ದಾವಣಗೆರೆ: ರಸ್ತೆ ಅಪಘಾತಕ್ಕೆ ಮಗು ಬಲಿ; ಮೂವರಿಗೆ ಗಾಯ

ದಾವಣಗೆರೆ,ಸೆ.28: ಹಂದಿಗೆ ಢಿಕ್ಕಿ ಹೊಡೆದು ಆಟೋ ಪಲ್ಟಿಯಾದ ಪರಿಣಾಮ ನಾಲ್ಕು ವರ್ಷದ ಮಗು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ನಡೆದಿದೆ.
ರೂಪಾ(4) ಸಾವನ್ನಪ್ಪಿದ ಮಗು. ಆಟೋದಲ್ಲಿದ್ದ ಮೂರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರೆಲ್ಲರು ಆಟೋದಲ್ಲಿ ಸಂಬಂಧಿಕರ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ.
ನಗರದಲ್ಲಿ ಹಂದಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ ಮಹಾನಗರ ಪಾಲಿಕೆ ಮಾತ್ರ ಯಾವುದೇ ಕ್ರಮ ವಹಿಸದಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.
Next Story





