Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಗಳ ನಡುವೆ ಸ್ಪರ್ಧೆಯಿಲ್ಲ: ಮುಹಮ್ಮದ್...

ಧರ್ಮಗಳ ನಡುವೆ ಸ್ಪರ್ಧೆಯಿಲ್ಲ: ಮುಹಮ್ಮದ್ ಕುಂಞಿ

ಹೈಲ್ಯಾಂಡ್ ಇಸ್ಲಾಮಿಕ್ ಫೋರಂನಿಂದ ‘ಈದ್ ಸೌಹಾರ್ದ ಕೂಟ’

ವಾರ್ತಾಭಾರತಿವಾರ್ತಾಭಾರತಿ28 Sept 2018 7:24 PM IST
share
ಧರ್ಮಗಳ ನಡುವೆ ಸ್ಪರ್ಧೆಯಿಲ್ಲ: ಮುಹಮ್ಮದ್ ಕುಂಞಿ

ಮಂಗಳೂರು, ಸೆ.28: ಧರ್ಮವನ್ನು ಪಾಲಿಸದವರಿಂದಲೇ ಸಮಸ್ಯೆಗಳು ಹೆಚ್ಚುತ್ತಿದ್ದು, ಧರ್ಮಗಳ ನಡುವೆ ಯಾವುದೇ ಸ್ಪರ್ಧೆಯಿಲ್ಲ ಎಂದು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ವಾಸ್‌ಲೇನ್‌ನ ಮಸ್ಜಿದ್ ಉಲ್-ಎಹ್ಸಾನ್‌ನಲ್ಲಿ ಹೈಲ್ಯಾಂಡ್ ಇಸ್ಲಾಮಿಕ್ ಫೋರಂ ಮತ್ತು ಹೈಲ್ಯಾಂಡ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಸೆಂಟರ್‌ಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಈದ್ ಸೌಹಾರ್ದ ಕೂಟ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.

ಹಿಂದೂಗಳು ನಿಷ್ಠೆಯಿಂದ ಹಿಂದೂ ಧರ್ಮವನ್ನು ಪಾಲಿಸಿದರೆ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಹಾಗೆಯೇ ಮುಸ್ಲಿಯರು ಇಸ್ಲಾಮ್‌ನ್ನು ಪಾಲಿಸಿ ಬದುಕಿದರೆ ಹಿಂದೂಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಕ್ರೈಸ್ತರು ಪ್ರಾರ್ಥಿಸಿದರೆ ಹಿಂದೂಗಳು ಹಾಗೂ ಮುಸ್ಲಿಮರಿಗೆ ನಷ್ಟ, ಶಾಂತಿ ಭಂಗವಾಗುವುದಿಲ್ಲ ಎಂದು ಹೇಳಿದರು.

ಜಗತ್ತಿನ ಯಾವುದೇ ಧರ್ಮದ ತತ್ವ, ಸಿದ್ಧಾಂತ, ಮೌಲ್ಯಗಳನ್ನು ಪಾಲಿಸಿದರೂ ಯಾರೇ ಅನುಸರಿಸಿದರೂ ಇನ್ನೊಬ್ಬರಿಗೆ ತೊಂದರೆ ಆಗುವುದಿಲ್ಲ. ಆದರೆ ಕೆಲವು ಧರ್ಮ, ತತ್ವ, ಸಿದ್ಧಾಂತಗಳನ್ನು ಅಧ್ಯಯನ ಮಾಡದೇ ಧರ್ಮ ರಕ್ಷಕರಂತೆ ವರ್ತಿಸುತ್ತಾರೆ. ಇಂತಹ ನಕಾರಾತ್ಮಕ ಬೆಳವಣಿಗೆಗಳು ಕ್ಷೀಣಿಸಬೇಕು. ಸೌಹಾರ್ದ ಹೆಚ್ಚಬೇಕು ಎಂದು ತಿಳಿಸಿದರು.

ಎಲ್ಲ ಧರ್ಮದವರು ಮುಕ್ತವಾಗಿ ಬೆರೆಯಬೇಕು. ವಿಭಜನೆಯ ಸಿದ್ಧಾಂತಗಳನ್ನು ಆರಾಧಿಸುವ ಸಂದರ್ಭದಲ್ಲಿ ಮನಸುಗಳನ್ನು ಬೆಸೆಯುವ ಇಂತಹ ಸೌಹಾರ್ದ ಕೂಟಗಳ ಆಯೋಜನೆ ಹೆಚ್ಚಾಗಬೇಕು. ಜನರ ನಡುವೆ ಪೈಶಾಚಿಕತೆ ಉಲ್ಬಣಿಸುತ್ತಿದೆ. ಧರ್ಮಗಳ ನಡುವೆ ಒಗ್ಗಟ್ಟು ಬೆಳೆಯಬೇಕು. ಮಾನವರು ವಿನಯಶೀಲರಾಗಬೇಕು. ಸಹೋದರತೆಯನ್ನು ಎಲ್ಲ ಧರ್ಮಗಳು ಹೇಳಿ ಕೊಟ್ಟಿವೆ. ಬಸವಣ್ಣ, ಸ್ವಾಮಿ ವಿವೇಕಾನಂದ, ನಾರಾಯಣ ಗುರುಗಳಂತಹವರ ತತ್ವ, ಸಿದ್ಧಾಂತಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನಪಾ ಸದಸ್ಯರಾದ ಅಬ್ದುಲ್ ರವೂಫ್, ನವೀನ್ ಡಿಸೋಜ, ಹೈಲ್ಯಾಂಡ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಸೆಂಟರ್‌ನ ಚೇರ್‌ ಮ್ಯಾನ್ ಅಹ್ಮದ್ ಮೊಹಿಯುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರಂಭದಲ್ಲಿ ಹೈಲ್ಯಾಂಡ್ ಇಸ್ಲಾಮಿಕ್ ಫೋರಂನ ಅಧ್ಯಕ್ಷ ನಾಝಿಮ್ ಎಸ್.ಎಸ್., ಎ.ಕೆ. ಗ್ರೂಪ್‌ನ ಚೇರ್‌ ಮ್ಯಾನ್ ಎಂ.ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೆಹಫೂಝ್ ದುಆಗೈದರು. ಹೈಲ್ಯಾಂಡ್ ಇಸ್ಲಾಮಿಕ್ ಫೋರಂನ ಸದಸ್ಯ ಮುಕ್ಸಿದ್ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ರಿಝ್ವಾನ್ ಸ್ವಾಗತಿಸಿದರು. ಸಾಜಿದ್ ಎ.ಕೆ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X