Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಿಗಡ ಎನ್‌ಕೌಂಟರ್: ಹತ ವ್ಯಕ್ತಿಯ...

ಅಲಿಗಡ ಎನ್‌ಕೌಂಟರ್: ಹತ ವ್ಯಕ್ತಿಯ ಕುಟುಂಬ ಸದಸ್ಯರ ‘ಅಪಹರಣ’ಕ್ಕಾಗಿ 10 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Sept 2018 8:26 PM IST
share
ಅಲಿಗಡ ಎನ್‌ಕೌಂಟರ್: ಹತ ವ್ಯಕ್ತಿಯ ಕುಟುಂಬ ಸದಸ್ಯರ ‘ಅಪಹರಣ’ಕ್ಕಾಗಿ 10 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಅಲಿಗಡ(ಉ.ಪ್ರ),ಸೆ.28: ಇಬ್ಬರು ಶಂಕಿತ ಕ್ರಿಮಿನಲ್‌ಗಳನ್ನು ನಕಲಿ ಎನ್‌ಕೌಂಟರ್ ನಡೆಸಿ ಕೊಲ್ಲಲಾಗಿದೆ ಎಂಬ ವಿವಾದವು ಹೊಸ ತಿರುವನ್ನು ಪಡೆದುಕೊಂಡಿದೆ. ಹತ ವ್ಯಕ್ತಿಗಳಲ್ಲೋರ್ವನ ಕುಟುಂಬ ಸದಸ್ಯರನ್ನು ಅಪಹರಿಸಿರುವ ಆರೋಪದಲ್ಲಿ ಅಲಿಗಡ ಮುಸ್ಲಿಂ ವಿವಿ(ಅಮು) ಮತ್ತು ಜೆಎನ್‌ಯು ವಿದ್ಯಾರ್ಥಿ ನಾಯಕರು ಸೇರಿದಂತೆ ‘ಯುನೈಟೆಡ್ ಅಗೇಸ್ಟ್ ಹೇಟ್’ ವೇದಿಕೆಯ 10 ಕಾರ್ಯಕರ್ತರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಮ್ಮ ತಲೆಗಳ ಮೇಲೆ ತಲಾ 25,000 ರೂ.ಬಹುಮಾನವನ್ನು ಹೊತ್ತಿದ್ದ ಶಂಕಿತ ಕ್ರಿಮಿನಲ್‌ಗಳಾದ ಮುಸ್ತಕೀಮ್(22) ಮತ್ತು ನೌಷಾದ್ ಅವರು ಸೆ.20ರಂದು ಇಲ್ಲಿಯ ಹರ್ದುವಾಗಂಜ್ ಪ್ರದೇಶದಲ್ಲಿ ಪೊಲೀಸರು ನಡೆಸಿದ್ದ ಎನಕೌಂಟರ್‌ನಲ್ಲಿ ಬಲಿಯಾಗಿದ್ದರು.

ಮುಸ್ತಕೀಮ್‌ನ ಪತ್ನಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ಗುರುವಾರ ಇಲ್ಲಿಯ ಅತ್ರ್‌ಲಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು. ಮುಸ್ತಕೀಮ್‌ನ ತಾಯಿ ಮತ್ತು ಅಜ್ಜಿಯನ್ನು ಅಪಹರಿಸಿರುವ ಆರೋಪವನ್ನು ಕಾರ್ಯಕರ್ತರ ವಿರುದ್ಧ ಹೊರಿಸಲಾಗಿದೆ.

ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಕಾರ್ಯಕರ್ತರ ಗುಂಪಿನಲ್ಲಿದ್ದರಾದರೂ ದೂರಿನಲ್ಲಿ ಅವರ ಹೆಸರನ್ನು ಸೇರಿಸಲಾಗಿಲ್ಲ. ‘ಅಮು’ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಮಸ್ಖೂರ್ ಉಸ್ಮಾನ್ ಮತ್ತು ಫೈಝುಲ್ ಹಸನ್ ಆರೋಪಿಗಳಲ್ಲಿ ಸೇರಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಸನ್,ಗುರುವಾರ ಕಾರ್ಯಕರ್ತರು ಮುಸ್ತಕೀಮ್ ಮನೆಗೆ ತೆರಳಿ ನ್ಯಾಯಕ್ಕಾಗಿ ಹೋರಾಟದಲ್ಲಿ ಸಾಧ್ಯವಿರುವ ಎಲ್ಲ ಕಾನೂನು ನೆರವನ್ನು ಒದಗಿಸುವುದಾಗಿ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದರು ಎಂದು ತಿಳಿಸಿದರು.

