Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ತಳಿ ದನಗಳ ಹಾಲು ಹಾನಿಕರ, ದೇಸಿ...

ವಿದೇಶಿ ತಳಿ ದನಗಳ ಹಾಲು ಹಾನಿಕರ, ದೇಸಿ ಗೋವುಗಳ ಹಾಲನ್ನೇ ಸೇವಿಸಿ ಎಂದ ಹಿಮಾಚಲ ರಾಜ್ಯಪಾಲ !

ವಾರ್ತಾಭಾರತಿವಾರ್ತಾಭಾರತಿ27 Sept 2018 6:32 PM IST
share
ವಿದೇಶಿ ತಳಿ ದನಗಳ ಹಾಲು ಹಾನಿಕರ, ದೇಸಿ ಗೋವುಗಳ ಹಾಲನ್ನೇ ಸೇವಿಸಿ ಎಂದ ಹಿಮಾಚಲ ರಾಜ್ಯಪಾಲ !

ಗೋರಖಪುರ್, ಸೆ.27: ವಿದೇಶಿ ತಳಿಯ ದನಗಳಾದ ಹೋಲ್‍ಸ್ಟೀನ್ ಫ್ರೀಸಿಯನ್ ಹಾಗೂ ಜೆರ್ಸಿ ಇವುಗಳ ಹಾಲು ಮನುಷ್ಯರಿಗೆ ಹಾನಿಕರ ಹಾಗೂ ಅವುಗಳ ಸೇವನೆಯಿಂದ ಜನರು ಆಕ್ರಮಣಕಾರಿಯಾಗುತ್ತಾರಲ್ಲದೆ  ರಕ್ತದೊತ್ತಡವೂ ಏರುತ್ತದೆ ಎಂದು ಹಿಮಾಚಲ ಪ್ರದೇಶ ರಾಜ್ಯಪಾಲ ಆಚಾರ್ಯ ದೇವ ವೃತ ಹೇಳಿ ಅಚ್ಚರಿ ಮೂಡಿಸಿದ್ದಾರೆ.

'ಸನಾತನ ಹಿಂದು ಧರ್ಮದಲ್ಲಿ ಗೋವುಗಳ ಮಹತ್ವ' ಎಂಬ ಬಗ್ಗೆ  ಗೋರಖನಾಥ ದೇವಳದಲ್ಲಿ ಮಾತನಾಡಿದ ರಾಜ್ಯಪಾಲರು  ದೇಸಿ ಗೋವುಗಳ ಹಾಲನ್ನು ಉತ್ತಮ ಆರೋಗ್ಯಕ್ಕಾಗಿ ಸೇವಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಗೋರಖನಾಥ ದೇವಾಲಯದ ಮಾಜಿ ಮುಖ್ಯ ಅರ್ಚಕರಾದ ಮಹಂತ್ ದಿಗ್ವಿಜಯನಾಥ್ ಹಾಗೂ ಮಹಂತ್ ಅವೈದ್ಯನಾಥ್ ಅವರ ವರ್ಧಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ದೇವಳದ ಮುಖ್ಯ ಅರ್ಚಕರಾಗಿರುವ ಮುಖ್ಯಮಂತ್ರಿ ಆದಿತ್ಯನಾಥ್ ಕೂಡ ಈ ಸಂದರ್ಭ ಉಪಸ್ಥಿತರಿದ್ದರು.

ತಮ್ಮ ಹುಟ್ಟೂರಾದ ಹರ್ಯಾಣದ ಕುರುಕ್ಷೇತ್ರದ ಗ್ರಾಮದಲ್ಲಿನ ತಮ್ಮ 200 ಎಕರೆ ತೋಟದಲ್ಲಿ 300ಕ್ಕೂ ಅಧಿಕ ದನಗಳನ್ನು ಹೊಂದಿರುವ  ರಾಜ್ಯಪಾಲರು, ಗೋಮೂತ್ರ ಹಾಗೂ ಸೆಗಣಿಯಿಂದ  ತಯಾರಿಸಲು ಸಾಧ್ಯವಿರುವ ಸಾವಯವ ರಸಗೊಬ್ಬರ 'ಜೀವ್ ಅಮೃತ್' ಬಗ್ಗೆ ಮಾತನಾಡಿದರು. ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚುವುದು ಎಂದು ಅವರು ಹೇಳಿದರು.

ಒಂದು ದೇಸಿ ದನದಿಂದ 30 ಎಕರೆ ಪ್ರದೇಶಕ್ಕೆ ಸಾಕಾಗುವಷ್ಟ ಜೀವ ಅಮೃತ್ ತಯಾರಿಸಬಹುದಾದರೆ,  ಒಂದು ಎಕರೆ ಭೂಮಿಗೆ ಅಗತ್ಯವಿರು ರಸಗೊಬ್ಬರ ತಯಾರಿಸಲು 20 ವಿದೇಶಿ ತಳಿ ದನಗಳು ಅಗತ್ಯವಿದೆ ಎಂದು ಅವರು ಹೇಳಿದರು. ದೇಸಿ ದನದ ಸೆಗಣಿಯ ಒಂದು ಗ್ರಾಂ ಅಂಶದಲ್ಲಿ  ಎರಡು ಲಕ್ಷ ಕೋಟಿಯಿಂದ ಮೂರು ಲಕ್ಷ ಕೋಟಿ ಸೂಕ್ಷ್ಮಾಣು ಜೀವಿಗಳಿದ್ದು ಇವುಗಳು ಮಣ್ಣಿನ ಫಲವತ್ತತೆ ಹೆಚ್ಚಿಸುವ ಸಾಮಥ್ರ್ಯ ಹೊಂದಿವೆ. ಆದರೆ ವಿದೇಶಿ ತಳಿ ದನಗಳ ಒಂದು ಗ್ರಾಂ ಸೆಗಣಿಯಲ್ಲಿ ಕೇವಲ 60 ಲಕ್ಷದಿಂದ 70 ಲಕ್ಷ ಸೂಕ್ಷ್ಮಾಣು ಜೀವಿಗಳಿರುತ್ತವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X