Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ.28 ರಂದು ಔಷಧಿ ವ್ಯಾಪಾರಿಗಳ ಮುಷ್ಕರ:...

ಸೆ.28 ರಂದು ಔಷಧಿ ವ್ಯಾಪಾರಿಗಳ ಮುಷ್ಕರ: ಕೊಡಗಿನಲ್ಲೂ ಔಷಧಿ ಅಂಗಡಿಗಳು ಬಂದ್

ವಾರ್ತಾಭಾರತಿವಾರ್ತಾಭಾರತಿ26 Sept 2018 5:20 PM IST
share
ಸೆ.28 ರಂದು ಔಷಧಿ ವ್ಯಾಪಾರಿಗಳ ಮುಷ್ಕರ: ಕೊಡಗಿನಲ್ಲೂ ಔಷಧಿ ಅಂಗಡಿಗಳು ಬಂದ್

ಮಡಿಕೇರಿ, ಸೆ.26: ಔಷಧಿಗಳ ವಿತರಣಾ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಇ-ಫಾರ್ಮಸಿ ಕ್ರಮದ ಲೋಪಗಳನ್ನು ವಿರೋಧಿ ಮತ್ತು ಅಗತ್ಯ ತಿದ್ದುಪಡಿಗಳಿಗಾಗಿ ಆಗ್ರಹಿಸಿ ರಾಷ್ಟ್ರವ್ಯಾಪಿ ಸೆ.28 ರಂದು ನಡೆಯುವ ಔಷಧಿ ವ್ಯಾಪಾರಿಗಳ ಬಂದ್ ಮುಷ್ಕರಕ್ಕೆ ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ತನ್ನ ಬೆಂಬಲವನ್ನು ನೀಡಲಿದೆ ಎಂದು ಸಂಘದ ಅಧ್ಯಕ್ಷ ಎ.ಕೆ.ಜೀವನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶುಕ್ರವಾರ ರಾಷ್ಟ್ರ ವ್ಯಾಪಿ ಇರುವ 8.5 ಲಕ್ಷ ಔಷಧಿ ವ್ಯಾಪಾರಿಗಳು, ರಾಜ್ಯದ 20 ಸಾವಿರ ಹಾಗೂ ಜಿಲ್ಲೆಯ 120 ಔಷಧಿ ವ್ಯಾಪಾರಿಗಳು ತಮ್ಮ ಔಷಧಿ ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್ ನಡೆಸಲಿದ್ದಾರೆ ಎಂದರು. ಆಸ್ಪತ್ರೆಗಳಲ್ಲಿರುವ ಔಷಧಿ ಅಂಗಡಿಗಳು ತೆರೆದಿರುತ್ತವೆ ಎಂದು ಸ್ಪಷ್ಟಪಡಿಸಿದರು. ಇ-ಫಾರ್ಮಸಿ ಎಂಬ ವಿತರಣಾ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಗ್ರಾಹಕರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಅವರು, ಈ ಹೊಸ ನೀತಿಯ ಬಗ್ಗೆ ಗ್ರಾಹಕರಿಗೆ ವಾಸ್ತವಾಂಶ ತಿಳಿಸಬೇಕಾದ ಮಹತ್ವದ ಹೊಣೆಗಾರಿಕೆ ಔಷಧಿ ವ್ಯಾಪಾರಸ್ಥರ ಮೇಲಿರುವುದರಿಂದ ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರ ಇ-ಫಾರ್ಮಸಿಗೆ ಸಂಬಂಧಿಸಿದಂತೆ ಕರಡು ನೋಟಿಫಿಕೇಶನ್ ಹೊರಡಿಸಿದ್ದು, ಇದಕ್ಕೆ ಈಗಾಗಲೆ ಆಕ್ಷೇಪಣೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು. ನಕಲಿ ಹಾಗೂ ಮಾದಕ ಔಷಧಗಳ ವ್ಯಾಪಾರ ಇತಿಮಿತಿಯಿಲ್ಲದಂತೆ ನಡೆಯಲು ನೂತನ ವ್ಯವಸ್ಥೆ ರಹದಾರಿಯಾಗಿದ್ದು, ಬೇರೆ ಔಷಧದ ಹೆಸರಿನಲ್ಲಿ ಮಾದಕ ಔಷಧ ವಿತರಣೆಯಾದಲ್ಲಿ ಯುವ ಪೀಳಿಗೆ ಬಲಿಪಶುಗಳಾಗಲಿದ್ದಾರೆ ಎಂದು ಜೀವನ್ ಅಸಮಾಧಾನ ವ್ಯಕ್ತಪಡಿಸಿದರು.

