Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅ.1ಕ್ಕೆ ನಗರ ಜಿಲ್ಲಾಧಿಕಾರಿ...

ಬೆಂಗಳೂರು: ಅ.1ಕ್ಕೆ ನಗರ ಜಿಲ್ಲಾಧಿಕಾರಿ ‘ಗ್ರಾಮ ವಾಸ್ತವ್ಯ’

ವಾರ್ತಾಭಾರತಿವಾರ್ತಾಭಾರತಿ26 Sept 2018 8:35 PM IST
share

ಬೆಂಗಳೂರು, ಸೆ. 26: ಸಾರ್ವಜನಿಕರ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸಲು ಮತ್ತು ಅವರಲ್ಲಿ ಸ್ಥೈರ್ಯ ತುಂಬುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯಲ್ಲಿ ಅಕ್ಟೋಬರ್ 1ರಂದು ಗ್ರಾಮವಾಸ್ತವ್ಯ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್ ತಿಳಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.1ರ ಬೆಳಗ್ಗೆ 11ಗಂಟೆಯಿಂದ ಬನ್ನೇರುಘಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ್ ಅರಸ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುವುದರಿಂದ ಆರಂಭವಾಗಲಿದೆ.

ಈ ವೇಳೆ ವಿವಿಧ ಇಲಾಖೆಗಳ ಯೋಜನೆಗಳನ್ನು ಖುದ್ದಾಗಿ ಭೇಟಿ ನೀಡುವ ಮೂಲಕ ಅ.2ರ ಬೆಳಗ್ಗೆ ಅಲ್ಲಿಯೇ ಗಾಂಧೀ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು. ಈ ಸಮಯದಲ್ಲಿ ಜಿಗಣಿ ಹೋಬಳಿ ವ್ಯಾಪ್ತಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮ ವಾಸ್ತವ್ಯದ ಸಮಯದಲ್ಲಿ 500ಕ್ಕೂ ಹೆಚ್ಚು ಪಿಂಚಣಿ ಪ್ರಮಾಣ ಪತ್ರಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸೇರಿ ಹಲವು ಸವಲತ್ತುಗಳನ್ನು ವಿತರಿಸಲು ಯೋಜಿಸಲಾಗಿದೆ. ಸ್ಥಳೀಯವಾಗಿ ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು.

ಅ.1ರಂದು ಅಪರಾಹ್ನದ ನಂತರ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಗಣಿ ಸರಕಾರಿ ಪ್ರಾಥಮಿಕ ಮತ್ತು ಹಿರಿಯ ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸಮಾಲೋಚನೆ ಮತ್ತು ಕುಂದುಕೊರತೆಗಳನ್ನು ಪರಿಶೀಲಿಸಲಾಗುವುದು. ಅಂದು ಸಂಜೆ 4 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು ಮತ್ತು ಪರಿಶಿಷ್ಟ ಜಾತಿ/ಪಂಗಡ ಕಾಲನಿಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚಿಸುವುದು ಮತ್ತು ಅಂದು ರಾತ್ರಿ ಶಿವನಹಳ್ಳಿಯ ರಾಮಕೃಷ್ಣ ಆಶ್ರಮದಲ್ಲಿ ವಾಸ್ತವ್ಯವನ್ನು ಮಾಡಲಾಗುತ್ತದೆ.

ಅ.2ರ ಬೆಳಗ್ಗೆ 9:30ಕ್ಕೆ ಜಿಗಣಿಯ ನಿತ್ಯಾನಂದ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಮಹಾತ್ಮ ಗಾಂಧಿ ಜಯಂತಿಯಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪಾಲ್ಗೊಂಡು ನಂತರ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸಭೆ ನಡೆಸಲಾಗುವುದು.

ಈ ಗ್ರಾಮ ವಾಸ್ತವ್ಯದಲ್ಲಿ ಚರ್ಚಿಸಿದ ಮತ್ತು ಕೈಗೊಂಡ ಕ್ರಮಗಳ ಕುರಿತು ಮತ್ತೆ ಎರಡು ತಿಂಗಳ ನಂತರ ಇದೇ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X