದ್ಧ ಬಾಲಿವುಡ್ ನ ಪ್ರಸಿದ್ಧ ನಟಿಯಿಂದ ಲೈಂಗಿಕ ಕಿರುಕುಳ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Sept 2018 1:06 PM IST
share
ನಾನಾ ಪಾಟೇಕರ್ ವಿರುದ್ಧ ಬಾಲಿವುಡ್ ನ ಪ್ರಸಿದ್ಧ ನಟಿಯಿಂದ ಲೈಂಗಿಕ ಕಿರುಕುಳ ಆರೋಪ

ಹೊಸದಿಲ್ಲಿ, ಸೆ.26: ಹತ್ತು ವರ್ಷಗಳ ಹಿಂದೆ, 2009ರಲ್ಲಿ ‘ಹಾರ್ನ್ ಓಕೆ ಪ್ಲೀಸ್’ ಚಿತ್ರದ ಸೆಟ್ ನಲ್ಲಿ ತನಗೆ ಕಿರುಕುಳ ನೀಡಲಾಗಿತ್ತು ಎಂದು ಆರೋಪಿಸಿರುವ ನಟಿ ತನುಶ್ರೀ ದತ್ತಾ, ಆ ಚಿತ್ರದ ಪ್ರಮುಖ ನಟರಾಗಿದ್ದ ನಾನಾ ಪಾಟೇಕರ್ ಅವರತ್ತ  ಬೊಟ್ಟು ಮಾಡಿ ತೋರಿಸಿದ್ದಾರೆ.

‘ಝೂಮ್ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತನುಶ್ರೀ, ಚಿತ್ರೋದ್ಯದ ಒಳಹೊರಗು ಅರಿತಿರುವವರಿಗೆ ನಾನಾ ಪಾಟೇಕರ್ ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ತಿಳಿದಿದ್ದರೂ ಯಾರೂ ಅದರ ಬಗ್ಗೆ ಮಾತನಾಡಿಲ್ಲ” ಎಂದಿದ್ದಾರೆ. “ನಾನಾ ಪಾಟೇಕರ್ ಮಹಿಳೆಯರಿಗೆ ಅಗೌರವ ತೋರಿಸುತ್ತಾರೆಂದು ಎಲ್ಲರಿಗೂ ತಿಳಿದಿದೆ. ಅವರ ಹಿನ್ನೆಲೆ ಕೂಡ ಗೊತ್ತು, ಅವರು ನಟಿಯರಿಗೆ ಥಳಿಸಿದ್ದಾರೆ, ಅವರಿಗೆ ಲೈಗಿಕ ಕಿರುಕುಳ ನೀಡಿದ್ದಾರೆ, ಅವರು ಮಹಿಳೆಯರೊಂದಿಗೆ ಯಾವತ್ತೂ ಒರಟಾಗಿ ವರ್ತಿಸಿದ್ದಾರೆ. ಆದರೆ ಯಾರೂ ಅದರ ಬಗ್ಗೆ ವರದಿ ಮಾಡಿಲ್ಲ'' ಎಂದು ತನುಶ್ರೀ ಆರೋಪಿಸಿದ್ದಾರೆ.

ತನಗೆ ಒಂದು ದಶಕದ ಹಿಂದೆ ಆಗಿದ್ದನ್ನು ಎಲ್ಲರೂ ಒಪ್ಪಿಕೊಳ್ಳದೇ ಇದ್ದರೆ #ಮೀಟೂ ಆಂದೋಲನ ಭಾರತ ತಲುಪುವುದಿಲ್ಲ ಎಂದು ಅವರು ಹೇಳಿದರು. ``ಅಕ್ಷಯ್ ಕುಂದರ್ ಅವರು ನಾನಾ ಪಾಟೇಕರ್ ಜತೆ ಕೆಲ ಚಿತ್ರಗಳನ್ನು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ರಜಿನಿಕಾಂತ್ ಕೂಡ ಅವರ ಜತೆ ಕೆಲಸ ಮಾಡಿದ್ದಾರೆ. ಇಂತಹ ದೊಡ್ಡ ನಟರು ಇಂತಹ  ತಪ್ಪಿತಸ್ಥರ ಜತೆ ನಟಿಸುವುದನ್ನು  ಮುಂದುವರಿಸಿದರೆ  ಯಾವುದೇ ಆಂದೋಲನ ನಡೆಯುವ ಬಗ್ಗೆ ಭರವಸೆಯಿಲ್ಲ,'' ಎಂದು ತನುಶ್ರೀ ಹೇಳಿದ್ದಾರೆ.

“ನೀವು ಈ ಚಿತ್ರೋದ್ಯಮದಲ್ಲಿರುವಾಗ ಕೆಲ ನಟರ ಬಗ್ಗೆ ಬಹಳಷ್ಟು ಕೇಳಿರುತ್ತೀರಿ. ಆದರೆ ಅವು ಹೊರ ಬರುವುದೇ ಇಲ್ಲ.  ಅವರು ಬಡ ರೈತರಿಗೆ ಸ್ವಲ್ಪ ಹಣ ನೀಡುತ್ತಾರೆ. ಎಲ್ಲವೂ ಕೇವಲ ತೋರಿಕೆಗಾಗಿ'' ಎಂದು ತನುಶ್ರೀ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X