Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಗಳ ಅವನತಿಗೆ ರಾಜ್ಯ ಸರಕಾರ...

ಸರಕಾರಿ ಶಾಲೆಗಳ ಅವನತಿಗೆ ರಾಜ್ಯ ಸರಕಾರ ಸಂಚು: ಎಂಎಲ್‍ಸಿ ಎಂ.ಕೆ.ಪ್ರಾಣೇಶ್ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Sept 2018 5:22 PM IST
share
ಸರಕಾರಿ ಶಾಲೆಗಳ ಅವನತಿಗೆ ರಾಜ್ಯ ಸರಕಾರ ಸಂಚು: ಎಂಎಲ್‍ಸಿ ಎಂ.ಕೆ.ಪ್ರಾಣೇಶ್ ಆರೋಪ

ಮೂಡಿಗೆರೆ, ಸೆ.27: ಶಾಲಾ ಕಟ್ಟಡ ನಿರ್ಮಾಣಕ್ಕೆ ಮುಂದಾಗದೇ ಶಾಲೆಗಳಲ್ಲಿನ ಹೆಚ್ಚವರಿ ಶಿಕ್ಷಕರ ಸಂಖ್ಯೆಯನ್ನು ಸರಕಾರವೇ ಕಡಿಮೆ ಮಾಡುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಇನ್ನು 10 ವರ್ಷಗಳಲ್ಲಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳನ್ನು ಮುಚ್ಚಲಿವೆ. ಈ ಮೂಲಕ ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರವೇ ಹುನ್ನಾರ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ದೂರಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಾದ್ಯಂತ 1950ರಲ್ಲಿ ನಿರ್ಮಿಸಿದ ಶಾಲಾ ಕಟ್ಟಡಗಳು ಈಗ ಸಂಪೂರ್ಣ ಶಿಥಿಲಗೊಂಡು ಕುಸಿದು ಬೀಳುವ ಹಂತಕ್ಕೆ ತಲುಪಿವೆ. ಈ ಬಾರಿ ಸುರಿದ ಭಾರೀ ಮಳೆಗೆ ಈಗಾಗಲೇ ಅನೇಕ ಶಾಲೆಗಳು ನೆಲಕ್ಕುರುಳಿವೆ. ಮಕ್ಕಳು ಭಯಭೀತರಾಗಿ ಪಾಠ ಕೇಳುವ ಪರಿಸ್ಥಿತಿ ಎದುರಾಗಿದ್ದು,  ಪೋಷಕರು ಸರಕಾರಿ ಶಾಲೆಗಳ ಗುಣಮಟ್ಟದ ಬಗ್ಗೆ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ವಿವಿಧ ಇಲಾಖೆಗಳ ಸರಕಾರಿ ಕಟ್ಟಡಗಳ ನವೀಕರಣ ಹಾಗೂ ಹೊಸ ಕಟ್ಟಡಕ್ಕೆ ಪ್ರತೀ ವರ್ಷ ಸಾವಿರಾರು ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆ ಮಾಡುತ್ತಿದೆ. ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ಅನುದಾನ ನೀಡದೇ ಸರಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಸರಕಾರ ಸ್ಪಂದನೆ ನೀಡದೇ ದ್ರೋಹ ಎಸಗುತ್ತಿದೆ ಎಂದು ಗುಡುಗಿದರು.

11 ವಿದ್ಯಾರ್ಥಿಗಳಿರುವ ಸರಕಾರಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಪಾಠ ಮಾಡುತ್ತಾರೆ. 150 ಮಕ್ಕಳಿರುವ ಶಾಲೆಯಲ್ಲಿ 5 ಶಿಕ್ಷಕರು ಇರಬೇಕೆಂದು ಸರಕಾರ ನಿಯಮ ರೂಪಿಸಿದೆ. ಒಬ್ಬಿಬ್ಬರು ಹೆಚ್ಚುವರಿ ಶಿಕ್ಷಕರಿದ್ದಾರೆಂದು ಪರಿಗಣಿಸಿ ಅಂತಹ ಶಿಕ್ಷಕರನ್ನು ಹುದ್ದೆ ಸಮೇತ ಶಾಲೆಯಿಂದಲೇ ತೆರವುಗೊಳಿಸಲಾಗುತ್ತಿದೆ. ಪ್ರತಿ ವರ್ಷ ಒಬ್ಬರು ಅಥವಾ ಇಬ್ಬರು ಶಿಕ್ಷಕರನ್ನು ಒಂದೊಂದು ಶಾಲೆಯಿಂದ ಹೆಚ್ಚುವರಿಯೆಂದು ಪರಿಗಣಿಸಿ ತೆರವುಗೊಳಿಸಿದರೆ, ಮುಂದಿನ 10 ವರ್ಷದಲ್ಲಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಂತಾಗುತ್ತದೆ. ಶಿಕ್ಷಕರ ಸಂಖ್ಯೆ ಕಡಿಮೆ ಇರುವ ಕಾರಣ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದು, ಇನ್ನೂ ಹಲವು ಘಟಾನುಘಟಿ ಸದಸ್ಯರು ಪರಿಷತ್ತಿನಲ್ಲಿದ್ದಾರೆ. ಕಲಾಪದ ವೇಳೆ ಬಾರೀ ಪ್ರಮಾಣದ ಚರ್ಚೆ ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಆದರೂ ಸರಕಾರಿ ಶಾಲೆಗಳನ್ನು ಚೇತರಿಸಿಕೊಳ್ಳಲು ಸರಕಾರವೇ ಬಿಡುತ್ತಿಲ್ಲ. ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಸರಕಾರ ಬಿಡುಗಡೆ ಮಾಡಬೇಕು. ನೆನಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿಗೆ ತಕ್ಷಣ ಮುಂದಾಗಬೇಕು. ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚಾಗಿದ್ದರೂ, ಹೆಚ್ಚುವರಿ ಎಂದು ಪರಿಗಣಿಸಿ ತೆರವುಗೊಳಿಸುವ ಪ್ರಕ್ರಿಯೆಯನ್ನು ಸರಕಾರ ಕೈ ಬಿಡಬೇಕು. ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ಕೈಬಿಟ್ಟು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸರಕಾರ ಇಚ್ಛಾಶಕ್ತಿ ಬೆಳೆಸಿಕೊಳ್ಳಬೇಕು.  ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X