Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ...

ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಕೊಚ್ಚಿ ಕೊಲೆ: ಮೂಕಪ್ರೇಕ್ಷಕರಾದ ಪೊಲೀಸರು

ವಿಡಿಯೋ ಮಾಡಿದ ಸಾರ್ವಜನಿಕರು

ವಾರ್ತಾಭಾರತಿವಾರ್ತಾಭಾರತಿ26 Sept 2018 4:37 PM IST
share
ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಕೊಚ್ಚಿ ಕೊಲೆ: ಮೂಕಪ್ರೇಕ್ಷಕರಾದ ಪೊಲೀಸರು

ಹೈದರಾಬಾದ್,ಸೆ.26: ಜನನಿಬಿಡ ರಸ್ತೆಯಲ್ಲಿ ಪೊಲೀಸರ ಕಣ್ಣೆದುರೇ ವ್ಯಕಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಬುಧವಾರ ನಗರದಲ್ಲಿ ನಡೆದಿದೆ. ಈ ಸಂದರ್ಭ ಅಲ್ಲಿ ಹಲವಾರು ಜನರಿದ್ದರೂ ಕೊಲೆಯನ್ನು ತಡೆಯಲು ಯಾರೂ ಮುಂದಾಗಿರಲಿಲ್ಲ, ಹೆಚ್ಚಿನವರು ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿಯುವಲ್ಲಿ ಮಗ್ನರಾಗಿದ್ದರು!

ರಾಜೇಂದ್ರ ನಗರದಲ್ಲಿ ವ್ಯಕ್ತಿಯೋರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿಕೊಂಡ ಬಂದ ಇಬ್ಬರು ಆತನನ್ನು ಕೊಡಲಿಯಿಂದ ಮನಸೋ ಇಚ್ಛೆ ಕೊಚ್ಚಿದ್ದಾರೆ. ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ವ್ಯಕ್ತಿಯ ಉಸಿರು ನಿಂತ ಬಳಿಕ ದಾಳಿಕೋರರಲ್ಲೋರ್ವ ವಿಜಯದ ಸಂಕೇತವಾಗಿ ಕೈಗಳನ್ನು ಮೇಲಕ್ಕೆತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡು ಬರುತ್ತಿದೆ.

ರಸ್ತೆಯ ನಡುವೇ ಕೊಲೆ ನಡೆಯುತ್ತಿದ್ದರೂ ಅಲ್ಲಿದ್ದ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. ಅವರಲ್ಲೋರ್ವ ಹಂತಕನನ್ನು ತಡೆಯಲು ಪ್ರಯತ್ನಿಸಿದ್ದನಾದರೂ ಸಾಧ್ಯವಾಗಿರಲಿಲ್ಲ. ಇದೇ ವೇಳೆ ಸೈಬರಾಬಾದ್ ಪೊಲೀಸ್ ವಾಹನ ಅಲ್ಲಿಗೆ ಬಂದಿದ್ದರೂ ನಿಲ್ಲದೆ ಹೊರಟುಹೋಗಿತ್ತು.

ಇಬ್ಬರು ಪೊಲೀಸರು ತಮ್ಮ ಲಾಠಿಗಳನ್ನು ತರಲು ತೆರಳಿದ್ದರು. ಆದರೆ ಅವರು ಮರಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿತ್ತು ಎಂದು ಡಿಸಿಪಿ ಪ್ರಕಾಶ ರೆಡ್ಡಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾಗಿರುವ ವ್ಯಕ್ತಿಯನ್ನು ರಮೇಶ್ ಎಂದು ಗುರುತಿಸಲಾಗಿದ್ದು, ಈತ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದಿದ್ದ ಆರೋಪಿಗಳ ಪೈಕಿ ಕೃಷ್ಣಗೌಡ ಎಂಬಾತನ ಮಗ ಮಹೇಶ ಗೌಡನ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ.

ಬುಧವಾರ ರಮೇಶ ನ್ಯಾಯಾಲಯದಿಂದ ವಾಪಸಾಗುತ್ತಿದ್ದಾಗ ಕೃಷ್ಣೇಗೌಡ ಮತ್ತು ಆತನ ಸೋದರ ಲಕ್ಷ್ಮಣ ಗೌಡ ಸೇರಿಕೊಂಡು ಕೊಂದು ಮುಗಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X