ಉಡುಪಿ, ಸೆ.29: 20ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮ ಅ.1ರಿಂದ ಡಿ.31ರವರೆಗೆ ನಡೆಯಲಿದ್ದು, ಉಡುಪಿ ಜಿಲ್ಲೆಯಾದ್ಯಂತ ಜಾನುವಾರು ಎಣಿಕೆದಾರರು /ಮೇಲ್ವಿಚಾರಕರು ಮನೆಗಳಿಗೆ ಬಂದಾಗ ಜಿಲ್ಲೆಯ ಎಲ್ಲಾ ನಾಗರಿಕರು ಜಾನುವಾರುಗಳ ಬಗ್ಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.