ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು, ಸೆ.28: ರೌಡಿ ಪಟ್ಟಿಯಲ್ಲಿದ್ದ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸುಬ್ರಹ್ಮಣ್ಯಪುರ ಸಮೀಪದ ವಸಂತಪುರದ ಯಾದಾಳಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಸುಶಾಂತ್ ಯಾನೆ ಪೇಯಿ ಕೊಲೆಯಾದ ರೌಡಿಶೀಟರ್ ಎಂದು ತಿಳಿದುಬಂದಿದೆ.
ಸುಬ್ರಹ್ಮಣ್ಯಪುರ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದ ಈತನ ವಿರುದ್ಧ ಕೊಲೆಯತ್ನ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿತ್ತು. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಕೈಗೊಂಡಿದ್ದಾರೆ.
Next Story