ಇ-ಫಾರ್ಮಸಿ ವ್ಯವಸ್ಥೆ ರೋಗಿಯ ಆರೋಗ್ಯದ ಬಗ್ಗೆ, ವಿತರಣೆ ಆಗಬೇಕಾದ ಔಷಧದ ಗುಣಮಟ್ಟದ ಪರಿಶೀಲನೆಗೆ ಒತ್ತು ನೀಡದೆ ಗ್ರಾಹಕರ ಜೀವನದ ಜೊತೆ ಆಟವಾಡುವ ಪ್ರಕ್ರಿಯೆಯಾಗಿದೆ. ವಿತರಕ ಯಾರು ಎಂಬುವುದನ್ನೇ ಅರಿಯದೇ, ಔಷಧಿಯ ವಿಷಯವನ್ನೇ ತಿಳಿಯದವರು ಇ-ಫಾರ್ಮಸಿ ವ್ಯವಸ್ಥೆಯಡಿ ಔಷಧಿಗಳನ್ನು ಎಲ್ಲಿಂದಲೋ ವಿತರಣೆ ಮಾಡಿದಲ್ಲಿ ಗ್ರಾಹಕನ ಆರೋಗ್ಯ ಸಂಪೂರ್ಣ ಹದಗೆಡುವ ಸಾಧ್ಯತೆ ಹೆಚ್ಚಿದೆ.ಡಾಕ್ಟರ್ ರ ಔಷಧ ಚೀಟಿಯನ್ನು ಇ-ಫಾರ್ಮಸಿ ಪೋರ್ಟಲ್‍ಗೆ ತಾವೇ ತುಂಬಬೇಕಾಗಿದ್ದು, ತಮಗೆ ತಲುಪಬಹುದಾದ ಜೌಷಧವು, ತಮಗೆ ವೈದ್ಯರ ಸಲಹೆಯಂತೆಯೇ ದೊರೆಯುವುದೆಂಬ ಖಾತ್ರಿ ಇಲ್ಲ. ಔಷಧವನ್ನು ಸ್ವಹಸ್ತದಿಂದ ತಲುಪಿಸಬೇಕಾದ ನಿಯಮ ಇ-ಫಾರ್ಮಸಿಗೆ ಅನ್ವಯವಾಗಿಲ್ಲ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಔಷಧಗಳಿಗೆ ಕೇಂದ್ರ ಸರಕಾರದ ಆದೇಶದಂತೆ ಶೇ.16ರಷ್ಟು ಲಾಭಂಶ ಮಾತ್ರ ಲಭ್ಯವಿದೆ. ಆದರೆ, ಇ- ಫಾರ್ಮಾಸಿಗಳು ಶೇ.60 ರಿಂದ ಶೇ.70 ರಿಯಾಯಿತಿ ದರದಲ್ಲಿ ಔಷಧಿ ನೀಡುವ ಜಾಹೀರಾತು ನೀಡುತ್ತಿದ್ದಾರೆ. ಇಷ್ಟೊಂದು ರಿಯಾಯಿತಿಯಲ್ಲಿ ನೀಡುವ ಔಷಧಿಗಳ ಗುಣಮಟ್ಟ ಉತ್ತಮವಾಗಿರಲು ಸಾಧ್ಯವೆ ಎಂದು ಜೀವನ್ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಡಿ.ಐ.ಪುರುಷೋತ್ತಮ, ಜಿಲ್ಲಾ ಉಪಾಧ್ಯಕ್ಷ ಎ.ಕೆ.ವಿನೋದ್, ಖಜಾಂಚಿ ಪ್ರಸಾದ್ ಗೌಡ ಹಾಗೂ ಜಂಟಿ ಕಾರ್ಯದರ್ಶಿ ಬಿ.ಸಿ.ತಿಲಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X