ಗುಂಪು ಬಳಿಕ ಅತ್ರ್‌ಲಿ ಪೊಲೀಸ್ ಠಾಣೆಗೆ ತೆರಳಿ ಮುಸ್ತಕೀನ್ ಕುಟುಂಬದ ಸದಸ್ಯರಿಗೆ ಪೊಲೀಸರಿಂದ ಕಿರುಕುಳವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಿತ್ತು. ಈ ವೇಳೆ ಕೆಲವು ಸ್ಥಳೀಯ ಹಿಂದುತ್ವ ಗುಂಪುಗಳ ನಾಯಕರು ಠಾಣೆಗೆ ಆಗಮಿಸಿದ್ದು,ಅಲ್ಲಿಂದ ತೆರಳುವಂತೆ ಗುಂಪನ್ನು ಗದರಿಸಿದ್ದರು. ಇದು ವ್ಯಾಗ್ಯುದ್ಧಕ್ಕೆ ಕಾರಣವಾಗಿದ್ದು,ಪೊಲೀಸರು ಮಧ್ಯೆ ಪ್ರವೇಶಿಸುವಂತಾಗಿತ್ತು. ಬಳಿಕ ಮುಸ್ತಕೀನ್‌ನ ತಾಯಿ ಶಬಾನಾ ಮತ್ತು ಅಜ್ಜಿ ರಫೀಖುನಾ ಅವರು ದಿಲ್ಲಿಗೆ ತೆರಳಲಿದ್ದ ಗುಂಪಿನ ಜೊತೆ ಹೋಗಿದ್ದರು.

ಘಟನೆ ಹಿನ್ನೆಲೆ:

ಬೈಕಿನಲ್ಲಿ ಸಂಚರಿಸುತ್ತಿದ್ದ ಮುಸ್ತಕೀನ್ ಮತ್ತು ನೌಷಾದ್‌ರನ್ನು ನಿಲ್ಲುವಂತೆ ಪೊಲೀಸರು ಸೂಚಿಸಿದ್ದರು. ಆದರೆ ಅವರು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದರು. ಪೊಲೀಸರು ಪ್ರತಿದಾಳಿ ನಡೆಸಿದ್ದು,ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಈ ತಿಂಗಳ ಪೂರ್ವಾರ್ಧದಲ್ಲಿ ನಡೆದಿದ್ದ ಇಬ್ಬರು ಸಾಧುಗಳ ಹತ್ಯೆಗಳಲ್ಲಿ ತಾವು ಭಾಗಿಯಾಗಿದ್ದನ್ನು ಒಪ್ಪಿಕೊಂಡಿದ್ದರು ಎಂದು ಎಸ್‌ಎಸ್‌ಪಿ ಅಜಯ ಸಾಹನಿ ಹೇಳಿದ್ದರು. ಪೊಲೀಸರ ಹೇಳಿಕೆಯನ್ನು ತಿರಸ್ಕರಿಸಿರುವ ನೌಷಾದ್ ತಾಯಿ ಶಹೀನ್,ಅವರಿಬ್ಬರೂ ಯಾವುದೇ ಕ್ರಿಮಿನಲ್ ಇತಿಹಾಸ ಹೊಂದಿರಲಿಲ್ಲ ಎಂದಿದ್ದಾರೆ.

ಇದೊಂದು ನಕಲಿ ಎನ್‌ಕೌಂಟರ್ ಆಗಿದೆ ಎಂದು ಆರೋಪಿಸಿದ್ದ ಬಿಎಸ್‌ಪಿ ಮತ್ತು ಕಾಂಗ್ರೆಸ್,ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X