Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಿಕ್ಷಾಗಳಿಗೆ ಕಲರ್ ಕೋಡಿಂಗ್: ಉಡುಪಿ...

ರಿಕ್ಷಾಗಳಿಗೆ ಕಲರ್ ಕೋಡಿಂಗ್: ಉಡುಪಿ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆ

ವಾರ್ತಾಭಾರತಿವಾರ್ತಾಭಾರತಿ29 Sept 2018 8:05 PM IST
share
ರಿಕ್ಷಾಗಳಿಗೆ ಕಲರ್ ಕೋಡಿಂಗ್: ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಸೆ.29: ಜಿಲ್ಲೆಯಲ್ಲಿರುವ ಆಟೋರಿಕ್ಷಾಗಳಿಗೆ ನಗರ ಪ್ರದೇಶದಲ್ಲಿ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತೆ ಪ್ರತ್ಯೇಕ ಕಲರ್ ಕೋಡಿಂಗ್ ಮಾಡುವಂತೆ ಜಿಲ್ಲಾ ಸಾರಿಗೆ ಅಧಿಕಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.

ಗ್ರಾಮಾಂತರ ಪ್ರದೇಶದ ಅನುಮತಿ ಪಡೆದ ಆಟೋರಿಕ್ಷಾಗಳು ನಗರ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದರಿಂದ ನಗರ ಪ್ರದೇಶದ ರಿಕ್ಷಾ ಚಾಲಕರಿಗೆ ಸಮಸ್ಯೆಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಚಂದ್ರಶೇಖರ್ ಎಂಬವರು ಮನವಿ ನೀಡಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ, ಇದಕ್ಕಾಗಿ ಆಟೋರಿಕ್ಷಾಗಳ ಮೇಲೆ ವಲಯ 1 ಮತ್ತು ವಲಯ 2 ಎಂದು ನಮೂದಿಸಿ, ವಲಯ 1ರ ಆಟೋಗಳು ಉಡುಪಿ ನಗರ ಪ್ರದೇಶದಲ್ಲಿ ಮತ್ತು ವಲಯ 2ರ ರಿಕ್ಷಾಗಳು ಉಡುಪಿ ನಗರದ ಹೊರಗಡೆ ಸಂಚರಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ವಲಯ 1 ಮತ್ತು ವಲಯ2 ಆಟೋಗಳ ಕುರಿತು ಮಾಹಿತಿಯನ್ನು ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು ದಾಖಲಿಸಿಕೊಂಡು, ವಲಯ ಮೀರಿ ಸಂಚರಿಸುವ ಕುರಿತು ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇಯರ್ ಫೋನ್, ಮೊಬೈಲ್: ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಕಿವಿಗೆ ಇಯರ್‌ಫೋನ್ ಹಾಕಿಕೊಂಡು ಮತ್ತು ಹೆಲ್ಮೆಟ್ ಒಳಗೆ ಮೊಬೈಲ್ ಇಟ್ಟುಕೊಂಡು ಸಂಚರಿಸುತ್ತಿದ್ದು, ಹಿಂದಿನಿಂದ ಬರುವ ವಾಹನಗಳು ಹಾರ್ನ್ ಮಾಡಿದರೂ ಸಹ ಸೈಡ್ ನೀಡುವುದಿಲ್ಲ. ಅಲ್ಲದೇ ತಕ್ಷಣ ಬ್ರೇಕ್ ಹಾಕುವುದರಿಂದ ಅಪಘಾತಗಳು ಸಂವಿಸುತ್ತಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಮಣಿಪಾಲದ ಸುರೇಂದ್ರ ನಾಯಕ್ ಕೋರಿದರು.

ಇದರ ಕುರಿತು ಪೊಲೀಸ್ ಮತ್ತು ಸಾರಿಗೆ ಇಲಾಖೆಗಳು ವಿಶೇಷ ತನಿಖಾ ತಂಡಗಳನ್ನು ರಚಿಸಿಕೊಂಡು, ಅಕ್ಟೋಬರ್‌ ತಿಂಗಳು ಪೂರ್ತಿ ವಿಶೇಷ ಅಭಿಯಾನ ಕೈಗೊಂಡು ಇಂತಹ ವಾಹನ ಸವಾರರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಬಾಡಿಗೆಗೆ ಬೈಕ್, ಕಾರು: ಮಣಿಪಾಲದಲ್ಲಿ ಖಾಸಗಿ ಕಂಪೆನಿಗಳು ಬಾಡಿಗೆಗೆ ಬೈಕ್ ಮತ್ತು ಕಾರುಗಳನ್ನು ನೀಡುತ್ತಿದ್ದು, ಇದರಿಂದ ರಿಕ್ಷಾ ಚಾಲಕರಿಗೆ ತೊಂದರೆ ಯಾಗಿದೆ. ಅಲ್ಲದೆ ಈ ವಾಹನಗಳ ಚಾಲಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸದೆ ಇರುವುದರಿಂದ ಅಪಘಾತ ಪ್ರಕರಣಗಳು ಸಹ ಸಂಭವಿಸುತ್ತಿವೆ. ಇವುಗಳಿಗೆ ಕಡಿವಾಣ ಹಾಕುವಂತೆ ಮತ್ತು ನಿಷೇಧಿಸುವಂತೆ ಮಣಿಪಾಲರಿಕ್ಷಾ ಚಾಲಕರ ಸಂಘದ ಸುಬ್ರಾಯ ಕೋರಿದ್ದು, ಕಾನೂನಾತ್ಮಕವಾಗಿ ಇದನ್ನು ತಡೆಯಲು ಸಾಧ್ಯವಿಲ್ಲ. ನಿಷೇಧ ಮಾಡುವ ಕುರಿತಂತೆ ಮನವಿ ಸಲ್ಲಿಸಿದರೆ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಎರ್ಮಾಳ್ ದೇವಸ್ಥಾನದ ಬಳಿ ಎಕ್ಸ್‌ಪ್ರೆಸ್ ಬಸ್‌ಗಳಿಗೆ ನಿಲುಗಡೆ ನೀಡು ವಂತೆ, ಶೆಟ್ಟಿಬೆಟ್ಟು ಶಾಲೆ ಹತ್ತಿರ ಬರಲು ಬಸ್ ವ್ಯವಸ್ಥೆ ಕಲ್ಪಿಸುವಂತೆ, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಬಸ್ ಹತ್ತಲು ಅನುಕೂಲವಾಗುವಂತೆ ಮೆಟ್ಟಿಲುಗಳ ಎತ್ತರ ತಗ್ಗಿಸಲು ಕುರಿತಂತೆ, ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ನ್ನು ತುಂಡರಿಸಿ ವಾಹನಗಳು ಚಲಿಸುವ ಕುರಿತು ಹಾಗೂ ಭೂಸ್ವಾಧೀನ ಪರಿಹಾರ ಪಡೆದ ನಂತರವೂ ಕಟ್ಟಡಗಳನ್ನು ಸ್ಥಳಾಂತರ ಮಾಡದೇ ಇರುವ ಬಗ್ಗೆ ಸಾರ್ವಜನಿಕರು ದೂರು ಹಾಗೂ ಮನವಿಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಎಎಸ್ಪಿ ಕುಮಾರಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವರ್ಣೇಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X